ತುಮರಿ ಸರ್ಕಾರಿ ಶಾಲೆ ಆವರಣದಲ್ಲಿ ಏರ್ಪಡಿಸಿದ್ದ ಮತದಾರರ ಜಾಗೃತಿ ಜಾಥಾದಲ್ಲಿ ಸಿ.ಸದಾನಂದ ಸ್ವಾಮಿ, ವಿ.ಟಿ.ಸ್ವಾಮಿ, ಅರುಣ್ ಮತ್ತಿತರರು ಪಾಲ್ಗೊಂಡಿದ್ದರು.
ತುಮರಿ: ಅರ್ಹ ಮತದಾರರು ಪಟ್ಟಿಯಿಂದ ಹೊರಗೆ ಉಳಿಯದಂತೆ ಎಚ್ಚರ ವಹಿಸಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಸಿ.ಸದಾನಂದ ಸ್ವಾಮಿ ಹೇಳಿದರು.
ಸರ್ಕಾರಿ ಪ್ರೌಢಶಾಲೆ ಆವರಣದಲ್ಲಿ ಆಯೋಜಿಸಿದ್ದ ಮತದಾರರ ಜಾಗೃತಿ ಜಾಥಾದಲ್ಲಿ ಮಾತನಾಡಿ, ಅರ್ಹ ಮತದಾರರು ಪಟ್ಟಿಯಲ್ಲಿ ಇರುವಂತೆ ಅಧಿಕಾರಿಗಳು ಗಮನ ವಹಿಸಬೇಕು. ಈಗಾಗಲೇ ಮತಗಟ್ಟೆ ಅಧಿಕಾರಿಗಳು ಮನೆಮನೆಗೆ ಭೇಟಿ ನೀಡಿ ನಿಗದಿತ ನಮೂನೆ ವಿತರಿಸುತ್ತಿದ್ದು, ಮತದಾರರ ಮಾಹಿತಿ ಸಂಗ್ರಹಿಸುತ್ತಿದ್ದಾರೆ. ಪ್ರತಿಯೊಬ್ಬ ನಾಗರಿಕ ಜಾಗೃತಿ ವಹಿಸಬೇಕು ಎಂದು ತಿಳಿಸಿದರು.
ಶಿಕ್ಷಣ ಸಂಯೋಜಕ ವಿ.ಟಿ.ಸ್ವಾಮಿ ಮಾತನಾಡಿ, ಮತದಾರರು ಮಾಹಿತಿಯನ್ನು ಸ್ವಯಂಪ್ರೇರಿತರಾಗಿ ನೀಡುವ ಕೆಲಸ ಮಾಡಬೇಕು. ಮತದಾರರ ಪರಿಷ್ಕರಣೆ ನಡೆಯುತ್ತಿದ್ದು, ಮತದಾರರು ಸಕ್ರಿಯವಾಗಿ ಪಾಲ್ಗೊಳ್ಳಬೇಕು ಎಂದರು.
ಕರೂರು ಹೋಬಳಿ ಶಿಕ್ಷಣ ಸಂಯೋಜಕ ದಿನೇಶ್, ಸಿಆರ್‌ಪಿ ಪ್ರಸನ್ನ ಕುಮಾರ್, ತುಮರಿ ಸರ್ಕಾರಿ ಪ್ರೌಢಶಾಲೆ ಮುಖ್ಯಶಿಕ್ಷಕ ಅರುಣ್ ಇತರರಿದ್ದರು.