ಫಲ-ಪುಷ್ಪ ಪ್ರದರ್ಶನ, ಮಲೆನಾಡ ಕರಕುಶಲ ಉತ್ಸವ, ಸಿರಿಧಾನ್ಯ ಮೇಳದ ಪೋಸ್ಟರನ್ನು ಜಿಪಂ ಸಿಇಒ ಎನ್.ಹೇಮಂತ್ ಬಿಡುಗಡೆ ಮಾಡಿದರು. ಡಾ. ಎಂ.ಕಿರಣ್‌ಕುಮಾರ್, ನಂದಿನಿ, ಸಿದ್ದಪ್ಪ ಹರಳೆಣ್ಣೆಯವರ್, ವೈ.ಆರ್. ಮಲ್ಲಿಕಾರ್ಜುನ, ದುಮ್ಮಳ್ಳಿ ರಘು, ಎ.ಎಸ್.ಚಂದ್ರಕಾಂತ ಇದ್ದರು. 
ಶಿವಮೊಗ್ಗ

24ರಿಂದ ಶಿವಮೊಗ್ಗದಲ್ಲಿ ಫಲ-ಪುಷ್ಪ ಪ್ರದರ್ಶನ I fruite flower

ಪ್ರಮುಖ ಮುಖ್ಯಾಂಶಗಳು

  • ಬೆಳಗ್ಗೆ 10ರಿಂದ ರಾತ್ರಿ 9ರವರೆಗೆ ವೀಕ್ಷಣೆಗೆ ಅವಕಾಶ
  • ಜಿಲ್ಲಾಡಳಿತದಿಂದ ಅಂತಿಮ ಹಂತದ ಸಿದ್ಧತೆ
  • ಸಿಇಒ ಎನ್.ಹೇಮಂತ್ ವಿವರಣೆ
ಶಿವಮೊಗ್ಗ: ಸತತ ಎರಡನೇ ವರ್ಷ (year) ಫ್ರೀಡಂ ಪಾರ್ಕ್‌ (freedom park) ನಲ್ಲಿ ಜ.24ರಿಂದ 27ರವರೆಗೆ ಪುಷ್ಪಸಿರಿ 63ನೇ ಫಲಪುಷ್ಪ ಪ್ರದರ್ಶನ (show) ಆಯೋಜಿಸಲು ಜಿಲ್ಲಾಡಳಿತ ಅಂತಿಮ ಹಂತದ ಸಿದ್ಧತೆ ಮಾಡಿಕೊಳ್ಳುತ್ತಿದೆ.
ಒಂದೇ ಸೂರಿನಡಿ ಫಲ-ಪುಷ್ಪ, ಸ್ವಸಹಾಯ ಗುಂಪುಗಳ ಮಹಿಳೆಯರು ತಯಾರಿಸಿದ ಕರಕುಶಲ ವಸ್ತುಗಳ ಪ್ರದರ್ಶನ ಹಾಗೂ ಮಾರಾಟ ಮೇಳ , ಮಲೆನಾಡ ಕರಕುಶಲ ಉತ್ಸವ, ಸಿರಿಧಾನ್ಯ ಮೇಳ ನಡೆಯಲಿದೆ ಎಂದು ಜಿಪಂ ಸಿಇಒ ಎನ್.ಹೇಮಂತ್ ತಿಳಿಸಿದ್ದಾರೆ.
ಜಿಪಂ ತೋಟಗಾರಿಕೆ ಇಲಾಖೆ ಹಾಗೂ ಜಿಲ್ಲಾ ಉದ್ಯಾನ ಕಲಾ ಸಂಘದ ಸಹಯೋಗದಲ್ಲಿ ಆಯೋಜಿಸಿರುವ ಮಲೆನಾಡ ಕರಕುಶಲ ಉತ್ಸವ ಹಾಗೂ ಪುಷ್ಪಸಿರಿ ವೀಕ್ಷಣೆಗೆ ಸಾರ್ವಜನಿಕರಿಗೆ ಉಚಿತ ಪ್ರವೇಶ ಕಲ್ಪಿಸಲಾಗಿದೆ. ನಾಲ್ಕು ದಿನ ಬೆಳಗ್ಗೆ 10ರಿಂದ ರಾತ್ರಿ 9ರವರೆಗೆ ವೀಕ್ಷಣೆಗೆ ಅವಕಾಶವಿದೆ ಎಂದು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.
ರೈತರು ಬೆಳೆದ ವಿಶೇಷವಾದ ಹೂವು, ಹಣ್ಣು, ತರಕಾರಿ, ತೋಟಗಾರಿಕೆ ಬೆಳೆಗಳ ಪ್ರದರ್ಶನವಿರುತ್ತದೆ. ಅತ್ಯುತ್ತಮ ಬೆಳೆಗೆ ಬಹುಮಾನ ನೀಡಲಾಗುತ್ತದೆ. ಸಸ್ಯದ ವಿವಿಧ ಭಾಗಗಳು, ಧಾನ್ಯಗಳು, ಹೂವುಗಳ ರಂಗೋಲಿ ಸ್ಪರ್ಧೆಯನ್ನು ಮಹಿಳೆಯರಿಗಾಗಿ ಆಯೋಜಿಸಲಾಗಿದೆ ಎಂದರು.
24ರ ಬೆಳಗ್ಗೆ 11ಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಫಲ-ಪುಷ್ಪ ಪ್ರದರ್ಶನ ಹಾಗೂ ಕರಕುಶಲ ಉತ್ಸವ ಉದ್ಘಾಟಿಸಲಿದ್ದಾರೆ. ಶಾಸಕ ಎಸ್.ಎನ್.ಚನ್ನಬಸಪ್ಪ ಅಧ್ಯಕ್ಷತೆ ವಹಿಸುವರು. ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ, ಜಿಲ್ಲೆಯ ಎಲ್ಲ ಶಾಸಕರು, ವಿಧಾನ ಪರಿಷತ್ ಸದಸ್ಯರು, ನಿಗಮ ಮಂಡಳಿ ಅಧ್ಯಕ್ಷರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.
ಜಿಪಂ ಯೋಜನಾ ನಿರ್ದೇಶಕಿ ನಂದಿನಿ, ಕೃಷಿ ಇಲಾಖೆ ಜಂಟಿ ನಿರ್ದೇಶಕ ಡಾ. ಎಂ.ಕಿರಣ್‌ಕುಮಾರ್, ಜಿಲ್ಲಾ ಉದ್ಯಾನ ಕಲಾ ಸಂಘದ ಉಪಾಧ್ಯಕ್ಷ ಸಿದ್ದಪ್ಪ ಹರಳೆಣ್ಣೆಯವರ್, ವೈ.ಆರ್.ಮಲ್ಲಿಕಾರ್ಜುನ, ದುಮ್ಮಳ್ಳಿ ರಘು, ಎ.ಎಸ್.ಚಂದ್ರಕಾಂತ ಸುದ್ದಿಗೋಷ್ಠಿಯಲ್ಲಿದ್ದರು.

