ನಗರದ ತಾಪಂ ಸಭಾಂಗಣದಲ್ಲಿ ಶಿವಮೊಗ್ಗ ತಾಲೂಕು ಗ್ಯಾರಂಟಿ ಯೋಜನೆಗಳ ಸಮಿತಿ ಅಧ್ಯಕ್ಷ ಎಚ್.ಎಂ.ಮಧು ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಯ ಪ್ರಗತಿ ಪರಿಶೀಲನಾ ಸಭೆ ನಡೆಸಿದರು. ಪರಮೇಶ್, ಪಾಲಯ್ಯ ಇದ್ದರು.
- ವಿದ್ಯಾರ್ಥಿಗಳಿಗೆ ತೊಂದರೆಯಾಗದಂತೆ ನಿಗದಿತ ವೇಳಾಪಟ್ಟಿಯಂತೆ ಬಸ್‌ಗಳನ್ನು ಬಿಡಲು ಕ್ರಮ
- ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಗ್ಯಾರಂಟಿ ಯೋಜನೆಯ ಪ್ರಗತಿ ಪರಿಶೀಲನಾ ಸಭೆ
- ಶಿವಮೊಗ್ಗ ತಾಲೂಕು ಗ್ಯಾರಂಟಿ ಯೋಜನೆಗಳ ಸಮಿತಿ ಅಧ್ಯಕ್ಷ ಮಧು ಅಧಿಕಾರಿಗಳಿಗೆ ಸೂಚನೆ
ಶಿವಮೊಗ್ಗ: ಮುಂದಿನ ದಿನಗಳಲ್ಲಿ ವಾರ್ಷಿಕ ಪರೀಕ್ಷೆ(Annual exam)ಗಳು ನಿಗದಿ ಆಗಿರುವುದರಿಂದ ವಿದ್ಯಾರ್ಥಿಗಳಿಗೆ ತೊಂದರೆಯಾಗದಂತೆ ನಿಗದಿತ ವೇಳಾಪಟ್ಟಿಯಂತೆ ಬಸ್‌ಗಳನ್ನು ಬಿಡಲು ಕ್ರಮ ವಹಿಸಬೇಕೆಂದು ಶಿವಮೊಗ್ಗ ತಾಲೂಕು ಗ್ಯಾರಂಟಿ ಯೋಜನೆ(Guarantee scheme)ಗಳ ಸಮಿತಿ ಅಧ್ಯಕ್ಷ ಎಚ್.ಎಂ.ಮಧು ಅಧಿಕಾರಿಗಳಿಗೆ ಸೂಚಿಸಿದರು.
ನಗರದ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಶುಕ್ರವಾರ ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಯ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಅವರು, 75 ವರ್ಷ ಮೇಲ್ಪಟ್ಟವರಿಗೆ ಮನೆ ಬಾಗಿಲಿಗೆ ಪಡಿತರ(Ration) ತಲುಪಿಸುವ ರಾಜ್ಯ ಸರ್ಕಾರದ ಬಹು ನಿರೀಕ್ಷಿತ ಯೋಜನೆಯಾದ ಅನ್ನ ಸುವಿಧಾ ಯೋಜನೆ(Suvidha scheme)ಯನ್ನು ವೃದ್ಧರಿಗೆ ಸಮರ್ಪಕವಾಗಿ ತಲುಪಿಸಬೇಕೆಂದು ಅಧಿಕಾರಿಗಳಿಗೆ ತಿಳಿಸಿದರು.
