ಮಾಜಿ ಶಾಸಕ ಎಚ್.ಎಂ.ಚಂದ್ರಶೇಖರಪ್ಪ.
- ಅನಾರೋಗ್ಯದಿಂದ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ನಿಧನ
- 1999ರಲ್ಲಿ ಕೆ.ಎಸ್.ಈಶ್ವರಪ್ಪ ಅವರ ವಿರುದ್ಧ ಸ್ಪರ್ಧಿಸಿ ಗೆಲುವು
- ಸೋಮವಾರ ಬೆಳಗ್ಗೆ 9.30ಕ್ಕೆ ಬಸವನಗುಡಿ ಮುಖ್ಯ ರಸ್ತೆಯ ಅವರ ಸ್ವ ಗೃಹದಲ್ಲಿ ಅಂತಿಮ ದರ್ಶನ
ಶಿವಮೊಗ್ಗ: ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ, ಕರ್ನಾಟಕ ಮಾಜಿ ಶಾಸಕರ ವೇದಿಕೆ ಅಧ್ಯಕ್ಷರಾಗಿದ್ದ ಎಚ್.ಎಂ.ಚಂದ್ರಶೇಖರಪ್ಪ(H.M.Chandrasekharappa) (78) ಭಾನುವಾರ ಸಂಜೆ ಅಲ್ಪ ಕಾಲದ ಅನಾರೋಗ್ಯದಿಂದ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆ(Manipal Hospital)ಯಲ್ಲಿ ನಿಧನರಾದರು.
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ, ಶಿವಮೊಗ್ಗ ನಗರಸಭೆ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದ ಎಚ್.ಎಂ.ಚಂದ್ರಶೇಖರಪ್ಪ ಅವರು 1999ರಲ್ಲಿ ಕೆ.ಎಸ್.ಈಶ್ವರಪ್ಪ ಅವರ ವಿರುದ್ಧ ಸ್ಪರ್ಧಿಸಿ ಗೆಲುವು ಸಾಧಿಸಿ ಶಿವಮೊಗ್ಗ ನಗರದ ಶಾಸಕರಾಗಿದ್ದರು.
ಅವರ ಅವಧಿಯಲ್ಲಿ ಬೊಮ್ಮನಕಟ್ಟೆ ಆಶ್ರಯ ಬಡಾವಣೆ(Bommanakatte Ashraya Badavane), ಗಾಜನೂರು ಡ್ಯಾಂ ಹೊಸದಾಗಿ ನಿರ್ಮಾಣ ಆಗಿದ್ದು, ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ರಾಜ್ಯ ಮಾಜಿ ಉಪಾಧ್ಯಕ್ಷರಾಗಿ ದೀರ್ಘಾವಧಿ ಸೇವೆ ಸಲ್ಲಿಸಿದ್ದರು. ಮಹಾನಗರ ಪಾಲಿಕೆ ಮಾಜಿ ಸದಸ್ಯ ಎಚ್.ಸಿ.ಯೋಗೇಶ್, ಉದ್ಯಮಿ ಎಚ್.ಸಿ.ಶರಣ್ ಅವರನ್ನು ಅಗಲಿದ್ದಾರೆ.
ಸೋಮವಾರ ಬೆಳಗ್ಗೆ 9.30ಕ್ಕೆ ಬಸವನಗುಡಿ ಮುಖ್ಯ ರಸ್ತೆಯ ಅವರ ಸ್ವ ಗೃಹದಲ್ಲಿ ಸಾರ್ವಜನಿಕರಿಗೆ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಸಂಜೆ 4ಕ್ಕೆ ಹೊಸಳ್ಳಿಯ ಅವರ ಹೊಸಹಳ್ಳಿಯ ತೋಟದಲ್ಲಿ ವೀರಶೈವ ಲಿಂಗಾಯಿತ ಸಮಾಜದ ಸಂಪ್ರದಾಯದಂತೆ ಅಂತಿಮ ವಿಧಿ ವಿಧಾನವು ನೆರವೇರಲಿದೆ.