ಎಂಇಎಸ್ ರದ್ದು ಮಾಡುವಂತೆ ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆ ಸಿಂಹ ಸೇನೆ ಜಿಲ್ಲಾ ಘಟಕದ ಕಾರ್ಯಕರ್ತರು ನಗರದ ಟಿ.ಸೀನಪ್ಪ ಶೆಟ್ಟಿ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು. ಎಸ್.ಎಂ.ಮಧುಸೂದನ್, ಅಭಿಜಿತ್ ನವುಲೆ ಇತರರಿದ್ದರು.
- ಶಿವಮೊಗ್ಗದ ಟಿ.ಸೀನಪ್ಪ ಶೆಟ್ಟಿ ವೃತ್ತದಲ್ಲಿ ಕಾರ್ಯಕರ್ತರ ಆಕ್ರೋಶ
- ರಾಜ್ಯದಿಂದಲೇ ಗಡಿಪಾರು ಮಾಡಬೇಕು ಎಂದು ಆಗ್ರಹ
ಶಿವಮೊಗ್ಗ: ಕರ್ನಾಟಕ(Karnataka)ದಲ್ಲಿ ಎಂಇಎಸ್(ಮಹಾರಾಷ್ಟ್ರ ಏಕೀಕರಣ ಸಮಿತಿ) ರದ್ದು(Ban) ಮಾಡುವಂತೆ ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆ ಸಿಂಹ ಸೇನೆ ಜಿಲ್ಲಾ ಘಟಕದ ಕಾರ್ಯಕರ್ತರು ಭಾನುವಾರ ನಗರದ ಟಿ.ಸೀನಪ್ಪ ಶೆಟ್ಟಿ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.
ಬೆಳಗಾವಿಯಲ್ಲಿ ಎಂಇಎಸ್(MES)ನವರು ನ.1ರ ಕನ್ನಡ ರಾಜ್ಯೋತ್ಸವವನ್ನು ಕರಾಳ ದಿನವಾಗಿ ಆಚರಿಸಿದ್ದಾರೆ. ಕರಾಳ ದಿನದಲ್ಲಿ ಪಾಲ್ಗೊಂಡಿದ್ದವರನ್ನು ರಾಜ್ಯದಿಂದಲೇ ಗಡಿಪಾರು ಮಾಡಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.
ಪ್ರತಿ ವರ್ಷ ಎಂಇಎಸ್ ಕಾರ್ಯಕರ್ತರು ಉದ್ಧಟತನ ಮೆರೆಯುತ್ತಿದ್ದಾರೆ. ಅದನ್ನು ನೋಡಿಯೂ ರಾಜ್ಯ ಸರ್ಕಾರ ಕಣ್ಮುಚ್ಚಿ ಕುಳಿತಿದೆ. ಕರ್ನಾಟಕದಲ್ಲಿ ಎಂಇಎಸ್ ಬ್ಯಾನ್ ಮಾಡಬೇಕು. ಅವರ ಎಲ್ಲ ಕಾರ್ಯಕರ್ತರ ಮೇಲೆ ಮೊಕದ್ದಮೆಗಳನ್ನು ದಾಖಲು ಮಾಡಿ ಗಡಿಪಾರು ಮಾಡಬೇಕು ಎಂದು ಒತ್ತಾಯಿಸಿದರು.
ಕರವೇ ಸಿಂಹ ಸೇನೆ ಜಿಲ್ಲಾಧ್ಯಕ್ಷ ಎಸ್.ಎಂ.ಮಧುಸೂದನ್, ಪ್ರಧಾನ ಕಾರ್ಯದರ್ಶಿ ಅಭಿಜಿತ್ ನವುಲೆ, ನಗರ ಘಟಕದ ಅಧ್ಯಕ್ಷ ಕಾರ್ತಿಕ್ ಪೂಜಾರಿ, ಉಪಾಧ್ಯಕ್ಷ ನಯಾಜ್, ರಘುನಂದನ್, ಗೋಪಿ, ಲಿಂಗರಾಜ್ ಮತ್ತಿತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.