ಮಾರಿಕಾಂಬಾ ಜಾತ್ರೆ ಪ್ರಯುಕ್ತ ಸಾಗರದಲ್ಲಿ ಏರ್ಪಡಿಸಿದ್ದ ಕುಸ್ತಿ ಪಂದ್ಯಾವಳಿ ಸಮಾರೋಪ ಸಮಾರಂಭದಲ್ಲಿ ಶಾಸಕ ಗೋಪಾಲಕೃಷ್ಣಬೇಳೂರು ಮಾತನಾಡಿದರು. ನಾಗೇಂದ್ರ, ಅಶೋಕ್, ಶಶಿಕಾಂತ್, ಸಂತೋಷ್ ಇತರರಿದ್ದರು. 
ಶಿವಮೊಗ್ಗ

ಕುಸ್ತಿ ಪಂದ್ಯಾವಳಿಯಿಂದ ಮನರಂಜನೆ |wrestling

ಸಾಗರ: ಸಾಗರದಲ್ಲಿ ಮೂರು ದಿನಗಳ ಕುಸ್ತಿ ಪಂದ್ಯಾವಳಿ ಅತ್ಯಂತ ಯಶಸ್ವಿಯಾಗಿದೆ. ನೂರಾರು ಜೋಡಿಗಳು ಕುಸ್ತಿ ಪಂದ್ಯಾಟದಲ್ಲಿ ಪಾಲ್ಗೊಂಡು ನಮ್ಮೂರಿನ ಜನರನ್ನು ರಂಜಿಸಿದ್ದಾರೆ ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ಹೇಳಿದರು.
ಸಾಗರದ ನೆಹರು ಮೈದಾನದಲ್ಲಿ ಭಾನುವಾರ ಮಾರಿಕಾಂಬಾ ಜಾತ್ರೆ ಪ್ರಯುಕ್ತ ಏರ್ಪಡಿಸಿದ್ದ ಮೂರು ದಿನಗಳ ರಾಷ್ಟ್ರಮಟ್ಟದ ಕುಸ್ತಿ ಪಂದ್ಯಾವಳಿಯ ಸಮಾರೋಪ ಸಮಾರಂಭದಲ್ಲಿ ಮಾತನಾಡಿದರು.
ಹಿಂದಿನ ಎಲ್ಲ ವರ್ಷಗಳಿಗಿಂತ ಈ ಬಾರಿ ಪಂದ್ಯಾವಳಿ ಸೇರಿ ಎಲ್ಲ ಕಾರ್ಯಕ್ರಮಗಳು ಯಶಸ್ವಿಯಾಗಿವೆ. ಭಕ್ತರು ದೊಡ್ಡ ಸಂಖ್ಯೆಯಲ್ಲಿ ಜಾತ್ರೆಯಲ್ಲಿ ಪಾಲ್ಗೊಂಡಿದ್ದಾರೆ. 20 ಸಮಿತಿಗಳು ಅತ್ಯಂತ ಶಿಸ್ತುಬದ್ಧವಾಗಿ ಜಾತ್ರೆ ಸಂಯೋಜಿಸುವಲ್ಲಿ ಯಶಸ್ವಿಯಾಗಿವೆ ಎಂದರು.
ಕುಸ್ತಿ ಪಂದ್ಯಾವಳಿಯಲ್ಲಿ 150ಕ್ಕೂ ಹೆಚ್ಚು ಕುಸ್ತಿಪಟುಗಳು ಪಾಲ್ಗೊಂಡಿದ್ದರು. ಸುಮಾರು 10 ಲಕ್ಷ ರೂ.ಗೂ ಅಧಿಕ ನಗದು ಬಹುಮಾನ, ಬೆಳ್ಳಿಗದೆ, ಅಖಾಡ ಬಳೆ, ಬೆಳ್ಳಿಪದಕ, ಬೆಳ್ಳಿ ಬಳೆ ಕುಸ್ತಿ ನಡೆದಿತ್ತು. ವಿವಿಧ ರಾಜ್ಯಗಳ ಪೈಲ್ವಾನರು ಪಾಲ್ಗೊಂಡಿದ್ದರು ಎಂದು ತಿಳಿಸಿದರು.
ನ್ಯಾಸ ಪ್ರತಿಷ್ಠಾನದ ಅಧ್ಯಕ್ಷ ಕೆ.ಎನ್.ನಾಗೇಂದ್ರ, ಪ್ರಧಾನ ಕಾರ್ಯದರ್ಶಿ ಬಿ.ಗಿರಿಧರ ರಾವ್, ಉಪಾಧ್ಯಕ್ಷ ಸುಂದರ ಸಿಂಗ್, ಸಹ ಕಾರ್ಯದರ್ಶಿ ಎಸ್.ವಿ.ಕೃಷ್ಣಮೂರ್ತಿ, ಖಜಾಂಚಿ ನಾಗೇಂದ್ರ ಕುಮಟಾ, ಕುಸ್ತಿ ಸಮಿತಿ ಸಂಚಾಲಕ ಅಶೋಕ್, ಸಹ ಸಂಚಾಲಕರಾದ ಶಶಿಕಾಂ, ಸಂತೋಷ್ ಸದ್ಗುರು, ಗೋಪುರ ಸಮಿತಿ ಸಂಚಾಲಕ ಪುರುಷೋತ್ತಮ, ಬಾಬಣ್ಣ, ಮಂಜುನಾಥ್, ಕೃಷ್ಣಮೂರ್ತಿ, ಧರ್ಮಣ್ಣ ಇತರರಿದ್ದರು.