ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ 
ಶಿವಮೊಗ್ಗ

ಮಳೆ ಕೊರತೆ ಎದುರಿಸಲು ಜಿಲ್ಲಾಡಳಿತ ಸಜ್ಜು | Lack of rain

ಪ್ರಮುಖ ಮುಖ್ಯಾಂಶಗಳು

  • ಸಾರ್ವಜನಿಕರ ಹಿತದೃಷ್ಟಿಯಿಂದ ಮುನ್ನೆಚ್ಚರಿಕೆ ಹಾಗೂ ಪರಿಹಾರ ಕ್ರಮ
  • ನೀರನ್ನು ಕುಡಿಯುವ ಉದ್ದೇಶಕ್ಕಾಗಿ ಮಾತ್ರ ಬಳಸಲು ಕಟ್ಟುನಿಟ್ಟಿನ ಆದೇಶ
  • ವಾರದಿಂದ ಮಳೆ ಸಂಪೂರ್ಣ ಕ್ಷೀಣಿಸಿದ್ದು, ಕೃಷಿ ಚಟುವಟಿಕೆಗಳು ಕುಂಠಿತ
ಶಿವಮೊಗ್ಗ: ಮಳೆ ಕೊರತೆ(Lack of rain)ಯನ್ನು ಸಮರ್ಥವಾಗಿ ಎದುರಿಸಲು ಜಿಲ್ಲಾಡಳಿತ(District Administration) ಸಜ್ಜಾಗಿದ್ದು, ಸಾರ್ವಜನಿಕರ ಹಿತದೃಷ್ಟಿಯಿಂದ ಹಲವು ಪ್ರಮುಖ ಮುನ್ನೆಚ್ಚರಿಕೆ ಹಾಗೂ ಪರಿಹಾರ ಕ್ರಮ ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ತಿಳಿಸಿದ್ದಾರೆ.
ಜಿಲ್ಲೆಯ ಜಲಾಶಯ ಮತ್ತು ಕೆರೆ(Reservoir and lake)ಗಳಲ್ಲಿ ಲಭ್ಯವಿರುವ ನೀರನ್ನು ಕೇವಲ ಕುಡಿಯುವ ಉದ್ದೇಶಕ್ಕಾಗಿ ಮಾತ್ರ ಬಳಸಲು ಕಟ್ಟುನಿಟ್ಟಿನ ಆದೇಶ ಹೊರಡಿಸಲಾಗಿದೆ. ಕುಡಿಯುವ ನೀರಿನ ಅಭಾವವಿರುವ ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿ ತಕ್ಷಣವೇ ಖಾಸಗಿ ಬೋರ್‌ವೆಲ(Private borewell) ಬಾಡಿಗೆಗೆ ಪಡೆದು ಟ್ಯಾಂಕರ್‌ಗಳ ಮೂಲಕ ಅಥವಾ ನೀರು ಸರಬರಾಜು ಮಾಡಲು ಕ್ರಿಯಾಯೋಜನೆ ರೂಪಿಸಲಾಗಿದೆ ಎಂದು ತಿಳಿಸಿದ್ದಾರೆ.
