ಭದ್ರಾವತಿ ತಾಲೂಕಿನ ಕಾರೇಹಳ್ಳಿ ಗ್ರಾಮದಲ್ಲಿ ಆಯೋಜಸಿದ್ದ ಗ್ಯಾರಂಟಿ ಯೋಜನೆ ಸಮಿತಿ ಸಭೆಯನ್ನು ತಾಲೂಕು ಅಧ್ಯಕ್ಷ ಬಿ.ಎಸ್.ಗಣೇಶ್ ಉದ್ಘಾಟಿಸಿದರು. ಎಸ್.ಕುಮಾರ್, ಬಿ.ಕೆ.ಮೋಹನ್ ಇತರರಿದ್ದರು. 
ಶಿವಮೊಗ್ಗ

ಗ್ಯಾರಂಟಿಗಳಿಂದ ಮಹಿಳೆಯರಿಗೆ ಅನುಕೂಲ | Guarantee Scheme

ಶಿವಕುಮಾರ ಎಸ್.ಪಿ.
ಭದ್ರಾವತಿ: ರಾಜ್ಯದಲ್ಲಿ ಪಂಚ ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನದಿಂದ ಕೆಲವರು ಸರ್ಕಾರ ದಿವಾಳಿಯಾಗಿದೆ ಎನ್ನುತ್ತಿದ್ದರು. ಇನ್ನೂ ಕೆಲವರು ಅಭಿವೃದ್ಧಿ ಕಾರ್ಯಗಳು ಕುಂಠಿತವಾಗಿವೆ ಎನ್ನುತ್ತಿದ್ದರು. ಆದರೆ ಸರ್ಕಾರ ಎಲ್ಲವನ್ನೂ ಮೀರಿ ಮುಂದೆ ಸಾಗುತ್ತಿದೆ ಎಂದು ನಗರಸಭೆ ಸದಸ್ಯ ಬಿ.ಕೆ.ಮೋಹನ್ ಹೇಳಿದರು.
ತಾಲೂಕಿನ ಕಾರೇಹಳ್ಳಿ ಗ್ರಾಮದ ಹುಚ್ಚನದಾಸಪ್ಪ ದೇವಸ್ಥಾನದ ಆವರಣದಲ್ಲಿ ಆಯೋಜಿಸಿದ್ದ  ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಸಭೆ ಉದ್ಘಾಟಿಸಿ ಮಾತನಾಡಿದರು.
ಗ್ಯಾರಂಟಿ ಯೋಜನೆಗಳಿಂದ ಕೋಟ್ಯಂತರ ಜನರಿಗೆ ಅನುಕೂಲವಾಗುತ್ತಿದೆ. ಅದರಲ್ಲೂ ಮಹಿಳೆಯರಿಗೆ ಪ್ರಯೋಜನವಾಗಿದೆ.  ಯೋಜನೆಗಳನ್ನು ಸರ್ಕಾರ ಯಾವುದೋ ಒಂದು ಧರ್ಮ ಅಥವಾ ಒಂದು ಜಾತಿಗೆ ಸೀಮಿತಗೊಳಿಸಿಲ್ಲ. ಎಲ್ಲ ಜನರನ್ನೂ ತಲುಪುತ್ತಿದೆ. ಮುಂದಿನ ಬಾರಿಯೂ ಸಹ ರಾಜ್ಯದ ಜನರು ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸುತ್ತಾರೆ ಎಂಬ ವಿಶ್ವಾಸವಿದೆ ಎಂದರು.
ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ತಾಲೂಕು ಅಧ್ಯಕ್ಷ ಬಿ.ಎಸ್.ಗಣೇಶ್ ಮಾತನಾಡಿ, ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳು ಕೇವಲ ಭರವಸೆ ನೀಡುತ್ತವೆ. ಆದರೆ ಕಾಂಗ್ರೆಸ್ ನುಡಿದಂತೆ ನಡೆಯುತ್ತಿದೆ. ಯೋಜನೆಗಳಿಂದಾಗಿ ಇಂದು ಬಡವರು ನೆಮ್ಮದಿ ಕಾಣುವಂತಾಗಿದೆ. ಮಹಿಳೆಯರು ಸ್ವಾಭಿಮಾನದ ಬದುಕು ರೂಪಿಸಿಕೊಳ್ಳಲು ಸಹಕಾರಿಯಾಗಿದೆ ಎಂದು ಹೇಳಿದರು.
ಬ್ಲಾಕ್ ಕಾಂಗ್ರೆಸ್ ನಗರ ಅಧ್ಯಕ್ಷ ಎಸ್.ಕುಮಾರ್, ಗ್ರಾಮಾಂತರ ಅಧ್ಯಕ್ಷ ಎಚ್.ಎಲ್.ಷಡಕ್ಷರಿ, ಉದ್ಯಮಿ ಬಿ.ಕೆ.ಜಗನ್ನಾಥ್, ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷ ಬಿ.ಕೆ.ಶಿವಕುಮಾರ್, ನಗರಸಭೆ ಸದಸ್ಯರಾದ ಚನ್ನಪ್ಪ, ಬಸವರಾಜ, ನಗರ ಆಶ್ರಯ ಸಮಿತಿ ಅಧ್ಯಕ್ಷ ಬಿ.ಎಸ್.ಗೋಪಾಲ್ ಇತರರಿದ್ದರು.