ಮಂಜುಳಾ 
ಶಿವಮೊಗ್ಗ

ಕರ್ತವ್ಯದ ವೇಳೆ ಬಿಎಲ್‌ಒ ಸಾವು | Anganwadi worker died

ಶಿವಕುಮಾರ ಎಸ್.ಪಿ.
ಭದ್ರಾವತಿ: ತಾಲೂಕಿನ ಕಲ್ಲಾಪುರ ಗ್ರಾಮದ ಅಂಗನವಾಡಿ ಕಾರ್ಯಕರ್ತೆ ಮಂಜುಳಾ (52) ಎಸ್‌ಐಆರ್ ಕರ್ತವ್ಯ ನಿರ್ವಹಿಸುತ್ತಿರುವಾಗಲೇ ಸೋಮವಾರ ಕುಸಿದುಬಿದ್ದು ಮೃತಪಟ್ಟಿದ್ದಾರೆ.
ಮಂಜುಳಾ ಅವರು ಶಿವಮೊಗ್ಗ ಗ್ರಾಮಾಂತರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕಲ್ಲಾಪುರ ಭಾಗದಲ್ಲಿ ಬಿಎಲ್‌ಒ ಆಗಿ ಕಾರ್ಯನಿರ್ವಹಿಸುತ್ತಿದ್ದರು. ಮನೆಮನೆಗೆ ಭೇಟಿ ನೀಡಿ ಎಸ್‌ಐಆರ್ ಫಾರ್ಮ್‌ಗಳನ್ನು ಕೊಡಲು ಅಂಗನವಾಡಿ ಕೇಂದ್ರದಲ್ಲಿ ಅರ್ಜಿಗಳನ್ನು ಜೋಡಿಸಿಕೊಂಡು ಹೊರಡಲು ಸಿದ್ಧವಾಗುತ್ತಿದ್ದ ವೇಳೆ ದೇಹದಲ್ಲಿ ಸುಸ್ತು ಕಾಣಿಸಿಕೊಂಡಿದೆ. ಪಕ್ಕದಲ್ಲಿಯೇ ಇದ್ದ ಅಂಗನವಾಡಿ ಸಹಾಯಕಿಯನ್ನು ಕರೆದು ನನಗೆ ಸುಸ್ತಾಗುತ್ತಿದೆ ಎಂದು ಹೇಳಿ ವಿಶ್ರಾಂತಿ ಪಡೆಯುತ್ತಿದ್ದಾಗ ಅಸುನೀಗಿದ್ದಾರೆ.
ಮೃತರಿಗೆ ಪತಿ, ಪುತ್ರ ಇದ್ದಾರೆ. ಗ್ರಾಮದ ಅಂಗನವಾಡಿ ಕೇಂದ್ರದಲ್ಲಿ ಕಳೆದ 30 ವರ್ಷಗಳಿಂದ ಕಾರ್ಯಕರ್ತೆಯಾಗಿ ಕಾರ್ಯನಿರ್ವಹಿಸುತ್ತಿದ್ದರು. ತಹಸೀಲ್ದಾರ್ ಪ್ರದೀಪ್ ದೇವಗಿರಿ, ತಾಲೂಕು ಆರೋಗ್ಯಾಧಿಕಾರಿ ಡಾ. ಎಂ.ವಿ.ಅಶೋಕ್ ಆಸ್ಪತ್ರೆಗೆ ಭೇಟಿ ನೀಡಿದ್ದರು.