ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ
- ಬೆಂಗಳೂರು ವಿಭಾಗದ ಎಸ್‌ಎಸ್‌ಎಲ್ಸಿ ಫಲಿತಾಂಶ ಸುಧಾರಣಾ ಕಾರ್ಯಾಗಾರ
- ಫಲಿತಾಂಶ ಕುಸಿದ ಶಾಲೆಗಳ ಶಿಕ್ಷಕರಿಗೆ ಶಿಕ್ಷೆ ಕೊಡುವ ವ್ಯವಸ್ಥೆ
- ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಹೇಳಿಕೆ
ಶಿವಮೊಗ್ಗ: ಮಕ್ಕಳ ದಾಖಲಾತಿ ಹೆಚ್ಚಳ, ಉತ್ತಮ ಫಲಿತಾಂಶ(Result) ಸೇರಿದಂತೆ ಸರ್ಕಾರಿ ಶಾಲೆಗಳ ಶ್ರೇಯೋಭಿವೃದ್ಧಿಗೆ ಶ್ರಮಿಸುವ ಶಿಕ್ಷಕರಿಗೆ ಮುಂದಿನ ವರ್ಷದಿಂದ ಪ್ರೋತ್ಸಾಹಧನ(ಇನ್ಸೆಂಟೀವ್) (Incentive)ನೀಡಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಹೇಳಿದರು.
ನಗರದ ಎನ್‌ಇಎಸ್‌ನ ಕಾನೂನು ಮಹಾವಿದ್ಯಾಲಯದಲ್ಲಿ ಶನಿವಾರ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ರಾಜ್ಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ನಿರ್ದೇಶನಾಲಯ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಉಪ ನಿರ್ದೇಶಕರ ಕಚೇರಿ, ಶಾಲಾ ಶಿಕ್ಷಣ ಇಲಾಖೆ ಸಹಯೋಗದಲ್ಲಿ ಬೆಂಗಳೂರು ವಿಭಾಗ(ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ)ದ ಪ್ರಸಕ್ತ ಸಾಲಿನ ಎಸ್‌ಎಸ್‌ಎಲ್ಸಿ(SSLC)ಫಲಿತಾಂಶ ಸುಧಾರಣಾ ಕಾರ್ಯಾಗಾರ(Workshop)ಉದ್ಘಾಟಿಸಿ ಅವರು ಮಾತನಾಡಿದರು.
ಸಾಕಷ್ಟು ಸೌಕರ್ಯಗಳನ್ನು ಒದಗಿಸಿದ ನಡುವೆಯೂ ಬಹಳಷ್ಟು ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ಫಲಿತಾಂಶ ಕುಸಿತ ಕಾಣುತ್ತಿದೆ. ಹಾಗಾಗಿ ಅಂತಹ ಶಾಲೆಗಳಲ್ಲಿ ಶಿಕ್ಷಕರಿಗೆ ಶಿಕ್ಷೆ ಕೊಡುವ ವ್ಯವಸ್ಥೆಯೂ ನಮ್ಮಲ್ಲಿದೆ. ಇದೀಗ ಸರ್ಕಾರಿ ಶಾಲೆ(Govt school)ಗಳಿಗೆ ಮಕ್ಕಳ ದಾಖಲಾತಿ ಮಾಡುವ, ಉತ್ತಮ ಫಲಿತಾಂಶ ನೀಡುವ ಶಿಕ್ಷಕರನ್ನು ಗುರುತಿಸುವ ವ್ಯವಸ್ಥೆ ಜಾರಿಗೆ ಬರಲಿದ್ದು, ಪ್ರೋತ್ಸಾಹಧನ ವಿತರಣೆಗೆ ನಿಯಾಮಾವಳಿಗಳನ್ನು ರೂಪಿಸಲಾಗುವುದು ಎಂದರು.
ಸರ್ಕಾರಿ ಶಾಲೆಗಳಲ್ಲಿ ಉತ್ತಮ ಶಿಕ್ಷಕರು ಇದ್ದಾರೆ. ಎಲ್ಲರೂ ಮೇರಿಟ್(Merit)ಮೇಲೆ ಶಿಕ್ಷಕರಾಗಿ ಕೆಲಸ ಮಾಡುತ್ತಿದ್ದಾರೆ. ಹಾಗಾಗಿ ಅವರಿಂದ ಉತ್ತಮ ಫಲಿತಾಂಶ ನಿರೀಕ್ಷೆ ಮಾಡಲಾಗುತ್ತಿದೆ. ಅದೇ ರೀತಿ ಕಡಿಮೆ ಫಲಿತಾಂಶ ಕೊಡುವ ಶಿಕ್ಷಕರ ವಿರುದ್ಧ ಕ್ರಮವೂ ಇದೆ ಎಂದು ಎಚ್ಚರಿಕೆ ನೀಡಿದರು.