ಹೊಸನಗರ ತಾಲೂಕಿನ ಕರಿಂಗೊಳ್ಳಿ ಗ್ರಾಮದಲ್ಲಿ ಆಯುಷ್ಮಾನ್ ಆರೋಗ್ಯ ಮಂದಿರ ಕಟ್ಟಡದ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಶಾಸಕ ಗೋಪಾಲಕೃಷ್ಣ ಬೇಳೂರು ಮಾತನಾಡಿದರು. ಚಿದಂಬರ, ನರೇಂದ್ರಕುಮಾರ್ ಇತರರಿದ್ದರು. 
ಶಿವಮೊಗ್ಗ

ಜನಪ್ರತಿನಿಧಿಗೆ ಸಾರ್ವಜನಿಕ ಹಿತಾಸಕ್ತಿ ಇರಲಿ Ayushman

ಹೊಸನಗರ: ಚುನಾಯಿತ ಜನಪ್ರತಿನಿಧಿಗಳಿಗೆ ಸಾರ್ವಜನಿಕ ಹಿತಾಸಕ್ತಿ ಇದ್ದಾಗ ಮಾತ್ರ ಕ್ಷೇತ್ರ ಅಭಿವೃದ್ಧಿಯಾಗುತ್ತದೆ ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ಹೇಳಿದರು.

ಹೊಸನಗರ: ಚುನಾಯಿತ ಜನಪ್ರತಿನಿಧಿಗಳಿಗೆ ಸಾರ್ವಜನಿಕ ಹಿತಾಸಕ್ತಿ ಇದ್ದಾಗ ಮಾತ್ರ ಕ್ಷೇತ್ರ ಅಭಿವೃದ್ಧಿಯಾಗುತ್ತದೆ ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ಹೇಳಿದರು.

ತಾಲೂಕಿನ ಎಂ.ಗುಡ್ಡೆಕೊಪ್ಪ ಗ್ರಾಪಂ ವ್ಯಾಪ್ತಿ ಕರಿಂಗೊಳ್ಳಿ ಗ್ರಾಮದಲ್ಲಿ ಆಯುಷ್ಮಾನ್ ಆರೋಗ್ಯ ಮಂದಿರ ಕಟ್ಟಡದ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿ, ಗ್ರಾಮೀಣ ಮತ್ತು ನಗರ ಪ್ರದೇಶದ ಜನರಿಗೆ ಉಚಿತ, ಗುಣಮಟ್ಟದ ಆರೋಗ್ಯ ಸೇವೆ ನೀಡುವ ಉದ್ದೇಶದಿಂದ ಸರ್ಕಾರ ಯೋಜನೆ ಆರಂಭಿಸಿದೆ ಎಂದು ತಿಳಿಸಿದರು.

ಆಯುಷ್ಮಾನ್ ಆರೋಗ್ಯ ಮಂದಿರಗಳು ಗ್ರಾಮೀಣ ಭಾಗದ ಜನರಿಗೆ ಉಚಿತ ತಪಾಸಣೆ, ಅಗತ್ಯ ಔಷಧ, ಆಯುಷ್ಮಾನ್ ಭಾರತ್- ಆರೋಗ್ಯ ಕರ್ನಾಟಕ ಯೋಜನೆಯಡಿ ವೈದ್ಯಕೀಯ ಸೌಲಭ್ಯ ಕಲ್ಪಿಸುತ್ತದೆ. 65 ಲಕ್ಷ ರೂ. ಅನುದಾನದಲ್ಲಿ ವ್ಯವಸ್ಥಿತವಾಗಿ ಕಟ್ಟಡ ನಿರ್ಮಾಣವಾಗಲಿದೆ ಎಂದರು.

ಹೊಸನಗರ ತಾಲೂಕಿನಲ್ಲಿ ಈಗಾಗಲೇ ವೈದ್ಯಕೀಯ ಸೇವೆಗಳಿಗೆ ಹೆಚ್ಚು ಒತ್ತು ನೀಡಿದ್ದು, ಹೊಸನಗರ ಸಾರ್ವಜನಿಕ ಆಸ್ಪತ್ರೆಗೆ ಸುಸಜ್ಜಿತ ಲ್ಯಾಬ್, ಮೇಲ್ಛಾವಣಿ, ವೈದ್ಯರ ನೇಮಕ ಇನ್ನಿತರ ಸೌಲಭ್ಯ ನೀಡಲಾಗಿದೆ ಎಂದು ಹೇಳಿದರು.

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ.ಜಿ.ಚಂದ್ರಮೌಳಿ, ಗ್ಯಾರಂಟಿ ಅನುಷ್ಠಾನ ಸಮಿತಿ ತಾಲೂಕು ಅಧ್ಯಕ್ಷ ಚಿದಂಬರ, ತಾಪಂ ಇಒ ನರೇಂದ್ರ ಕುಮಾರ್ ಇತರರಿದ್ದರು.