ಸೊರಬದಲ್ಲಿ ಆಯೋಜಿಸಿದ್ದ ಪ್ರಶಿಕ್ಷಣ ಶಿಬಿರದ ಮಹಾಭಿಯಾನವನ್ನು ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ ಉದ್ಘಾಟಿಸಿದರು. ಪ್ರಕಾಶ್ ಆಗಸನಹಳ್ಳಿ, ಡಾ. ಜ್ಞಾನೇಶ್, ರಾಜು ತಲ್ಲೂರು ಇತರರಿದ್ದರು.
- ಸಂಸದ ಬಿ.ವೈ.ರಾಘವೇಂದ್ರ ಅಸಮಾಧಾನ
- ಪ್ರಶಿಕ್ಷಣ ಶಿಬಿರ ಉದ್ಘಾಟನೆ
ಸೊರಬ: ಮಹಿಳೆಯರಿಗೆ ರಾಜಕೀಯ ಮೀಸಲಾತಿ ಕಲ್ಪಿಸಲು ಬಿಜೆಪಿ ಸರ್ಕಾರ ಮಸೂದೆ ಮಂಡಿಸಲು ಮುಂದಾದರೆ ಕಾಂಗ್ರೆಸ್ ವಿರೋಧಿಸುತ್ತಿದೆ ಎಂದು ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ ಹೇಳಿದರು.
ಪಟ್ಟಣದಲ್ಲಿ ಆಯೋಜಿಸಿದ್ದ ಪ್ರಶಿಕ್ಷಣ ಶಿಬಿರದ ಮಹಾಭಿಯಾನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಪ್ರಧಾನಿ ನರೇಂದ್ರ ಮೋದಿ ಅವರು ಮಹಿಳೆಯರಿಗೆ ಶೇ. 33ರಷ್ಟು ರಾಜಕೀಯ ಮೀಸಲಾತಿ ಕಲ್ಪಿಸಲು ಮರು ಹೋರಾಟ ಮುಂದುವರಿಸಿದ್ದಾರೆ. ದೇಶ ಮೊದಲು ನಂತರ ನಾವು ಎನ್ನುವ ಸಾಮಾಜಿಕ ಚಿಂತನೆ ಅವಶ್ಯಕ ಎಂದು ತಿಳಿಸಿದರು.
ಸೊರಬ ತಾಲೂಕು ನಂಜುಂಡಪ್ಪ ವರದಿಯಲ್ಲಿ ಅತ್ಯಂತ ಹಿಂದುಳಿದ ಕ್ಷೇತ್ರವಾಗಿದೆ. ಜವಾಬ್ದಾರಿ ಸ್ಥಾನದಲ್ಲಿರುವವರು ತಾಲೂಕಿನ ಅಭಿವೃದ್ಧಿ ಮರೆತಿದ್ದಾರೆ. ದೇಶದ ಕಟ್ಟಕಡೆಯ ವ್ಯಕ್ತಿಗೂ ಸೂರು ಕಲ್ಪಿಸುವ ಜತೆಗೆ ತಳ ಸಮುದಾಯದ ಸಮಗ್ರ ಅಭಿವೃದ್ಧಿಗೆ ಬಿಜೆಪಿ ಕೆಲಸ ಮಾಡುತ್ತಿದೆ. ಕಾರ್ಯಕರ್ತರು ತಮ್ಮ ವ್ಯಾಪ್ತಿಯಲ್ಲಿನ ಸಮಸ್ಯೆಗಳ ಬಗ್ಗೆ ಸ್ಪಂದಿಸಿ ಪರಿಹಾರ ಒದಗಿಸುವ ಜವಾಬ್ದಾರಿ ಹೊತ್ತು ಕೆಲಸ ಮಾಡುತ್ತಿರುವುದು ವಿಶೇಷ ಎಂದರು.
ಬಿಜೆಪಿ ತಾಲೂಕು ಘಟಕದ ಅಧ್ಯಕ್ಷ ಪ್ರಕಾಶ್ ಅಗಸನಹಳ್ಳಿ, ತಾಲೂಕು ಉಪಾಧ್ಯಕ್ಷ ಡಾ. ಜ್ಞಾನೇಶ್, ಮಡಿವಾಳ ಮಾಚಿದೇವ ನಿಗಮದ ಮಾಜಿ ಅಧ್ಯಕ್ಷ ರಾಜು ತಲ್ಲೂರು, ಜಿಪಂ ಮಾಜಿ ಅಧ್ಯಕ್ಷೆ ಗೀತಾ ಮಲ್ಲಿಕಾರ್ಜುನ, ತಾಲೂಕು ಪ್ರಧಾನ ಕಾರ್ಯದರ್ಶಿ ಜಾನಕಪ್ಪ, ಮಹಿಳಾ ಘಟಕದ ತಾಲೂಕು ಅಧ್ಯಕ್ಷೆ ಹೊಳಿಯಮ್ಮ, ಯುವ ಮೋರ್ಚಾ ತಾಲೂಕು ಅಧ್ಯಕ್ಷ ರಾಜು ಇತರರಿದ್ದರು.