ಮಲೆನಾಡು ರೈತ ಹೋರಾಟ ಸಮಿತಿ ಸಂಚಾಲಕ ತೀ.ನ.ಶ್ರೀನಿವಾಸ್
- ಅಧ್ಯಯನ ಸಮಿತಿ ವರದಿ ನೀಡಿದರೂ ಕೈಗೊಂಡಿಲ್ಲ ಕ್ರಮ
- ಚುನಾವಣೆಗೂ ಮುನ್ನ ನೀಡಿದ್ದ ಭರವಸೆ ಇನ್ನೂ ಈಡೇರಿಲ್ಲ
- ಮಲೆನಾಡು ರೈತ ಹೋರಾಟ ಸಮಿತಿ ಸಂಚಾಲಕ ತೀ.ನ.ಶ್ರೀನಿವಾಸ್ ಅಸಮಾಧಾನ
ಶಿವಮೊಗ್ಗ: ಮಲೆನಾಡು ಜಿಲ್ಲೆಗಳಲ್ಲಿ ರೈತರ ಭೂಮಿ ಹಕ್ಕಿನ ಸಮಸ್ಯೆ(Study Committee Report) ಗಂಭೀರವಾಗಿದೆ. ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್ ನೇತೃತ್ವದಲ್ಲಿ ಕೂಡಲೇ ಸಭೆ ಕರೆಯಬೇಕು ಎಂದು ಮಲೆನಾಡು ರೈತ ಹೋರಾಟ ಸಮಿತಿ(Malenadu Raitha Horata Samiti) ಸಂಚಾಲಕ ತೀ.ನ.ಶ್ರೀನಿವಾಸ್ ಒತ್ತಾಯಿಸಿದರು.
ವಿಧಾನಸಭೆ ಚುನಾವಣೆ ಪೂರ್ವ ಡಿ.ಕೆ.ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷರಾಗಿದ್ದಾಗ ಮಲೆನಾಡಿನ ರೈತರ ಸಮಸ್ಯೆ ಬಗೆಹರಿಸಲು ಶಿವಮೊಗ್ಗ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಕೊಡುಗು ಜಿಲ್ಲೆಯ ಪ್ರತಿನಿಧಿಗಳನ್ನೊಳಗೊಂಡ ಅಧ್ಯಯನ ಸಮಿತಿ(Study Committee) ರಚನೆ ಮಾಡಿದ್ದರು. ಆ ಸಮಿತಿಯಲ್ಲಿ ನಾನೂ ಇದ್ದೆ. ಸಮಿತಿ ವರದಿ ನೀಡಿ ವರ್ಷ ಕಳೆದರೂ ಯಾವುದೇ ಸಮಸ್ಯೆ ಬಗೆಹರಿಸಿಲ್ಲ ಎಂದು ಗುರುವಾರ ಸುದ್ದಿಗೋಷ್ಠಿಯಲ್ಲಿ ಅಸಮಾಧಾನ ವ್ಯಕ್ತಪಡಿಸಿದರು.
2022ರ ನ.28ರಂದು ಮಧು ಬಂಗಾರಪ್ಪ ಶರಾವತಿ ಮುಳುಗಡೆ ಸಂತ್ರಸ್ತರಿಗೆ, ಅರಣ್ಯ ಭೂಮಿ ಸಾಗುವಳಿದಾರ(Forest land cultivator)ರಿಗೆ ಹಕ್ಕುಪತ್ರ ಕೊಡಬೇಕು ಎಂದು ಆಗ್ರಹಿಸಿ ಆಯನೂರಿನಿಂದ ಶಿವಮೊಗ್ಗದವರೆಗೆ ಪಾದಯಾತ್ರೆ ಮಾಡಿದ್ದರು. ಅದೇ ದಿನ ಸಂಜೆ ಜನಾಕ್ರೋಶ ಹೆಸರಿನಲ್ಲಿ ಸಮಾವೇಶ ನಡೆಸಿದ್ದರು. ಆಗ ಪ್ರತಿಪಕ್ಷದ ನಾಯಕರಾಗಿದ್ದ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷರಾಗಿದ್ದ ಡಿ.ಕೆ.ಶಿವಕುಮಾರ್ ಸಮಾವೇಶದಲ್ಲಿ ಪಾಲ್ಗೊಂಡು ಕಾಂಗ್ರೆಸ್ ಅಧಿಕಾರಕ್ಕೆ ಬಂದ ತಕ್ಷಣವೇ ಮಲೆನಾಡಿನ ರೈತರ ಸಮಸ್ಯೆ ಬಗೆಹರಿಸುತ್ತೇವೆ ಎಂದು ಭರವಸೆ ನೀಡಿದ್ದರು. ಆದರೆ ಸಿಎಂ ನೇತೃತ್ವದಲ್ಲಿ ಒಮ್ಮೆಯೂ ಸಭೆ ಕರೆದಿಲ್ಲ ಎಂದು ಕಿಡಿಕಾರಿದರು.