ಜೋಗ ಜಲಪಾತದ ಆಕರ್ಷಣೆ

ವಿವಿಧ ಬಣ್ಣದ ಸುಮಾರು ಎರಡು ಲಕ್ಷ ಗುಲಾಬಿ, ಸೇವಂತಿಗೆ, ಆಂಥೋರಿಯಂ, ಕಾಮಿನಿ ಎಲೆ ಮತ್ತು ಫೋಲಿಯೇಜ್ ಗಿಡಗಳನ್ನು ಬಳಸಿ ವಿಶೇಷವಾದ ಹೂವಿನ ಕಲಾಕೃತಿಗಳನ್ನು ರಚನೆ ಮಾಡಲಾಗುತ್ತದೆ. 16 ಅಡಿ ಎತ್ತರದ ಕೋಟೆ ಹಾಗೂ ಕೆಳದಿ ಶಿವಪ್ಪ ನಾಯಕನ ಪ್ರತಿಮೆ ರಚನೆ ಮಾಡಲಾಗುವುದು. 15 ಅಡಿ ಎತ್ತರದ ಬಳ್ಳಿಗಾವಿ ಕೇದಾರೇಶ್ವರ ದೇವಸ್ಥಾನ ರಚನೆ, ಹೂವುಗಳು ಹಾಗೂ ಫೋಲಿಯೇಜ್‌ನಿಂದ ಮಾಡಿದಜೋಗ ಜಲಪಾತದ ಕಲಾಕೃತಿಗಳು ಈ ಬಾರಿಯ ಆಕರ್ಷಣೆಗಳಾಗಿವೆ. ಹೂವಿನಲ್ಲಿ ರಚಿಸಿದ ‘ಐ ಲವ್ ಶಿವಮೊಗ್ಗ’ ಸೆಲ್ಫಿ ಪಾಯಿಂಟ್ ಕೂಡಾ ಇರಲಿದೆ. ಕುಬ್ಜ ಗಿಡಗಳ(ಬೋನ್ಸಾಯ್) ಪ್ರದರ್ಶನವಿರುತ್ತದೆ ಎಂದು ಹೇಮಂತ್ ತಿಳಿಸಿದರು.

