ಭದ್ರಾವತಿ ಸಿದ್ದಾರೂಢನಗರದಲ್ಲಿ ಆಯೋಜಿಸಿದ್ದ ಇಷ್ಟಲಿಂಗ ಪೂಜೆ ಕಾರ್ಯಕ್ರಮದಲ್ಲಿ ಪಡಿತರ ವಿತರಕ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಸಿದ್ದಲಿಂಗಯ್ಯ ದಂಪತಿಯನ್ನು ಸನ್ಮಾನಿಸಲಾಯಿತು. ಶ್ರೀ ರೇಣುಕ ಶಿವಾಚಾರ್ಯ ಸ್ವಾಮೀಜಿ, ಶ್ರೀ ರಾಚೋಟೇಶ್ವರ ಶಿವಾಚಾರ್ಯರು, ಶ್ರೀ ಅಭಿನವ ಸಿದ್ದಲಿಂಗ ಶಿವಾಚಾರ್ಯರು ಇತರರಿದ್ದರು.
ಭದ್ರಾವತಿ: ಮನುಷ್ಯ ತಾನು ಮಾಡುವ ಕಾರ್ಯಗಳಿಂದ ವ್ಯಕ್ತಿತ್ವ ರೂಪಿಸಿಕೊಳ್ಳುತ್ತಾನೆ ಎಂದು ಬಾಳೆಹೊನ್ನೂರು ರಂಭಾಪುರಿ ಪೀಠದ ಎಡೆಯೂರು ಶಾಖಾ ಮಠದ ಶ್ರೀ ರೇಣುಕ ಶಿವಾಚಾರ್ಯ ಸ್ವಾಮೀಜಿ ಹೇಳಿದರು.
ನಗರದ ಸಿದ್ದಾರೂಢನಗರದಲ್ಲಿ ಆಯೋಜಿಸಿದ್ದ ಇಷ್ಟಲಿಂಗ ಪೂಜಾ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡಿದ ಅವರು, ಆಧುನಿಕ ಜೀವನ ಕ್ರಮಗಳಲ್ಲಿ ಸನಾತನ ಧರ್ಮದ ಆಚರಣೆ, ಸಂಪ್ರದಾಯ, ಆಚಾರ, ವಿಚಾರಗಳನ್ನು ಕಡೆಗಣಿಸುತ್ತಿರುವುದು ಸರಿಯಲ್ಲ. ಇದರ ಲ ಮುಂದೊಂದು ದಿನ ಅನುಭವಿಸಬೇಕಾಗುತ್ತದೆ. ಧರ್ಮದ ಆಚರಣೆಗಳನ್ನು ಜೀವನದಲ್ಲಿ ಪಾಲಿಸಿದಾಗ ಶಾಂತಿ ನೆಮ್ಮದಿ ದೊರೆಯುತ್ತದೆ ಎಂದು ತಿಳಿಸಿದರು.
ಮಕ್ಕಳಿಗೆ ಲಿಂಗದೀಕ್ಷೆ ನೀಡುವ ಮೂಲಕ ಧಾರ್ಮಿಕ ಸಂಸ್ಕಾರ ನೀಡಿರುವುದು ಅತ್ಯಂತ ಸಂತೋಷ ಹಾಗೂ ಮಾದರಿ ಸಂಗತಿ. ಈ ಮೂಲಕ ಮುಂದಿನ ದಿನಗಳಲ್ಲಿ ವೀರಶೈವ ಲಿಂಗಾಯತ ಧರ್ಮದ ಪ್ರತಿಯೊಬ್ಬರೂ ಲಿಂಗ ದೀಕ್ಷೆ ಪಡೆದು ಸಂಸ್ಕಾರವಂತ, ಆಚಾರವಂತರಾಗಿ ಉತ್ತಮ ಜೀವನ ನಡೆಸಬೇಕು ಎಂದರು.
ಶಾಸಕ ಬಿ.ಕೆ.ಸಂಗಮೇಶ್ವರ ಮಾತನಾಡಿ, ಸಮಾಜದಲ್ಲಿ ಉತ್ತಮ ಕೆಲಸಗಳನ್ನು ಮಾಡಿದವರಿಗೆ ಸನ್ಮಾನಗಳು ಅರಸಿ ಬರುತ್ತವೆ. ಸಿದ್ದಲಿಂಗಯ್ಯ ಅವರ ಸಾಮಾಜಿಕ ಕಾರ್ಯಗಳೇ ಸಾಕ್ಷಿ ಎಂದರು.
ಬಿಳಕಿ ಹಿರೇಮಠದ ಶ್ರೀ ರಾಚೋಟೇಶ್ವರ ಶಿವಾಚಾರ್ಯ ಸ್ವಾಮೀಜಿ, ತಾವರೆಕೆರೆ ಶಿಲಾಮಠದ ಶ್ರೀ ಅಭಿನವ ಸಿದ್ದಲಿಂಗ ಶಿವಾಚಾರ್ಯ ಸ್ವಾಮೀಜಿ ನೇತೃತ್ವ ವಹಿಸಿದ್ದರು. ಪಡಿತರ ವಿತರಕ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಸಿದ್ದಲಿಂಗಯ್ಯ, ನಗರಸಭೆ ಅಧ್ಯಕ್ಷೆ ಜೆ.ಸಿ.ಗೀತಾ ರಾಜಕುಮಾರ್, ವೀರಶೈವ ಲಿಂಗಾಯಿತ ಮಹಾಸಭಾ ತಾಲೂಕು ಅಧ್ಯಕ್ಷ ಕೆ.ಎಸ್.ವಿಜಯ್‌ಕುಮಾರ್, ವೀರಶೈವ ಸೇವಾ ಸಮಿತಿ ಅಧ್ಯಕ್ಷ ಆರ್.ಮಹೇಶ್‌ಕುಮಾರ್, ಬಿಜೆಪಿ ಮಂಡಲ ಅಧ್ಯಕ್ಷ ಜಿ.ಧರ್ಮಪ್ರಸಾದ್, ವಕೀಲ ಕೆ.ಎನ್.ಶ್ರೀಹರ್ಷ, ಶಂಕರ ಮಠದ ವ್ಯವಸ್ಥಾಪಕ ಕೆ.ಎಸ್.ನಾಗರಾಜ್, ಬಿ.ಆರ್.ಸುಮುಖ, ಎನ್.ಜಿ.ಕುಂದನ್, ಕತ್ತಲಗೆರೆ ತಿಮ್ಮಪ್ಪ, ಬಿ.ಎಂ.ಸಂತೋಷ್ ಇತರರಿದ್ದರು.