ಜಲ ಸಂಪನ್ಮೂಲ ಸಚಿವ ರಾಮಲಿಂಗಾ ರೆಡ್ಡಿ.
- ಭದ್ರಾ ಜಲಾಶಯಕ್ಕೆ ಭೇಟಿ ನೀಡಿ ಪರಿಸ್ಥಿತಿ ಅವಲೋಕಿಸಿದ ಸಚಿವ ರಾಮಲಿಂಗಾ ರೆಡ್ಡಿ
- ಕೃಷ್ಣಾ ಮೇಲ್ದಂಡೆ ಯೋಜನೆಯ ಅಧಿಸೂಚನೆ ಇನ್ನೂ ಹೊರಬರಬೇಕಿದೆ ಎಂದ ಸಚಿವರು
- ಕರ್ನಾಟಕ ಸರ್ಕಾರ ಅಧಿಸೂಚನೆ ಶೀಘ್ರ ಹೊರಡಿಸುವಂತೆ ಮನವಿ
ಶಿವಮೊಗ್ಗ: ಕಳಸಾ-ಬಂಡೂರಿ ಹಾಗೂ ಮಹಾದಾಯಿ ಯೋಜನೆಗಳಿಗೆ ಅರಣ್ಯ ಹಾಗೂ ವನ್ಯಜೀವಿ ಇಲಾಖೆ(Forests and Wildlife Department)ಯ ಐದು ರೀತಿಯ ಅನುಮತಿಗಳು ಅಗತ್ಯವಿದೆ ಎಂದು ಜಲ ಸಂಪನ್ಮೂಲ ಸಚಿವ ರಾಮಲಿಂಗಾ ರೆಡ್ಡಿ ಹೇಳಿದರು.
ಭದ್ರಾ ಜಲಾಶಯಕ್ಕೆ ಭಾನುವಾರ ಭೇಟಿ ನೀಡಿ ಪರಿಸ್ಥಿತಿ ಅವಲೋಕಿಸಿದ ಬಳಿಕ ಸುದ್ದಿಗಾರೊಂದಿಗೆ ಮಾತನಾಡಿದ ಅವರು, ಮೇಕೆದಾಟು ಯೋಜನೆ(Mekedaatu project)ಗೆ ಸಂಬಂಧಿಸಿ ಸುಪ್ರೀಂಕೋರ್ಟ್‌ನಲ್ಲಿ ಎರಡು ಬಾರಿ ರಾಜ್ಯದ ಪರ ತೀರ್ಪು ಬಂದಿದೆ. ಕೃಷ್ಣಾ ಮೇಲ್ದಂಡೆ ಯೋಜನೆ(Krishna Upper River Project)ಯ ಅಧಿಸೂಚನೆ ಇನ್ನೂ ಹೊರಬರಬೇಕಿದೆ ಎಂದರು.
ಆಂಧ್ರಪ್ರದೇಶ ಹಾಗೂ ತೆಲಂಗಾಣ ನ್ಯಾಯಾಲಯ(Andhra Pradesh and Telangana Courts)ಕ್ಕೆ ಹೋಗಿವೆ. ಕರ್ನಾಟಕ ಸರ್ಕಾರ ಅಧಿಸೂಚನೆ ಶೀಘ್ರ ಹೊರಡಿಸುವಂತೆ ಮನವಿ ಮಾಡಿಕೊಂಡಿದೆ. ವಿವಿಧ ಯೋಜನೆಗಳ ಕುರಿತು ಸಂಬಂಧಿಸಿದ ರಾಜ್ಯಗಳ ಮುಖ್ಯಮಂತ್ರಿಗಳನ್ನು ಕರೆದು ಚರ್ಚೆ ನಡೆಸುವ ಬಗ್ಗೆ ಮುಖ್ಯಮಂತ್ರಿಗಳು ಸಹ ಒಪ್ಪಿದ್ದಾರೆ ಎಂದು ಹೇಳಿದರು.