ಲಿಂಗನಮಕ್ಕಿ, ತುಂಗಾ, ಭದ್ರಾ, ಅಂಬ್ಲಿಗೊಳ ಜಲಾಶಯ(Ambligola Reservoir)ಗಳನ್ನು ಕಟ್ಟಲು ಭೂಮಿ ಬಿಟ್ಟುಕೊಟ್ಟವರಿಗೆ 1952, 1959, 1964ರಲ್ಲಿ ಬದಲಿ ಭೂಮಿಯನ್ನು ಕೆಲವರಿಗೆ ಆಗಿನ ಸರ್ಕಾರ ಮಂಜೂರು ಮಾಡಿತ್ತು. ಸುಪ್ರೀಂಕೋರ್ಟ್(Supreme Court) ರಾಜ್ಯ ಮತ್ತು ಕೇಂದ್ರ ಸರ್ಕಾರಗಳಿಗೆ ರೈತರಿಗೆ ನ್ಯಾಯ ಕೊಡಲು ಆದೇಶಿಸಿದೆ. ಅರಣ್ಯ ಭೂಮಿ ಸಾಗುವಳಿದಾರರಿಗೆ ಹಕ್ಕುಪತ್ರ ಕೊಡಲು ಆದೇಶಿಸಿದ್ದರೂ ಅವುಗಳನ್ನು ಕಸದ ಬುಟ್ಟಿಗೆ ಹಾಕಲಾಗಿದೆ ಎಂದು ದೂರಿದರು.
ಪ್ರಮುಖರಾದ ಅಶೋಕ್ ಜಂಬಳ್ಳಿ, ದಿನೇಶ್, ಕೃಷ್ಣಪ್ಪ, ನಾಗರಾಜ್, ಮಂಜಪ್ಪ, ಅಶೋಕ್, ಚಂದ್ರಶೇಖರ್, ದಯಾನಂದ್, ಪುಟ್ಟಸ್ವಾಮಿ, ಶೇಖರಪ್ಪ, ನಾರಾಯಣಪ್ಪ, ರವಿ, ನಾಗರಾಜ್, ಕೇಶವ್ ಸುದ್ದಿಗೋಷ್ಠಿಯಲ್ಲಿದ್ದರು.
"
"ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್‌ನಲ್ಲಿ ಮಧ್ಯಂತರ ಅರ್ಜಿ ಸಲ್ಲಿಸಿದ್ದು ಬಿಟ್ಟರೆ ಸಮಸ್ಯೆ ಪರಿಹರಿಸುವ ನಿಟ್ಟಿನಲ್ಲಿ ಯಾವುದೇ ಕ್ರಮ ಕೈಗೊಂಡಿಲ್ಲ. ರಾಜ್ಯ ಮತ್ತು ಕೇಂದ್ರ ಸರ್ಕಾರದ ಕಾರ್ಯದರ್ಶಿಗಳು ಕುಳಿತು ಶರಾವತಿ ಸಂತ್ರಸ್ತರ ಸಮಸ್ಯೆ ಸಮಸ್ಯೆ ಬಗೆಹರಿಸಿಕೊಳ್ಳುವಂತೆ ಸುಪ್ರೀಂ ಕೋರ್ಟ್‌ನಲ್ಲಿ ಆದೇಶಿಸಿ ವರ್ಷ ಕಳೆದರೂ ಸಂತ್ರಸ್ತರಿಗೆ ಹಕ್ಕುಪತ್ರ ಸಿಕ್ಕಿಲ್ಲ.
— ತೀ.ನ.ಶ್ರೀನಿವಾಸ್, ಮಲೆನಾಡು ರೈತ ಹೋರಾಟ ಸಮಿತಿ ಸಂಚಾಲಕ