ಸೊರಬ ತಾಪಂ ಸಭಾಂಗಣದಲ್ಲಿ ಗ್ಯಾರಂಟಿ ಸಮಿತಿ ಅಧ್ಯಕ್ಷ ಜಯಶೀಲ ಗೌಡ ಅವರ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು. ಶಶಿಧರ್, ಪ್ರಭಾಕರ ಇದ್ದರು.
- ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಗ್ಯಾರಂಟಿ ಸಮಿತಿ ಸಭೆ
- ತಾಲೂಕು ಗ್ಯಾರಂಟಿ ಯೋಜನೆ ಅಧ್ಯಕ್ಷ ಜಯಶೀಲ ಗೌಡ ಸಲಹೆ
- ಗ್ಯಾರಂಟಿಗಳನ್ನು ಪ್ರಾಮಾಣಿಕವಾಗಿ ತಲುಪಿಸಿ
ಸೊರಬ: ಪಂಚ ಗ್ಯಾರಂಟಿ ಯೋಜನೆಗಳು ಜನಸಾಮಾನ್ಯರ, ಬಡವರ ಶ್ರೇಯೋಭಿವೃದ್ಧಿಗಾಗಿ ಹಾಗೂ ಆರ್ಥಿಕ ಕಲ್ಯಾಣಕ್ಕೆ ಪೂರಕವಾಗಿವೆ. ಅವುಗಳನ್ನು ಪ್ರಾಮಾಣಿಕವಾಗಿ ತಲುಪಿಸುವ ಕೆಲಸವನ್ನು ಅಧಿಕಾರಿಗಳು ಮಾಡಬೇಕೆಂದು ತಾಲೂಕು ಗ್ಯಾರಂಟಿ ಯೋಜನೆ ಅಧ್ಯಕ್ಷ ಜಯಶೀಲ ಗೌಡ ತಿಳಿಸಿದರು.
ಪಟ್ಟಣದ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಗುರುವಾರ ಆಯೋಜಿಸಿದ್ದ ಗ್ಯಾರಂಟಿ ಸಮಿತಿ ಸಭೆಯಲ್ಲಿ ಮಾತನಾಡಿದ ಅವರು, ಗ್ಯಾರಂಟಿ ಯೋಜನೆಗಳಿಗೆ ಸಂಬಂಧಿಸಿದ ಇಲಾಖೆಗಳಲ್ಲಿ ಸಾರ್ವಜನಿಕರಿಂದ ಹಲವಾರು ಸಣ್ಣಪುಟ್ಟ ದೂರುಗಳು ಬರುತ್ತಿವೆ. ಅಧಿಕಾರಿಗಳು ಫಲಾನುಭವಿಗಳಿಗೆ ಸಮಗ್ರ ಮಾಹಿತಿ ನೀಡಬೇಕು ಎಂದರು.
ವಿವಿಧ ಗ್ರಾಮ, ಪಟ್ಟಣ ಪ್ರದೇಶಗಳಿಗೆ ಸರ್ಕಾರಿ ಬಸ್ ಸೌಲಭ್ಯ ಕಲ್ಪಿಸುವಂತೆ ಜನರಿಂದ ಬೇಡಿಕೆ ಬಂದ ಹಿನ್ನೆಲೆಯಲ್ಲಿ ಆದ್ಯತೆ ಮೇರೆಗೆ ಬಸ್ ಬಿಡಲಾಗಿದೆ. ಸಾರ್ವಜನಿಕರು ಆಸ್ಪತ್ರೆಗೆ ತೆರಳಲು ಹಾಗೂ ರೈಲು ಸಂಪರ್ಕಕ್ಕೆ ಅನುಕೂಲ ಮಾಡಿಕೊಡುವ ಉದ್ದೇಶದಿಂದ ಸೊರಬ& ಮಣಿಪಾಲ, ಮಂಗಳೂರು&ಸೊರಬ, ಸಾಗರ - ಮಂಗಳೂರು, ಮಣಿಪಾಲ - ಸಾಗರ ನಗರ ಪ್ರದೇಶಗಳಿಗೆ ಸಾರಿಗೆ ವ್ಯವಸ್ಥೆ ನೀಡಲಾಗಿದೆ ಎಂದು ಹೇಳಿದರು.
ತಾಪಂ ಇಒ ಶಶಿಧರ್, ಜಿಲ್ಲಾ ಗ್ಯಾರಂಟಿ ಸಮಿತಿ ಸದಸ್ಯ ಪ್ರಭಾಕರ, ಮಂಜುನಾಥ, ಪ್ರವಿಣಕುಮಾರ್, ಶಿವಮೂರ್ತಿ, ಮುಕ್ತಿಯಾರ್ ಬಾಷಾ, ಅಭಿಷೇಕ್, ಚಾಂದ್ ಸಾಬ್, ವಿನಾಯಕ, ಜಯಶೀಲ, ಅಧಿಕಾರಿಗಳಾದ ಸತ್ಯಪ್ರಕಾಶ್, ಯೋಗೇಶ್, ಸಹನಾ, ಮಂಜು ನಾಯಕ್ ಇದ್ದರು.