ಆನವಟ್ಟಿಗೆ ಮಾತ್ರ ಬೋರ್‌ವೆಲ್ ನೀರು ವ್ಯವಸ್ಥೆ ಮಾಡಿದ್ದು, ಸೊರಬ, ಶಿರಾಳಕೊಪ್ಪ, ಹೊಸನಗರಕ್ಕೆ ಇನ್ನೆರಡು ತಿಂಗಳು ಕುಡಿಯುವ ನೀರಿನ ಕೊರತೆ ಇಲ್ಲ. ಉಳಿದೆಡೆ 6ರಿಂದ 8 ತಿಂಗಳು ಸಮಸ್ಯೆ ಇಲ್ಲ. 44 ಗ್ರಾಪಂಗಳಲ್ಲಿ ಜನವರಿಯಿಂದ ಜೂನ್‌ವರೆಗೆ ಒಟ್ಟು 97 ಬೋರ್‌ವೆಲ್ ಕೊರೆಸಲಾಗಿದೆ. ಜೂನ್‌ನಲ್ಲಿ 27 ಗ್ರಾಪಂ ವ್ಯಾಪ್ತಿಯ 37 ಗ್ರಾಮಗಳಿಗೆ ಖಾಸಗಿ ಬೋರ್‌ವೆಲ್ ಮೂಲಕ ನೀರು ಪೂರೈಸಲಾಗಿದೆ ಎಂದಿದ್ದಾರೆ.
ಕಳೆದೊಂದು ವಾರದಿಂದ ಮಳೆ ಸಂಪೂರ್ಣ ಕ್ಷೀಣಿಸಿದ್ದು, ಕೃಷಿ ಚಟುವಟಿಕೆಗಳು(Agricultural activities) ಕುಂಠಿತಗೊಂಡಿವೆ. ಭತ್ತದ ಸಸಿಮಡಿಗೆ ಹಿನ್ನಡೆಯಾಗಿದ್ದು, ಈಗಾಗಲೇ ಶಿಕಾರಿಪುರ ಮತ್ತು ಸೊರಬ ತಾಲೂಕುಗಳಲ್ಲಿ ಬಿತ್ತನೆಯಾಗಿರುವ ಖುಷ್ಕಿ ಬೆಳೆಗಳಿಗೆ ತೇವಾಂಶದ ಕೊರತೆ ಎದುರಾಗಿದೆ. ಶೇ.44ರಷ್ಟು ಮಳೆ ಕೊರತೆಯಾಗಿದ್ದು, ಗುರಿಯ ಶೇ. 28.09ರಷ್ಟು ಮಾತ್ರ ಬಿತ್ತನೆಯಾಗಿದೆ. ಪ್ರಸಕ್ತ ಸಾಲಿನಲ್ಲಿ 1,13,458 ಹೆಕ್ಟೇರ್ ಬಿತ್ತನೆ ಗುರಿ ಹೊಂದಿದ್ದು, ಜು.17ರವರೆಗೆ 31,868 ಹೆಕ್ಟೇರ್ ಬಿತ್ತನೆಯಾಗಿದೆ. ಮೆಕ್ಕೆಜೋಳ(Maize)ದ ಬಿತ್ತನೆ ಅವಧಿ ಮುಗಿಯುತ್ತಾ ಬಂದಿರುವುದರಿಂದ ರಾಗಿ, ಹೆಸರು, ಅಲಸಂದೆ, ಉದ್ದು ಬೆಳೆಯಬಹುದು. ಭತ್ತದ ನಾಟಿಗೆ ಆಗಸ್ಟ್ ಅಂತ್ಯದವರೆಗೆ ಅವಕಾಶವಿದ್ದು, ನೀರಿನ ಲಭ್ಯತೆಗೆ ಅನುಗುಣವಾಗಿ ಬೆಳೆಯಬಹುದು ಎಂದಿದ್ದಾರೆ.

