ಶಿವಮೊಗ್ಗ: ಗೃಹ ಸಚಿವ ಪ್ರಿಯಾಂಕ್ ಖರ್ಗೆ ತಮ್ಮ ಖಾತೆಯನ್ನು ತಕ್ಷಣ ಬದಲಾಯಿಸಿಕೊಳ್ಳುವುದು ಸೂಕ್ತ ಎಂದು ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ ಹೇಳಿದರು.
ಪ್ರಿಯಾಂಕ್ ಖರ್ಗೆ ಅವರು ಗೃಹ ಖಾತೆ ಬಿಟ್ಟು ಮನರಂಜನೆ ನೀಡುವಂತಹ ಇಲಾಖೆ ಇದ್ದರೆ ತೆಗೆದುಕೊಳ್ಳಬೇಕು. ದಿನಕ್ಕೊಂದು ಹೇಳಿಕೆ ನೀಡುವುದೇ ಅವರ ಕೆಲಸವಾಗಿದೆ. ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಬಗ್ಗೆ ಹಗುರ ಮಾತು ಸರಿಯಲ್ಲ. ಕಲಬುರಗಿಯಲ್ಲೇ ಕಾನೂನು ನಿಯಂತ್ರಣಕ್ಕೆ ಸಿಗುತ್ತಿಲ್ಲ. ಅಧಿಕಾರ ಶಾಶ್ವತವೆಂಬ ಅಹಂಕಾರ ಪ್ರದರ್ಶನ ಮಾಡುತ್ತಿದ್ದಾರೆ. ರಾಜ್ಯದಲ್ಲಿ ಭಯೋತ್ಪಾದನಾ ಚಟುವಟಿಕೆಗಳು ಹೆಚ್ಚುತ್ತಿವೆ. ಆಡಳಿತ ನಡೆಸುವುದರಲ್ಲಿ ಗೃಹ ಇಲಾಖೆ ಸಂಪೂರ್ಣ ವಿಫಲವಾಗಿದೆ. ಜನರ ಕೆಲಸ ಮಾಡುವುದನ್ನು ಬಿಟ್ಟು ರಾಜಕಾರಣ ಮಾಡುತ್ತಿದ್ದಾರೆ ಎಂದು ಟೀಕಿಸಿದರು.
ಆರ್ಎಸ್ಎಸ್, ಬಿಜೆಪಿ ಬಗ್ಗೆ ಮಾತನಾಡುವುದೇ ಅವರ ಸಾಧನೆಯಾಗಿದೆ. ರಾಜ್ಯದಲ್ಲಿ ಹೆಣ್ಣುಮಕ್ಕಳ ಮೇಲೆ ಅತ್ಯಾಚಾರ, ಕೊಲೆಗಳು ಹೆಚ್ಚಳವಾಗುತ್ತಿವೆ. ಪ್ರಿಯಾಂಕ್ ಖರ್ಗೆ ಜವಾಬ್ದಾರಿ ಮರೆತು ವರ್ತಿಸುತ್ತಿದ್ದಾರೆ. ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಬಗ್ಗೆ ಮಾತನಾಡುವುದನ್ನು ಮೊದಲು ಬಿಡಬೇಕು ಎಂದು ಸಲಹೆ ನೀಡಿದರು.