ಶಿಕಾರಿಪುರದಲ್ಲಿ ಗ್ಯಾರಂಟಿ ಅನುಷ್ಠಾನ ಸಮಿತಿ ತಾಲೂಕು ಅಧ್ಯಕ್ಷ ನಾಗರಾಜ್​ ಗೌಡ ಅಧ್ಯಕ್ಷತೆಯಲ್ಲಿ ಪ್ರಗತಿ ಪರಿಶೀಲನಾ ಸಭೆ ನಡೆಯಿತು. ಉಮೇಶ್​ ಕವಲಿ, ಹುಲ್ಮಾರ್​ ಶಿವು, ಸತೀಶ್​, ಲೋಕಪ್ಪ ಇತರರಿದ್ದರು. 
ಶಿವಮೊಗ್ಗ

ಅರ್ಹರಿಗೆ ಗ್ಯಾರಂಟಿ ಯೋಜನೆಗಳನ್ನು ತಲುಪಿಸಿ

ಪ್ರಮುಖ ಮುಖ್ಯಾಂಶಗಳು

  • ತಾಲೂಕು ಪಂಚಾಯಿತಿಯಲ್ಲಿ ಆಯೋಜಿಸಿದ್ದ ಪ್ರಗತಿ ಪರಿಶೀಲನಾ ಸಭೆಯಲ್ಲಿ
  • ಅಧಿಕಾರಿಗಳಿಗೆ ಗ್ಯಾರಂಟಿ ಸಮಿತಿ ತಾಲೂಕು ಅಧ್ಯಕ್ಷ ಎಸ್​.ಪಿ.ನಾಗರಾಜ ಗೌಡ ಸೂಚನೆ
ಶಿಕಾರಿಪುರ: ಪ್ರತಿಯೊಬ್ಬ ಅರ್ಹ ಲಾನುಭವಿಗಳಿಗೆ ಗ್ಯಾರಂಟಿ ಯೋಜನೆಗಳನ್ನು ತಲುಪಿಸಿ ಎಂದು ಗ್ಯಾರಂಟಿ ಸಮಿತಿ ತಾಲೂಕುಅಧ್ಯಕ್ಷ ಎಸ್​.ಪಿ.ನಾಗರಾಜ ಗೌಡ ಅಧಿಕಾರಿಗಳಿಗೆ ಸೂಚಿಸಿದರು.
ತಾಲೂಕು ಪಂಚಾಯಿತಿಯಲ್ಲಿ ಆಯೋಜಿಸಿದ್ದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ಅವರ ಆಶಯದ ಫಲವಾಗಿ ಗ್ಯಾರಂಟಿ ಯೋಜನೆಗಳ ಜನನವಾಗಿದೆ. ಅವುಗಳನ್ನು ತಲುಪಿಸುವ ನಿಟ್ಟಿನಲ್ಲಿ ಯಾವುದೇ ರೀತಿಯ ತೊಂದರೆ ಇದ್ದರೆ ನಿವಾರಿಸಬೇಕು ಎಂದರು.
ಅರ್ಹ ಫಲಾನುಭವಿಗಳಿಗೆ ಯಾವುದೇ ತೊಂದರೆಯಾಗದಂತೆ ಯೋಜನೆ ತಲುಪಿಸುವುದು ಸರ್ಕಾರದ ಮುಖ್ಯ ಉದ್ದೇಶ. ಯೋಜನೆಗಳ ಅನುಷ್ಠಾನದಲ್ಲಿ ವಿಳಂಬ ಮಾಡದೆ ಕಾಲಮಿತಿಯೊಳಗೆ ಪ್ರಗತಿ ವರದಿ ನೀಡಬೇಕು ಎಂದು ಅಧಿಕಾರಿಗಳಿಗೆ ತಿಳಿಸಿದರು.
ಬ್ಯಾಂಕ್​ ಖಾತೆಗಳ ಜೋಡಣೆ ಹಾಗೂ ಆಧಾರ್​ ಲಿಂಕ್​ ಸಮಸ್ಯೆಯಿಂದಾಗಿ ಕೆಲವು ಫಲಾನುಭವಿಗಳಿಗೆ ಹಣ ಸಂದಾಯ ಆಗದಿರುವ ದೂರುಗಳು ಬಂದಿವೆ. ಈ ಕುರಿತು ಗಮನಹರಿಸಿ. ತಾಂತ್ರಿಕ ಕಾರಣಗಳಿಂದಾಗಿ ಯಾವುದೇ ಅರ್ಹ ನಾಗರಿಕರು ಯೋಜನೆಯಿಂದ ವಂಚಿತರಾಗದಂತೆ ಎಚ್ಚರಿಕೆವಹಿಸಬೇಕು ಮತ್ತು ಸಮಸ್ಯೆಗಳನ್ನು ಶ್ರೀ ಬಗೆಹರಿಸಬೇಕು ಎಂದರು.
ಪುರಸಭೆ ಸದಸ್ಯರಾದ ಉಮೇಶ್​ ಕವಲಿ, ಹುಲ್ಮಾರ್​ ಶಿವು, ಮಲ್ಲಿಕ್​ ನಾಯಕ್​, ಪರಶುರಾಮ್​, ಸತೀಶ್​, ಶೋಭಾ ತೇಜ್ಯಾನಾಯ್ಕ್​, ಲೋಕಪ್ಪ, ಇಒ ನಾಗರಾಜ್​ ಇತರರಿದ್ದರು.