ಸೊರಬದ ಆನವಟ್ಟಿ ಪಪಂ ವ್ಯಾಪ್ತಿ 1.02 ಕೋಟಿ ರೂ. ವೆಚ್ಚದ ಕಾಮಗಾರಿಗಳಿಗೆ ಸಚಿವ ಮಧು ಬಂಗಾರಪ್ಪ ಭೂಮಿಪೂಜೆ ನೆರವೇರಿಸಿದರು. ಕೆ.ಪುರಂದರ, ಕೆ.ಜಿ.ಶಶಿಧರ, ಕೆ.ಪಿ.ರುದ್ರಗೌಡ, ದಯಾನಂದ ಗೌಡ ಇತರರಿದ್ದರು.
ಸೊರಬ: ಮುಂದಿನ ವರ್ಷದಿಂದ ಕರ್ನಾಟಕ ಪಬ್ಲಿಕ್ ಶಾಲೆಗಳಿಗೆ ಸರ್ಕಾರಿ ಶಾಲಾ ವಾಹನ ನೀಡಲಿದ್ದೇವೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದರು.
ತಾಲೂಕಿನ ಆನವಟ್ಟಿ ಪಟ್ಟಣ ಪಂಚಾಯಿತಿ ವ್ಯಾಪ್ತಿ ಎಸ್ಎಫ್ಸಿ ವಿಶೇಷ ಅನುದಾನ, ಸ್ವಚ್ಛ ಭಾರತ್ ಮಿಷನ್ 2.0 ಯೋಜನೆಯಡಿ 1.02 ಕೋಟಿ ರೂ. ವೆಚ್ಚದ ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿಪೂಜೆ ನೆರವೇರಿಸಿ ಮಾತನಾಡಿದರು.
ಆನವಟ್ಟಿ ಪಟ್ಟಣ ಪಂಚಾಯಿತಿ ಎಸ್ಎಫ್ಸಿ ವಿಶೇಷ ಅನುದಾನದಡಿ ಕೆಪಿಎಸ್ ಶಾಲಾ ಆವರಣದಲ್ಲಿ 50 ಲ ರೂ. ವೆಚ್ಚದಲ್ಲಿ ರಂಗಮಂದಿರ ನಿರ್ಮಾಣ, 30 ಲ ರೂ. ವೆಚ್ಚದಲ್ಲಿ ಗ್ರಾಮದ ರಸ್ತೆ ಅಭಿವೃದ್ಧಿ ಕಾಮಗಾರಿ ಕೈಗೆತ್ತಿಕೊಳ್ಳಲಾಗುತ್ತಿದೆ. ಸ್ವಚ್ಛ ಭಾರತ್ ಮಿಷನ್ 2.0 ಯೋಜನೆಯಡಿ ಆನವಟ್ಟಿ ಸರ್ಕಾರಿ ಪ್ರಥಮದರ್ಜೆ ಕಾಲೇಜಿನ ಸಮೀಪ 22.50 ಲ ರೂ. ವೆಚ್ಚದಲ್ಲಿ ಸಮುದಾಯ ಶೌಚಗೃಹ 0ನಿರ್ಮಿಸಲಾಗುತ್ತಿದೆ ಎಂದು ತಿಳಿಸಿದರು.
ವಿದ್ಯಾರ್ಥಿಗಳೊಂದಿಗೆ ಸಂವಾದ: ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿ ಸಮಸ್ಯೆ ಹಾಗೂ ಬೇಡಿಕೆಗಳನ್ನು ಆಲಿಸಿದರು. ವಿದ್ಯಾರ್ಥಿಗಳು ಡೆಸ್ಕ್ ಸೌಲಭ್ಯ, ಶೌಚಗೃಹ, ಸ್ಯಾನಿಟರಿ ಪ್ಯಾಡ್ ಬರ್ನಿಂಗ್ ಮಿಷನ್, ಕ್ರೀಡಾಂಗಣದ ಆಧುನೀಕರಣ ಸೇರಿದಂತೆ ವಿವಿಧ ಬೇಡಿಕೆಗಳನ್ನು ಸಚಿವರ ಗಮನಕ್ಕೆ ತಂದರು. ವಿದ್ಯಾರ್ಥಿಗಳ ಮನವಿಗೆ ಸ್ಪಂದಿಸಿದ ಸಚಿವರು, ಮೂಲಸೌಕರ್ಯಕ್ಕೆ ಸಂಬಂಧಿಸಿದ ಬೇಡಿಕೆಗಳನ್ನು ಆದ್ಯತೆ ಮೇರೆಗೆ ಈಡೇರಿಸಲಾಗುವುದು.
ತಹಸೀಲ್ದಾರ್ ಕೆ.ಪುರಂದರ, ಇಒ ಕೆ.ಜಿ.ಶಶಿಧರ, ೇತ್ರ ಶಿಕ್ಷಣಾಧಿಕಾರಿ ಆರ್.ಪುಷ್ಪಾ, ಆನವಟ್ಟಿ ಪಪಂ ಮುಖ್ಯಾಧಿಕಾರಿ ಅಕ್ಷತಾ ಇದ್ದರು. ಆನವಟ್ಟಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸದಾನಂದ ಗೌಡ, ಡಿಸಿಸಿ ಬ್ಯಾಂಕ್ ನಿರ್ದೇಶಕ ಕೆ.ಪಿ.ರುದ್ರಗೌಡ, ಶಿಮುಲ್ ನಿರ್ದೇಶಕ ದಯಾನಂದ ಗೌಡ, ಜಿಪಂ ಮಾಜಿ ಸದಸ್ಯ ಶಿವಲಿಂಗೇಗೌಡ, ತಬಲಿ ಬಂಗಾರಪ್ಪ, ತಾಪಂ ಮಾಜಿ ಅಧ್ಯಕ್ಷ ಎಚ್.ಗಣಪತಿ, ಮಾಜಿ ಸದಸ್ಯ ಸುನಿಲ್ ಗೌಡ, ಹಿರಿಯಣ್ಣ, ಪ್ರಕಾಶ್, ಸಂಜೀವ್ ಹಾಜರಿದ್ದರು.