ಮಲ್ಲಿಕಾರ್ಜುನ ರ್ಖಗೆ ಹೇಳಿಕೆ ಖಂಡಿಸಿ ಶಿಕಾರಿಪುರ ನಗರ ಠಾಣೆಗೆ ಬಿಜೆಪಿಯಿಂದ ದೂರು ಸಲ್ಲಿಸಲಾಯಿತು. ಪ್ರವಿಣ್ ಬೆಣ್ಣೆ, ವೀರನಗೌಡ, ನಿರಂಜನ್, ಮಧು, ರಾಜು, ಬಸವರಾಜ್, ಆಕಾಶ್ ಇತರರಿದ್ದರು.
- ಪ್ರಚೋದನಾಕಾರಿ ಭಾಷಣ
- ಜಿಲ್ಲೆಯ ವಿವಿಧೆಡೆ ಬಿಜೆಪಿ ಪ್ರತಿಭಟನೆ
- ದ್ವೇಷ ಹುಟ್ಟುಹಾಕುವ ಹುನ್ನಾರ
ಶಿಕಾರಿಪುರ: ಎಐಸಿಸಿ ಅಧ್ಯ ಮಲ್ಲಿಕಾರ್ಜುನ ರ್ಖಗೆ ಅಸ್ಸಾಂನಲ್ಲಿ ಚುನಾವಣಾ ಪ್ರಚಾರದ ವೇಳೆ ಪ್ರಚೋದನಾಕಾರಿ ಭಾಷಣ ಮಾಡಿದ್ದಾರೆ ಎಂದು ಆರೋಪಿಸಿ ಬಿಜೆಪಿಯಿಂದ ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ನಗರ ಠಾಣೆ ಇನ್ಸ್ಪೆಕ್ಟರ್ ಮೂಲಕ ಮನವಿ ಸಲ್ಲಿಸಲಾಯಿತು.
ಅಸ್ಸಾಂನಲ್ಲಿ ಚುನಾವಣಾ ಭಾಷಣದ ವೇಳೆ ಮುಸ್ಲಿಮರಿಗೆ ಪ್ರಚೋದನೆ ನೀಡಿದ್ದಾರೆ. ರಾಷ್ಟ್ರೀಯ ಪದ ಅಧ್ಯರಾಗಿ ಜವಾಬ್ದಾರಿಯುತ ಸ್ಥಾನದಲ್ಲಿರುವ ರ್ಖಗೆ ಅವರ ಇಂತಹ ಬೇಜವಾಬ್ದಾರಿ ಹೇಳಿಕೆ ದೇಶದ ಲಾಂತರ ಬಿಜೆಪಿ ಮತ್ತು ಆರ್ಎಸ್ಎಸ್ ಕಾರ್ಯಕರ್ತರ ಜೀವಕ್ಕೆ ಅಪಾಯ ತಂದೊಡ್ಡುವಂತಿದೆ ಎಂದು ದೂರಿದರು.
ಸಮಾಜದ ವಿವಿಧ ಧರ್ಮಗಳ ನಡುವೆ ದ್ವೇಷ ಮತ್ತು ಅಸಮಾಧಾನ ಉಂಟುಮಾಡುವ ಮೂಲಕ ಸಾರ್ವಜನಿಕ ಶಾಂತಿಗೆ ಭಂಗ ತರಲು ಪ್ರಯತ್ನಿಸಲಾಗಿದೆ. ದ್ವೇಷ ಭಾಷಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ನೀಡಿರುವ ನಿರ್ದೇಶನದಂತೆ ಯಾವುದೇ ಔಪಚಾರಿಕ ದೂರುಗಳಿಗಾಗಿ ಕಾಯದೆ ಪೊಲೀಸರು ತಾವಾಗಿಯೇ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಬೇಕು ಎಂದು ಒತ್ತಾಯಿಸಿದರು.
ಯುವಮೋರ್ಚಾ ಜಿಲ್ಲಾ ಕಾರ್ಯದರ್ಶಿ ಪ್ರವಿಣ್ ಬೆಣ್ಣೆ, ತಾಲೂಕು ಅಧ್ಯ ವೀರನಗೌಡ, ಪ್ರಧಾನ ಕಾರ್ಯದರ್ಶಿ ಎಸ್. ನಿರಂಜನ್, ಮಧು, ರಾಜು, ಬಸವರಾಜ್, ಆಕಾಶ್, ಸಂದೀಪ್, ಗುರುಪ್ರಸಾದ್ ಇತರರಿದ್ದರು.