ಚಿತ್ರದುರ್ಗ ಲೋಕಸಭಾ ಸದಸ್ಯ ಗೋವಿಂದ ಕಾರಜೋಳ  
ಶಿವಮೊಗ್ಗ

ಕಾಂಗ್ರೆಸ್‌ನಿಂದ ರಾಜ್ಯದ ಜನತೆಗೆ ಮೋಸ | Guarantee scheme

ಪ್ರಮುಖ ಮುಖ್ಯಾಂಶಗಳು

  • ಮೂರು ವರ್ಷಗಳಲ್ಲೇ ಕಾಂಗ್ರೆಸ್ ಸರ್ಕಾರ ದಿವಾಳಿ
  • ಗ್ಯಾರಂಟಿಗಳಿಗೆ ಕತ್ತರಿ ಹಾಕುವ ಮೂಲಕ ಬಡರಿಗೆ ಅನ್ಯಾಯ
  • ಚಿತ್ರದುರ್ಗ ಲೋಕಸಭಾ ಸದಸ್ಯ ಗೋವಿಂದ ಕಾರಜೋಳ ವಾಗ್ದಾಳಿ
ಶಿವಮೊಗ್ಗ: ಕಾಂಗ್ರೆಸ್ ಸರ್ಕಾರ(Congress government) ಮೂರು ವರ್ಷಗಳಲ್ಲೇ ದಿವಾಳಿಯಾಗಿದ್ದು, ಗ್ಯಾರಂಟಿ ಯೋಜನೆ(Guarantee scheme)ಗಳ ಹೆಸರಿನಲ್ಲಿ ಜನರಿಗೆ ಮೋಸ ಮಾಡುತ್ತಿದೆ ಎಂದು ಮಾಜಿ ಡಿಸಿಎಂ, ಚಿತ್ರದುರ್ಗ ಲೋಕಸಭಾ ಸದಸ್ಯ ಗೋವಿಂದ ಕಾರಜೋಳ ವಾಗ್ದಾಳಿ ನಡೆಸಿದರು.
ನಗರದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಧಾನಸಭಾ ಚುನಾವಣೆಗೆ ಮುನ್ನ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್(D.K.Sivakumar) ಅವರು ಪಕ್ಷ ಅಧಿಕಾರಕ್ಕೆ ಬಂದರೆ ಮಹಿಳೆಯರು ಮತ್ತು ಯುವಜನರಿಗೆ ಆರ್ಥಿಕ ನೆರವು, ಉಚಿತ ಬಸ್ ಪ್ರಯಾಣ(Free bus travel), ಉಚಿತ ವಿದ್ಯುತ್ ಹಾಗೂ 10 ಕೆಜಿ ಅಕ್ಕಿ ನೀಡುವುದಾಗಿ ಭರವಸೆ ನೀಡಿದ್ದರು. ಆದರೆ ಇದೀಗ ಗ್ಯಾರಂಟಿಗಳಿಗೆ ಕತ್ತರಿ ಹಾಕುವ ಚಿಂತನೆ ನಡೆಸುವ ಮೂಲಕ ಬಡವರು, ದಲಿತರು ಹಾಗೂ ರೈತರಿಗೆ ಅನ್ಯಾಯ ಮಾಡುತ್ತಿದ್ದಾರೆ ಎಂದು ದೂರಿದರು.
ದಲಿತ ಸಮುದಾಯದ ಅಭಿವೃದ್ಧಿ(Development of Dalit community), ಶಿಕ್ಷಣ, ಉದ್ಯೋಗ, ಮನೆ ನಿರ್ಮಾಣ ಹಾಗೂ ಭೂಮಿಗಾಗಿ ಬಳಸಬೇಕಾದ ಹಣವನ್ನು ಸರ್ಕಾರ ಬೇರೆ ಉದ್ದೇಶಗಳಿಗೆ ದುರುಪಯೋಗಪಡಿಸಿಕೊಂಡಿದೆ. ಇದರಿಂದ ದಲಿತರಿಗೆ ದೊಡ್ಡ ಮಟ್ಟದ ಅನ್ಯಾಯವಾಗಿದೆ. ರಾಜ್ಯದಲ್ಲಿ ರೈತರ ಆತ್ಮಹತ್ಯೆಗಳು(Farmers suicide) ಹೆಚ್ಚಾಗುತ್ತಿದ್ದರೂ ಸರ್ಕಾರ ಯಾವುದೆ ಕಾಳಜಿ ತೋರಿಸುತ್ತಿಲ್ಲ. ಈಗ ಗೃಹಲಕ್ಷ್ಮಿ ಯೋಜನೆಗೂ ಕುತ್ತು ತರುವ ಕೆಲಸ ನಡೆಯುತ್ತಿದ್ದು, ಜನರು ಸರ್ಕಾರದ ನಿಜಸ್ವರೂಪವನ್ನು ಅರಿತು ಎಚ್ಚೆತ್ತುಕೊಳ್ಳಬೇಕು ಎಂದು ತಿಳಿಸಿದರು.
ವಿದ್ಯುತ್ ಕ್ಷೇತ್ರ ಖಾಸಗೀಕರಣ(Power sector privatization)ಗೊಳಿಸುವ ಪ್ರಯತ್ನಗಳ ವಿರುದ್ಧವೂ ಆಕ್ಷೇಪ ವ್ಯಕ್ತಪಡಿಸಿದ ಅವರು, ಟಾಟಾ ಕಂಪನಿಗೆ ವಿದ್ಯುತ್ ವಿತರಣೆ ಜವಾಬ್ದಾರಿ ನೀಡಲು ಸರ್ಕಾರ ಮುಂದಾಗಿದೆ. ಸ್ಥಳೀಯರಿಗೆ ದೊರೆಯುವ ಮೀಸಲಾತಿ ಹಾಗೂ ಉದ್ಯೋಗಾವಕಾಶಗಳಿಗೆ ಧಕ್ಕೆಯಾಗಬಹುದು. ಆದ್ದರಿಂದ ವಿದ್ಯುತ್ ನಿರ್ವಹಣೆಯನ್ನು ಖಾಸಗಿ ಕಂಪನಿಗಳಿಗೆ ನೀಡಬಾರದು ಎಂದು ಒತ್ತಾಯಿಸಿದರು.
"

ಬಿಡದಿ ಟೌನ್‌ಶಿಪ್ ಯೋಜನೆಗಾಗಿ ರೈತರ ಭೂಮಿ ಸ್ವಾಧೀನಪಡಿಸಿಕೊಳ್ಳುವ ವಿಚಾರದಲ್ಲೂ ಸರ್ಕಾರ ಎಚ್ಚರಿಕೆಯಿಂದ ನಡೆದುಕೊಳ್ಳಬೇಕು. ರೈತರು ಫಲವತ್ತಾದ ಭೂಮಿಯಲ್ಲಿ ವಿವಿಧ ಬೆಳೆಗಳನ್ನು ಬೆಳೆಯುತ್ತಿದ್ದು, ಅವರ ಭೂಮಿಯನ್ನು ಬಲವಂತವಾಗಿ ವಶಕ್ಕೆ ಪಡೆಯಬಾರದು.

— ಗೋವಿಂದ ಕಾರಜೋಳ, ಚಿತ್ರದುರ್ಗ ಲೋಕಸಭಾ ಸದಸ್ಯ