34,562 ಮೆಟ್ರಿಕ್ ಟನ್ ರಸಗೊಬ್ಬರ ಲಭ್ಯ

ಜಿಲ್ಲೆಯ ರೈತ ಸಂಪರ್ಕ ಕೇಂದ್ರಗಳು ಹಾಗೂ ಖಾಸಗಿ ಮಾರಾಟಗಾರರಲ್ಲಿ ಬಿತ್ತನೆ ಬೀಜ ಮತ್ತು ರಸಗೊಬ್ಬರಗಳ ದಾಸ್ತಾನು(Fertilizer inventory) ಸಮರ್ಪಕವಾಗಿದೆ. ರೈತ ಸಂಪರ್ಕ ಕೇಂದ್ರಗಳಲ್ಲಿ 2,796 ಕ್ವಿಂಟಾಲ್ ಬಿತ್ತನೆ ಬೀಜ ಹಾಗೂ ಜಿಲ್ಲಾದ್ಯಂತ 34,562 ಮೆಟ್ರಿಕ್ ಟನ್ ವಿವಿಧ ಗ್ರೇಡ್‌ಗಳ ರಸಗೊಬ್ಬರ ಲಭ್ಯವಿದೆ. ಜಾನುವಾರುಗಳಿಗೆ ಸಾಕಾಗುವಷ್ಟು ಮೇವು ಲಭ್ಯವಿದ್ದು, ಮುಂದಿನ 50 ವಾರಗಳವರೆಗೆ ಮೇವಿನ ಕೊರತೆ ಇಲ್ಲ ಎಂದು ಡಿಸಿ ತಿಳಿಸಿದ್ದಾರೆ.
ಜಿಲ್ಲೆಯಲ್ಲಿ 1,46,400 ಹೆಕ್ಟೇರ್ ಪ್ರದೇಶದಲ್ಲಿ ಅಡಿಕೆ ಬೆಳೆ ಬೆಳೆಯಲಾಗಿದೆ. ಅಲ್ಲದೆ, ಶುಂಠಿ, ಕಾಳುಮೆಣಸು, ಮಾವು, ಬಾಳೆ, ಗೋಡಂಬಿ, ಏಲಕ್ಕಿ, ಸಪೋಟ, ಅನಾನಸ್ ಪ್ರಮುಖ ಬೆಳೆಯಲಾಗುತ್ತಿದೆ. ಪ್ರಸಕ್ತ ಸಾಲಿನಲ್ಲಿ ಎಲ್ನಿನೋ ಪರಿಣಾಮದಿಂದ ಮುಂಗಾರು ದುರ್ಬಲವಾಗಿದ್ದು, ಜುಲೈ ಮಧ್ಯಭಾಗ ಮುಗಿದಿದ್ದರೂ ವಾಡಿಕೆ ಮಳೆಗಿಂತ ಕಡಿಮೆ ಮಳೆಯಾಗಿರುವ ಹಿನ್ನೆಲೆಯಲ್ಲಿ ರೈತ ಬಾಂಧವರು ಈ ಕೆಳಕಂಡ ಮುನ್ನೆಚ್ಚರಿಕೆ ಕ್ರಮಗಳನ್ನು ಅನುಸರಿಸಲು ರೈತರಲ್ಲಿ ಮನವಿ ಮಾಡಿದ್ದಾರೆ.
"

ಅನಾವೃಷ್ಟಿಯಲ್ಲಿ ವಿದ್ಯುತ್ ವ್ಯತ್ಯಯವಾಗುವ ಸಂಭವ ಇರುವುದರಿಂದ ಪರ್ಯಾಯವಾಗಿ ಸೋಲಾರ್ ಪಂಪ್‌ಸೆಟ್ ಅಳವಡಿಸಿಕೊಂಡು ಬೆಳೆಗಳಿಗೆ ನೀರು ಒದಗಿಸುವುದಕ್ಕೆ ರೈತರು ಕಾರ್ಯ ಪ್ರವೃತ್ತರಾಗಬೇಕಿದೆ. ಮಳೆ ಅಭಾವ ಮುಂದುವರಿದರೆ ಗುಡ್ಡಗಾಡು ಪರಿಸರ ಪ್ರದೇಶಗಳಲ್ಲಿ ಮಳೆ ನೀರಿ ಸಂಗ್ರಹಿಸಲು ಇಳಿಜಾರಿಗೆ ಅಡ್ಡಲಾಗಿ ನಿಯಮಿತ ಅಂತರಗಳಲ್ಲಿ ಕ್ಯಾಚ್ ಪಿಟ್ಸ್ ನಿರ್ಮಿಸಿಕೊಳ್ಳಬಹುದು.

— ಪ್ರಭುಲಿಂಗ ಕವಳಿಕಟ್ಟಿ, ಜಿಲ್ಲಾಧಿಕಾರಿ