ಶಿಕಾರಿಪುರದಲ್ಲಿ ವಕೀಲರ ಸಂಘದಿಂದ ಶಾಸಕ ಬಿ.ವೈ.ವಿಜಯೇಂದ್ರ ಅವರನ್ನು ಸನ್ಮಾನಿಸಲಾಯಿತು. ಎಸ್.ಎಫ್.ಗೌತಮ್‌ಚಂದ್ ಜೈನ್, ಚಂದ್ರಕಾಂತ್ ಪಾಟೀಲ್, ಉಮೇಶ್ ಗೌಡ, ವಿನಯ್ ಬಾಬು ಇತರರಿದ್ದರು. 
ಶಿವಮೊಗ್ಗ

ಕಕ್ಷಿದಾರರಿಗೆ ಮಾನಸಿಕ ಸ್ಥೈರ್ಯ ತುಂಬಿ

ಸೋಮಶೇಖರ ಎನ್
ಶಿಕಾರಿಪುರ: ವಕೀಲ ವೃತ್ತಿಯು ಅತ್ಯಂತ ಶ್ರೇಷ್ಠವಾದುದು. ಬಡವರು, ಆರ್ಥಿಕವಾಗಿ ಹಿಂದುಳಿದವರಿಗೆ ನ್ಯಾಯ ದೊರಕಿಸುವ ಕೆಲಸ ಆಗಬೇಕು ಎಂದು ಶಾಸಕ ಬಿ.ವೈ.ವಿಜಯೇಂದ್ರ ಹೇಳಿದರು.
ಪಟ್ಟಣದಲ್ಲಿ ವಕೀಲರ ಸಂಘ ಆಯೋಜಿಸಿದ್ದ ವಕೀಲರ ದಿನಾಚರಣೆಯಲ್ಲಿ ಮಾತನಾಡಿ, ತಾಲೂಕಿನ ಸಂಘವು ನಿರಂತರವಾಗಿ ಕಾರ್ಯಕ್ರಮ ಹಮ್ಮಿಕೊಂಡು ಉತ್ತಮ ಕೆಲಸ ಮಾಡುತ್ತಿದೆ. ಕಕ್ಷಿದಾರರಿಗೆ ವಕೀಲರು ಮಾನಸಿಕ ಸ್ಥೈರ್ಯ ತುಂಬಬೇಕು. ನಾನೂ ಕೂಡ ಸಂಘದ ಸದಸ್ಯ ಎನ್ನುವುದು ಹೆಮ್ಮೆಯ ಸಂಗತಿ ಎಂದು ತಿಳಿಸಿದರು.
ಪತ್ರಿಕೆ, ಟಿವಿ ಮಾಧ್ಯಮಗಳಲ್ಲಿ ನ್ಯಾಯಾಲಯ ಮತ್ತು ಕಾನೂನಿಗೆ ಸಂಬಂಧಿಸಿದ ಸುದ್ದಿ ಹೆಚ್ಚಿರುತ್ತವೆ. ಅಪರಾಧ ಕೃತ್ಯಗಳು ಹೆಚ್ಚಾಗುತ್ತಿವೆ. ಇಂತಹ ಸಮಯದಲ್ಲಿ ವಕೀಲರ ಪಾತ್ರ ಬಹಳ ಮುಖ್ಯ ಎಂದರು.
ಎಂಎಡಿಬಿ ಮಾಜಿ ಅಧ್ಯಕ್ಷ ಕೆ.ಎಸ್.ಗುರುಮೂರ್ತಿ, ಕೆಎಸ್‌ಬಿಸಿ ಲಾ ಅಕಾಡೆಮಿ ಅಧ್ಯಕ್ಷ ಎಸ್.ಎಫ್.ಗೌತಮ್‌ಚಂದ್ ಜೈನ್, ಗವರ್ನಿಂಗ್ ಕೌನ್ಸಿಲ್ ಉಪಾಧ್ಯಕ್ಷ ಚಂದ್ರಕಾಂತ್ ಪಾಟೀಲ್, ವಕೀಲರ ಸಂಘದ ತಾಲೂಕು ಅಧ್ಯಕ್ಷ ಉಮೇಶ್ ಗೌಡ, ಕಾರ್ಯದರ್ಶಿ ವಿನಯ್ ಬಾಬು ಇತರರಿದ್ದರು.