ಕ್ರಾಫ್ಟ್ ಆಫ್ ಮಲ್ನಾಡ್

ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಮಿಷನ್ ಸಂಜೀವಿನಿ ಯೋಜನೆಯಡಿ ಸ್ವ ಸಹಾಯ ಗುಂಪಿನ ಉತ್ಪನ್ನಗಳ ವಸ್ತುಪ್ರದರ್ಶನ ಮತ್ತು ಮಾರಾಟ ಮೇಳವನ್ನು ಕ್ರಾಫ್ಟ್ ಆಫ್ ಮಲ್ನಾಡ್ ಹೆಸರಿನಲ್ಲಿ ಆಯೋಜಿಸಿದ್ದು 12,163 ಮಹಿಳಾ ಸ್ವಸಹಾಯ ಸಂಘಗಳಡಿ 1,26,456 ಕುಟುಂಬಗಳನ್ನು ಗ್ರಾಮೀಣ ಅಭಿಯಾನದಡಿ ಸಂಘಟಿಸಲಾಗಿದೆ. ಸ್ವಸಹಾಯ ಸಂಘದ ಮಹಿಳೆಯರು ತಯಾರಿಸಿದ ಉತ್ಪನ್ನಗಳನ್ನು ಬ್ರಾೃಂಡಿಂಗ್ ಮಾಡಿದ್ದು ಈಗಾಗಲೇ ಮಹಿಳೆಯರು ತಯಾರಿಸಿದ ದೀಪಗಳು ಮತ್ತಿತರ ಉತ್ಪನ್ನಗಳ ಉತ್ತಮ ಮಾರಾಟವಾಗಿದೆ. ಇದೀಗ ವಿಶೇಷವಾಗಿ ಇ-ಕಾಮರ್ಸ್ ವೆಬ್‌ಸೈಟ್‌ರಚನೆ ಮಾಡುವ ಮೂಲಕ ಜಿಲ್ಲೆ ಹಾಗೂ ರಾಜ್ಯದ ವಿವಿಧ ಕರಕುಶಲ ಉತ್ಪನ್ನಗಳಿಗೆ ಮಾರುಕಟ್ಟೆ ಕಲ್ಪಿಸಲು ತಯಾರಿ ಮಾಡಿಕೊಳ್ಳಲಾಗಿದೆ ಎಂದು ಎನ್.ಹೇಮಂತ್ ತಿಳಿಸಿದರು.

ವಿವಿಧ ಉತ್ಪನ್ನಗಳ ಮಾರಾಟ

ರಾಜ್ಯ, ಹೊರ ರಾಜ್ಯಗಳ ಸ್ವ ಸಹಾಯ ಗುಂಪಿನ ಮಹಿಳೆಯರು ಉತ್ಪಾದಿಸಿರುವ ಮಣ್ಣಿನ ಅಲಂಕಾರಿಕ ಉತ್ಪನ್ನಗಳು, ಮ್ಯಾಕ್ರನ್ ಉತ್ಪನ್ನಗಳು, ಹಸೆ ಚಿತ್ತಾರ ಮತ್ತು ಭತ್ತದ ತೋರಣ, ಈಚಲು ಚಾಪೆ, ಮಣ್ಣಿನ ಆಭರಣಗಳು, ಮರದ ಕೆತ್ತನೆಗಳು, ಕೌದಿ ಉತ್ಪನ್ನಗಳು, ಕೊಪ್ಪಳದ ಕಿನ್ನಾಳ ಉತ್ಪನ್ನಗಳು, ಕೊಪ್ಪಳದ ಬನಾನ ಫೈಬರ್ ಉತ್ಪನ್ನಗಳು, ಚಿಕ್ಕಬಳ್ಳಾಪುರ ಲೆದರ್ ಉತ್ಪನ್ನಗಳು, ನವಲಗುಂದ ದುರಿ, ಮೈಸೂರು ಮರದ ಕೆತ್ತನೆಯ ಉತ್ಪನ್ನಗಳು, ಬೀದರ್‌ನ ಬಿದರಿ ಉತ್ಪನ್ನಗಳು ಹಾಗೂ ಅಕ್ಕ ಕೆಫೆಯ ಸದಸ್ಯರು, ಇತರ ಸ್ವ ಸಹಾಯ ಗುಂಪಿನ ಸದಸ್ಯರಿಂದ ಆಹಾರ ಉತ್ಪನ್ನಗಳ ಪ್ರದರ್ಶನ ಹಾಗೂ ಮಾರಾಟವಿರುತ್ತದೆ. ಸಿರಿಧಾನ್ಯ ಕುರಿತ ಪ್ರತ್ಯೇಕ ಮಳಿಗೆಗಳು, ಕೈಮಗ್ಗ ಜವಳಿ ಉತ್ಪನ್ನಗಳೂ ಇರಲಿವೆ ಎಂದು ಹೇಮಂತ್ ಮಾಹಿತಿ ನೀಡಿದರು.

ರೈತರಿಗೆ ಸ್ಪರ್ಧೆ

"

ಕಳೆದ ವರ್ಷ ಆಯೋಜಿಸಿದ್ದ ಫಲಪುಷ್ಪ ಪ್ರದರ್ಶನ ಹಾಗೂ ಮಲೆನಾಡ ಕರಕುಶಲ ವಸ್ತು ಪ್ರದರ್ಶನಕ್ಕೆ ಜನರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿತ್ತು. ಸುಮಾರು 20 ಲಕ್ಷ ರೂ. ವಹಿವಾಟು ನಡೆದಿತ್ತು. ಈ ಬಾರಿಯೂ ಜನರಿಗೆ ಉತ್ತಮ ಸ್ಪಂದನೆ ದೊರೆಯುವ ನಿರೀಕ್ಷೆಯಿದೆ.