ಹೊಳೆಹೊನ್ನೂರು ಸಮೀಪದ ಸನ್ಯಾಸಿಕೋಡಮಗ್ಗೆ ಗ್ರಾಮದಲ್ಲಿ ರಕ್ತದಾನ ಶಿಬಿರ ನಡೆಸಲಾಯಿತು. ಸಿ.ಪ್ರಕಾಶ್, ಕೆ.ಪ್ರಶಾಂತ್, ಡಾ. ಹಂಸವೇಣಿ, ಶರತ್ಚಂದ್ರ, ಎಸ್.ಆರ್.ಸತೀಶ್ ಇತರರಿದ್ದರು.
ಹೊಳೆಹೊನ್ನೂರು: ನಿಯಮಿತವಾಗಿ ರಕ್ತದಾನ ಮಾಡುವುದರಿಂದ ಹೃದಯಾಘಾತ, ಪಾರ್ಶ್ವವಾಯು ಕಾಯಿಲೆ ಸಂಭವ ಕಡಿಮೆ ಆಗುತ್ತದೆ ಎಂದು ಸನ್ಯಾಸಿಕೋಡಮಗ್ಗೆ ಗ್ರಾಮದ ಲಯನ್ಸ್ ಕ್ಲಬ್ ಅಧ್ಯಕ್ಷ ಸಿ.ಪ್ರಕಾಶ್ ಹೇಳಿದರು.
ಸಮೀಪದ ಸನ್ಯಾಸಿಕೋಡಮಗ್ಗೆ ಗ್ರಾಮದಲ್ಲಿ ಲಯನ್ಸ್ ಕ್ಲಬ್ ಹಾಗೂ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದಿಂದ ಆಯೋಜಿಸಿದ್ದ ರಕ್ತದಾನ ಶಿಬಿರ ಉದ್ಘಾಟಿಸಿ ಮಾತನಾಡಿ, ರಕ್ತದಾನ ನಿಸ್ವಾರ್ಥ ಸೇವೆ. ವ್ಯಕ್ತಿಯ ಜೀವ ಉಳಿಸುವ ಸಾಮರ್ಥ್ಯ ಹೊಂದಿದೆ ಎಂದು ತಿಳಿಸಿದರು.
ಲಯನ್ಸ್ ಕ್ಲಬ್ ಮಾಜಿ ಅಧ್ಯಕ್ಷ ಕೆ.ಪ್ರಶಾಂತ್, ವಲಯ ಅಧ್ಯಕ್ಷ ಶರತ್ಚಂದ್ರ, ಎಪಿಎಂಸಿ ಮಾಜಿ ಅಧ್ಯಕ್ಷ ಎಸ್.ಆರ್.ಸತೀಶ್, ಗ್ರಾಪಂ ಮಾಜಿ ಅಧ್ಯಕ್ಷ ಬಿ.ಎಂ.ನಾಗೇಶಪ್ಪ, ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದ ಡಾ. ಹಂಸವೇಣಿ, ಪಿಡಿಒ ಸೈಯದ್ ಸೀಮಾ, ಗ್ರಾಪಂ ಸದಸ್ಯರು ಹಾಗೂ ಗ್ರಾಮಸ್ಥರು ಹಾಜರಿದ್ದರು.