ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ  
ಶಿವಮೊಗ್ಗ

ಎಸ್‌ಐಆರ್ ಗೊಂದಲ ಸೃಷ್ಟಿಸಿದ ಕಾಂಗ್ರೆಸ್ SIR

ಶಿವಮೊಗ್ಗ: ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ(ಎಸ್‌ಐಆರ್) ಪ್ರಕ್ರಿಯೆಯನ್ನು ವಿರೋಧಿಸುವ ಮೂಲಕ ಕಾಂಗ್ರೆಸ್ ಚುನಾವಣಾ ವ್ಯವಸ್ಥೆ ಬಗ್ಗೆ ಜನರಲ್ಲಿ ಅಪನಂಬಿಕೆ ಮೂಡಿಸುತ್ತಿದೆ ಎಂದು ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಟೀಕಿಸಿದರು.

ಶಿವಮೊಗ್ಗ: ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ(ಎಸ್‌ಐಆರ್) ಪ್ರಕ್ರಿಯೆಯನ್ನು ವಿರೋಧಿಸುವ ಮೂಲಕ ಕಾಂಗ್ರೆಸ್ ಚುನಾವಣಾ ವ್ಯವಸ್ಥೆ ಬಗ್ಗೆ ಜನರಲ್ಲಿ ಅಪನಂಬಿಕೆ ಮೂಡಿಸುತ್ತಿದೆ ಎಂದು ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಟೀಕಿಸಿದರು.

ಮೃತರು, ಶಾಶ್ವತವಾಗಿ ಸ್ಥಳಾಂತರಗೊಂಡವರು ಹಾಗೂ ಒಂದಕ್ಕಿಂತ ಹೆಚ್ಚು ಕಡೆ ಮತದಾರರ ಪಟ್ಟಿಯಲ್ಲಿ ಹೆಸರು ಇರುವವರನ್ನು ಗುರುತಿಸಿ ಪರಿಷ್ಕರಣೆ ಮಾಡುವುದು ಅಗತ್ಯ. ಅರ್ಹ ಮತದಾರರ ಹೆಸರು ಪಟ್ಟಿಯಲ್ಲಿ ಉಳಿಯಬೇಕು. ಈ ಉದ್ದೇಶದಿಂದ ಎಸ್‌ಐಆರ್ ಪ್ರಕ್ರಿಯೆ ನಡೆಸಲಾಗಿದೆ ಎಂದು ಬುಧವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಮತದಾರರ ಪಟ್ಟಿಯಿಂದ ಮುಸ್ಲಿಮರು, ಪರಿಶಿಷ್ಟ ಜಾತಿ ಹಾಗೂ ಹಿಂದುಳಿದ ವರ್ಗದವರ ಹೆಸರನ್ನು ಉದ್ದೇಶಪೂರ್ವಕವಾಗಿ ಕೈಬಿಡಲಾಗುತ್ತಿದೆ ಎಂಬ ಕಾಂಗ್ರೆಸ್ ಆರೋಪದಲ್ಲಿ ಹುರುಳಿಲ್ಲ. ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ಧರ್ಮ, ಜಾತಿ, ಆರ್ಥಿಕ ಸ್ಥಿತಿ ಪರಿಗಣಿಸಲ್ಲ ಎಂದರು.

ಚುನಾವಣೆಯಲ್ಲಿ ಗೆದ್ದಾಗ ಇವಿಎಂ ಹಾಗೂ ಚುನಾವಣಾ ಆಯೋಗದ ಬಗ್ಗೆ ಆಕ್ಷೇಪ ವ್ಯಕ್ತಪಡಿಸದ ಕಾಂಗ್ರೆಸ್, ಸೋತಾಗ ಮಾತ್ರ ಇವಿಎಂ ಬದಲಿಗೆ ಬ್ಯಾಲೆಟ್ ಪೇಪರ್ ಚುನಾವಣೆ ನಡೆಸಬೇಕು ಎಂದು ಒತ್ತಾಯಿಸುತ್ತಿದೆ. ಕರ್ನಾಟಕದಲ್ಲಿಯೂ ಇವಿಎಂ ಮೂಲಕವೇ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ. ಹಾಗಾದರೆ ಈಗ ಇವಿಎಂ ಬಗ್ಗೆ ಆಕ್ಷೇಪ ಏಕೆ ಎಂದು ಪ್ರಶ್ನಿಸಿದರು.

ಎಸ್‌ಐಆರ್ ಪ್ರಕ್ರಿಯೆ ಆರಂಭವಾದ ಸಂದರ್ಭ ರಾಷ್ಟ್ರಭಕ್ತ ಬಳಗದಿಂದಲೂ 3-4 ಕಡೆ ಸಹಾಯ ಕೇಂದ್ರ ತೆರೆಯಲಾಗಿತ್ತು. ಕಾರ್ಯಕರ್ತರು ಮನೆಮನೆಗೆ ತೆರಳಿ ಮತದಾರರ ಪಟ್ಟಿಯಲ್ಲಿ ಬಿಟ್ಟುಹೋಗಿರುವ ಅರ್ಹರ ಹೆಸರನ್ನು ಸೇರ್ಪಡೆಗೊಳಿಸಲು ಹಾಗೂ ಅನರ್ಹ ಹೆಸರನ್ನು ಗುರುತಿಸಲು ಸಹಕರಿಸಿದ್ದಾರೆ ಎಂದರು.

ವಿಧಾನಪರಿಷತ್ ಪದವೀಧರ ಮತ್ತು ಶಿಕ್ಷಕರ ಕ್ಷೇತ್ರಗಳ ಚುನಾವಣೆ ಬ್ಯಾಲೆಟ್ ಪೇಪರ್ ಮೂಲಕ ನಡೆದಿದ್ದರೂ ಕಾಂಗ್ರೆಸ್ ಸೋಲು ಅನುಭವಿಸಿದೆ. ಚುನಾವಣಾ ಫಲಿತಾಂಶವನ್ನು ಒಪ್ಪಿಕೊಳ್ಳುವ ಮನೋಭಾವ ಕಾಂಗ್ರೆಸ್ ನಾಯಕರಿಗೆ ಇರಬೇಕು.
ಕೆ.ಎಸ್.ಈಶ್ವರಪ್ಪ, ಮಾಜಿ ಡಿಸಿಎಂ