ಬಿಪಿಎಲ್ ಕಾರ್ಡ್(BPL Card)ನಿಂದ ಎಪಿಎಲ್ ಕಾರ್ಡ್ ಪರಿವರ್ತನೆಯಾಗಿರುವ ಫಲಾನುಭವಿಗಳ ಕುರಿತು ಪರಿಶೀಲಿಸಿ ಅರ್ಹರನ್ನು ಗುರುತಿಸಿ ಬಡವರಿಗೆ ನ್ಯಾಯ ಒದಗಿಸಬೇಕು. ಸ್ನಾತಕೋತ್ತರ ಪದವಿ ಕಾಲೇಜಿಗೆ ಭೇಟಿ ನೀಡಿ ಯುವನಿಧಿ(Yuvanidhi) ಯೋಜನೆಯ ಬಗ್ಗೆ ಪ್ರಚಾರ ಮಾಡಬೇಕು ಹಾಗೂ ತಾಲೂಕಿನಲ್ಲಿ 1,74,202 ಗ್ರಾಹಕರಿದ್ದು, ಗೃಹಜ್ಯೋತಿ ಯೋಜನೆಯಡಿ 1,56,445 ಫಲಾನುಭವಿಗಳು ಸೌಲಭ್ಯ ಪಡೆಯುತ್ತಿದ್ದಾರೆ. ಗೃಹಜ್ಯೋತಿ(Gruhajyoti) ಯೋಜನೆಯಡಿ ಹೊಸದಾಗಿ ನೋಂದಾಯಿಸಿಕೊಂಡ ಫಲಾನುಭವಿಗಳಿಗೆ ಸಮರ್ಪಕವಾಗಿ ಗೃಹಜ್ಯೋತಿ ಯೋಜನೆ ತಲುಪಿಸಬೇಕೆಂದು ಸೂಚಿಸಿದರು.
ಗೃಹಲಕ್ಷ್ಮೀ(Gruhalaxmi) ಯೋಜನೆಯಡಿ ಶಿವಮೊಗ್ಗ ತಾಲೂಕಿನಲ್ಲಿ 1,07,722 ಮಹಿಳೆಯರು ನೋಂದಣಿಯಾಗಿದ್ದು, 2044 ಐಟಿ/ಜಿಎಸ್‌ಟಿ ಫಲಾನುಭವಿಗಳಿದ್ದು, 304 ಅರ್ಜಿಗಳನ್ನು ಸ್ವೀಕರಿಸಲಾಗಿದೆ. ಮರಣ ಹೊಂದಿರುವ 332 ಮಹಿಳಾ ಫಲಾನುಭವಿಗಳ ಅರ್ಜಿಗಳನ್ನು ಪತ್ತೆ ಹಚ್ಚಲಾಗಿದ್ದು, 42 ಫಲಾನುಭವಿಗಳಿಗೆ ಎನ್‌ಪಿಸಿಐ(Npci) ಬಾಕಿ ಇರುತ್ತದೆ. ಗೃಹಲಕ್ಷ್ಮೀ ಯೋಜನೆಯಡಿ ಫಲಾನುಭವಿಗಳ ಬ್ಯಾಂಕ್ ಖಾತೆಗೆ ಹಣ ಸಮರ್ಪಕವಾಗಿ ಜಮಾ ಮಾಡಬೇಕು ಎಂದರು.
11,085 ವಿದ್ಯಾರ್ಥಿಗಳು ನೋಂದಣಿ
ಯುವನಿಧಿ(Yuvanidhi) ಯೋಜನೆಯಡಿಯಲ್ಲಿ 11,085 ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದು, ಸೆಪ್ಟಂಬರ್‌ವರೆಗೆ 1.56 ಕೋಟಿ ರೂ. ಫಲಾನುಭವಿಗಳ ಖಾತೆಗೆ ಜಮೆಯಾಗಿರುತ್ತದೆ. ಶಕ್ತಿ ಯೋಜನೆ(Shakti yojane)ಯಡಿ ಮಹಿಳೆಯರು 2,47,80,592 ಬಾರಿ ಇಲ್ಲಿಯವರೆಗೆ ಪ್ರಯಾಣ ಮಾಡಿದ್ದಾರೆ. ಅನ್ನಭಾಗ್ಯ ಯೋಜನೆಯಡಿ 1,69,0079 ಪಡಿತರದಾರರಿಗೆ 15,248.38 ಕ್ವಿಂಟಲ್ ಅಕ್ಕಿ ನೀಡಲಾಗಿದೆ ಎಂದು ಎಚ್.ಎಂ.ಮಧು ಮಾಹಿತಿ ನೀಡಿದರು. ತಾಪಂ ಇಒ ಪರಮೇಶ್, ಉಪ ತಹಸೀಲ್ದಾರ್ ಪಾಲಯ್ಯ, ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಯ ಸದಸ್ಯರು, ಆಹಾರ ಇಲಾಖೆ, ಸಾರಿಗೆ ಇಲಾಖೆ, ನಗರಸಭೆ ಹಾಗೂ ಮೆಸ್ಕಾಂ ಅಧಿಕಾರಿಗಳು ಹಾಜರಿದ್ದರು.