ಬೆಂಗಳೂರಲ್ಲಿ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿದ ಭದ್ರಾವತಿ ವಿಐಎಸ್‌ಎಲ್ ಗುತ್ತಿಗೆ ಕಾರ್ಮಿಕ ಸಂಘದ ಪದಾಧಿಕಾರಿಗಳು. ಜೆಡಿಎಸ್ ನಾಯಕಿ ಶಾರದಾ ಅಪ್ಪಾಜಿ ಇತರರಿದ್ದರು. 
ಶಿವಮೊಗ್ಗ

ವಿಐಎಸ್‌ಎಲ್‌ಗೆ ಬಂಡವಾಳ ಹೂಡಿಕೆ ಶೀಘ್ರ | VISL

ಭದ್ರಾವತಿ: ಜುಲೈ ಅಂತ್ಯದೊಳಗೆ ವಿಐಎಸ್‌ಎಲ್ ಕಾರ್ಖಾನೆಗೆ ಬೇಕಿರುವ ಅಗತ್ಯ ಬಂಡವಾಳ ತೊಡಗಿಸಲಾಗುವುದು. ಕಾರ್ಮಿಕರು  ಭಯಪಡುವ ಅಗತ್ಯವಿಲ್ಲ ಎಂದು ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕಾ ಸಚಿವ ಎಚ್.ಡಿ.ಕುಮಾರಸ್ವಾಮಿ ಹೇಳಿದರು.
ಬೆಂಗಳೂರಿನ ಜೆ.ಪಿ.ನಗರದ ನಿವಾಸದಲ್ಲಿ ತಾಲೂಕಿನ ಜೆಡಿಎಸ್ ನಾಯಕಿ ಶಾರದಾ ಅಪ್ಪಾಜಿ ನೇತೃತ್ವದಲ್ಲಿ ಭೇಟಿ ಮಾಡಿದ ವಿಐಎಸ್‌ಎಲ್ ಗುತ್ತಿಗೆ ಕಾರ್ಮಿಕರಿಗೆ ಭರವಸೆ ನೀಡಿದ ಅವರು, ನಿಮ್ಮ ಬೇಡಿಕೆಯಂತೆ ನಿಮಗೆ ಕೆಲಸದ ದಿನಗಳನ್ನು ಹೆಚ್ಚು ಮಾಡಲು ಮತ್ತು ಕಾರ್ಖಾನೆಯ ಉತ್ಪಾದನೆಯನ್ನು ಹೆಚ್ಚಿಸಲು ಎಲ್ಲ ಪ್ರಯತ್ನಗಳೂ ನಿರಂತರವಾಗಿ ನಡೆಯುತ್ತಿವೆ. ನಿಮಗೆ ಯಾವುದೇ ಆತಂಕ ಬೇಡ ಎಂದರು.
ಗುತ್ತಿಗೆ ಕಾರ್ಮಿಕರ ಸಂಘದ ಅಧ್ಯಕ್ಷ ಸುರೇಶ್, ರಾಕೇಶ್, ಅಮೃತಕುಮಾರ್, ಕಾರ್ಮಿಕರು ಹಾಗೂ ಜೆಡಿಎಸ್ ಮುಖಂಡರು ಇದ್ದರು.