ಕನ್ನಡ ರಾಜ್ಯೋತ್ಸವ ಅಂಗವಾಗಿ ಶಿವಮೊಗ್ಗ ನಗರದ ನೆಹರು ಕ್ರೀಡಾಂಗಣದಲ್ಲಿ ಗಮನಸೆಳೆದ ಮಕ್ಕಳ ನೃತ್ಯ ಪ್ರದರ್ಶನ.
ಶಿವಮೊಗ್ಗ: ಕನ್ನಡ ರಾಜ್ಯೋತ್ಸವದ ಅಂಗವಾಗಿ ನಗರದ ಸೈನ್ಸ್ ಮೈದಾನದಿಂದ ನೆಹರು ಕ್ರೀಡಾಂಗಣದವರೆಗೆ ಭುವನೇಶ್ವರಿ ದೇವಿಯ ಭವ್ಯ ಮೆರವಣಿಗೆ ನಡೆಸಲಾಯಿತು.
ಬಿ.ಎಚ್.ರಸ್ತೆ, ಕರ್ನಾಟಕ ಸಂಘ, ಶಿವಪ್ಪ ನಾಯಕ ವೃತ್ತ, ಅಮೀರ್ ಅಹ್ಮದ್ ವೃತ್ತ, ನೆಹರು ರಸ್ತೆ, ಟಿ.ಸೀನಪ್ಪ ಶೆಟ್ಟಿ ವೃತ್ತ, ಬಾಲರಾಜ್ ಅರಸು ರಸ್ತೆ, ಮಹಾವೀರ ವೃತ್ತ, ಸವಳಂಗ ರಸ್ತೆ, ಶಿವಮೂರ್ತಿ ವೃತ್ತದ ಮಾರ್ಗವಾಗಿ ನೆಹರು ಮೈದಾನಕ್ಕೆ ತಲುಪಿತು. ಧ್ವಜಾರೋಹಣದ ಬಳಿಕ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಯುವಜನ ಸೇವಾ, ಕ್ರೀಡಾ ಇಲಾಖೆ ನಡೆಸಿಕೊಟ್ಟ ಸಾಂಸ್ಕೃತಿಕ ಕಾರ್ಯಕ್ರಮಗಳು ಗಮನ ಸೆಳೆದವು.
ಸಂಜೆ ಕುವೆಂಪು ರಂಗಮಂದಿರದಲ್ಲಿ ಪೊಲೀಸ್ ಇಲಾಖೆಯಿಂದ ಬ್ಯಾಂಡ್ ಪ್ರದರ್ಶನ ಆಕರ್ಷಕವಾಗಿತ್ತು. ಶಿವಮೊಗ್ಗ ನಗರದ ಪ್ರಾಥಮಿಕ ಮತ್ತು ಪ್ರೌಢಶಾಲಾ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ರಂಗೇರಿದವು.