ಶಿವಮೊಗ್ಗ ದೊಡ್ಡಪೇಟೆ ಠಾಣೆ. 
ಶಿವಮೊಗ್ಗ

ಕುಡಿದ ಮತ್ತಿನಲ್ಲಿ ಸ್ನೇಹಿತನ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆಗೆ ಯತ್ನ | Attempt murder

ಪ್ರಮುಖ ಮುಖ್ಯಾಂಶಗಳು

  • ವಿಕೋಪಕ್ಕೆ ತಿರುಗಿದ ಸ್ನೇಹಿತರ ಮಧ್ಯೆ ನಡೆದ ಜಗಳ
  • ಅಣ್ಣಾನಗರದ 6ನೇ ಕ್ರಾಸ್‌ನಲ್ಲಿ ಭಾನುವಾರ ರಾತ್ರಿ ಘಟನೆ
  • ಶಿವಮೊಗ್ಗದ ದೊಡ್ಡಪೇಟೆ ಠಾಣೆಯಲ್ಲಿ ಪ್ರಕರಣ ದಾಖಲು
ಶಿವಮೊಗ್ಗ: ನಗರದ ಅಣ್ಣಾನಗರದ 6ನೇ ಕ್ರಾಸ್‌ನಲ್ಲಿ ಭಾನುವಾರ ರಾತ್ರಿ ಕುಡಿದ ಮತ್ತಿನಲ್ಲಿ ಗುಂಪೊಂದು ಸ್ನೇಹಿತನ ಮೇಲೆಯೇ ಕಲ್ಲು ಎತ್ತಿ ಹಾಕಿ ಕೊಲೆಗೆ ಯತ್ನ(Attempt murder)ಮಾಡಲಾಗಿದೆ.
ಇಮ್ತಿಯಾಜ್ (37) ಹಲ್ಲೆಗೊಳಗಾದನು. ಸ್ನೇಹಿತರ ಮಧ್ಯೆ ನಡೆದ ಜಗಳ ವಿಕೋಪಕ್ಕೆ ತಿರುಗಿದೆ. ನಾಲ್ಕೈದು ಯುವಕರಿದ್ದ ಗುಂಪು ಇಮ್ತಿಯಾಜ್ ಅವರನ್ನು ಓಡಿಸಿಕೊಂಡು ಬಂದು ಹಲ್ಲೆ ನಡೆಸಿದೆ. ಆತನ ಮೇಲೆ ಕಲ್ಲು ಎತ್ತಿ ಹಾಕಿದ್ದಾರೆ.
ತೀವ್ರ ಗಾಯಗೊಂಡಿರುವ ಇಮ್ತಿಯಾಜ್‌ನನ್ನು ಮೆಗ್ಗಾನ್ ಆಸ್ಪತ್ರೆ(Meggan Hospital)ಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ದೊಡ್ಡಪೇಟೆ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದರು. ಈ ಸಂಬಂಧ ದೊಡ್ಡಪೇಟೆ ಠಾಣೆ(Doddapete Station)ಯಲ್ಲಿ ಪ್ರಕರಣ ದಾಖಲಾಗಿದೆ.