ಜೆಡಿಎಸ್ ಶಿಕಾರಿಪುರ ತಾಲೂಕು ಅಧ್ಯಕ್ಷರಾಗಿ ಮರು ನೇಮಕವಾದ ಯೋಗೀಶ್ ಅವರನ್ನು ಪದಾಧಿಕಾರಿಗಳು ಸನ್ಮಾನಿಸಿದರು. ಸಂಗಯ್ಯ, ಜಯಣ್ಣ, ಶಿವಕುಮಾರ್, ಹೆಮಂತ್ ಇತರರಿದ್ದರು.
ಶಿಕಾರಿಪುರ: ಕರ್ನಾಟಕದಲ್ಲಿ ಜೆಡಿಎಸ್ ಪಕ್ಷವು ಒಂದು ಪ್ರಾದೇಶಿಕ ಪಕ್ಷವಾಗಿ ಜನಮನದಲ್ಲಿ ನೆಲೆ ನಿಂತಿದೆ. ಪಕ್ಷ ಸ್ಥಾಪನೆಯಾಗಿ 25 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ನ.21 ಮತ್ತು 22ರಂದು ರಜತ ಮಹೋತ್ಸವ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ತಾಲೂಕು ಜೆಡಿಎಸ್ ಅಧ್ಯಕ್ಷ ಯೋಗೀಶ್ ಹೇಳಿದರು.
ಕಾರ್ಯಕ್ರಮ ಬೆಂಗಳೂರಿನ ಜೆಪಿ ಭವನದ ಪಕ್ಷದ ಕಚೇರಿಯಲ್ಲಿ ನಡೆಯಲಿದೆ. ಇಲ್ಲಿಂದ ತೆರಳಲು ಬಸ್ ವ್ಯವಸ್ಥೆ ಮಾಡಲಾಗಿದೆ. ಎಚ್.ಡಿ.ದೇವೇಗೌಡ ಅವರು ಪ್ರಧಾನಿಯಾಗಿದ್ದಾಗ ರೈತರ ಸಂಕಷ್ಟಗಳಿಗೆ ಸ್ಪಂದಿಸಿದ್ದಾರೆ. ಎಚ್.ಡಿ.ಕುಮಾರಸ್ವಾಮಿ ಅವರು ಮುಖ್ಯಮಂತ್ರಿಯಾಗಿ ರಾಜ್ಯದಲ್ಲಿ ಅನೇಕ ಯೋಜನೆಗಳನ್ನ ನೀಡಿದ್ದಾರೆ ಎಂದು ಗುರುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು
ಮುಂಬರುವ ಪಟ್ಟಣ ಪಂಚಾಯಿತಿ, ಪುರಸಭೆ, ತಾಲೂಕು ಪಂಚಾಯಿತಿ, ಜಿಲ್ಲಾ ಪಂಚಾಯಿತಿ, ವಿಧಾನಸಭಾ ಚುನಾವಣೆಗಳನ್ನು ಎದುರಿಸಲು ರೂಪುರೇಷೆಗಳನ್ನು ತಯಾರಿಸಿಕೊಳ್ಳಲಾಗುತ್ತಿದೆ. ಪಕ್ಷದ ಬಲವರ್ಧನೆ ಕಾರ್ಯಕರ್ತರ ಜವಾಬ್ದಾರಿ ಎಂದು ಹೇಳಿದರು.
ತಾಲೂಕು ಅಧ್ಯಕ್ಷರಾಗಿ ಮರು ನೇಮಕವಾದ ಯೋಗೀಶ್ ಹಾಗೂ ನೂತನ ಪದಾಧಿಕಾರಿಗಳನ್ನು ಸನ್ಮಾನಿಸಲಾಯಿತು. ಜಿಲ್ಲಾ ಉಪಾಧ್ಯಕ್ಷ ಜಯಣ್ಣ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಂಗಯ್ಯ, ಜೆಡಿಎಸ್ ತಾಲೂಕು ಮಹಿಳಾ ಘಟಕದ ಅಧ್ಯಕ್ಷೆ ಆಶಾ, ತಾಲೂಕು ಪ್ರಧಾನ ಕಾರ್ಯದರ್ಶಿ ಶಿವಕುಮಾರ್, ನಗರಾಧ್ಯಕ್ಷ ಹೇಮಂತ್, ಎಸ್ಸಿ ಘಟಕ ಅಧ್ಯಕ್ಷ ನಂದೀಶ್ ಇದ್ದರು