ಶಿವಮೊಗ್ಗದಲ್ಲಿ ಕರ್ನಾಟಕ ಕಾರ್ಯನಿತರ ಪತ್ರಕರ್ತರ ಸಂಘದ ಶಿವಮೊಗ್ಗ ಜಿಲ್ಲಾ ಶಾಖೆಯ ನಿರ್ಗಮಿತ ಅಧ್ಯಕ್ಷ ಕೆ.ವಿ.ಶಿವಕುಮಾರ್ ಮಾತನಾಡಿದರು. ಎಚ್.ಯು.ವೈದ್ಯನಾಥ್, ವಿ.ಟಿ.ಅರುಣ್, ಆರ್.ಎಸ್.ಹಾಲಸ್ವಾಮಿ, ಕೆ.ಎಸ್.ಹುಚ್ರಾಯಪ್ಪ ಸುದ್ದಿಗೋಷ್ಠಿಯಲ್ಲಿದ್ದರು.
ಶಿವಮೊಗ್ಗ: ಕರ್ನಾಟಕ ಕಾರ್ಯನಿತರ ಪತ್ರಕರ್ತರ ಸಂಘದ ಶಿವಮೊಗ್ಗ ಜಿಲ್ಲಾ ಶಾಖೆಯ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ(Oath-taking ceremony)ಡಿ.20ರಂದು ಬೆಳಗ್ಗೆ 10ಕ್ಕೆ ಪತ್ರಿಕಾ ಭವನದಲ್ಲಿ ನಡೆಯಲಿದೆ ಎಂದು ನಿಯೋಜಿತ ಜಿಲ್ಲಾಧ್ಯಕ್ಷ ಎಚ್.ಯು.ವೈದ್ಯನಾಥ್ ಹೇಳಿದರು.
ಜಿಲ್ಲಾ ಶಾಖೆಯ ನಿರ್ಗಮಿತ ಅಧ್ಯಕ್ಷ ಕೆ.ವಿ.ಶಿವಕುಮಾರ್ ಅಧ್ಯಕ್ಷತೆಯಲ್ಲಿ ಪದಗ್ರಹಣ ನಡೆಯಲಿದ್ದು, ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು(shivananda tagaduru) ಕಾರ್ಯಕ್ರಮ ಉದ್ಘಾಟಿಸುವರು ಎಂದು ಬುಧವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ರಾಜ್ಯ ಉಪಾಧ್ಯಕ್ಷ, ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಎಚ್.ಬಿ.ಮದನ್‌ಗೌಡ ದಿಕ್ಸೂಚಿ ಭಾಷಣ(Compass speech) ಮಾಡುವರು. ನೂತನ ಪದಾಧಿಕಾರಿಗಳು ಮತ್ತು ಕಾರ್ಯಕಾರಿ ಸಮಿತಿ ಸದಸ್ಯರಿಗೆ ರಾಜ್ಯ ಪ್ರಧಾನ ಕಾರ್ಯದರ್ಶಿ ಜಿ.ಸಿ.ಲೋಕೇಶ್ ಪ್ರಮಾಣ ವಚನ ಬೋಧಿಸುವರು. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಿರಿಯ ಸಹಾಯಕ ನಿರ್ದೇಶಕ ಆರ್.ಮಾರುತಿ, ಸಂಘದ ಹಾಸನ ಜಿಲ್ಲಾಧ್ಯಕ್ಷ ಜೆ.ಆರ್.ಕೆಂಚೇಗೌಡ ಮುಖ್ಯ ಅತಿಥಿಯಾಗಿ ಪಾಲ್ಗೊಳ್ಳುವರು ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಸಂಘದ ರಾಜ್ಯ ಚುನಾವಣಾಧಿಕಾರಿಯಾಗಿ ಕಾರ್ಯನಿರ್ವಹಿಸಿದ ಎನ್.ರವಿಕುಮಾರ್, ಜಿಲ್ಲಾ ಚುನಾವಣಾಧಿಕಾರಿಯಾಗಿದ್ದ ಸಹಕಾರ ಇಲಾಖೆಯ ಸಹಾಯಕ ನಿಬಂಧಕ ಟಿ.ವಿ.ಶ್ರೀನಿವಾಸ್, ನಿರ್ಗಮಿತ ಜಿಲ್ಲಾಧ್ಯಕ್ಷ ಕೆ.ಇ.ಶಿವಕುಮಾರ್, ಪ್ರಧಾನ ಕಾರ್ಯದರ್ಶಿ ವಿ.ಟಿ.ಅರುಣ್ ಅವರನ್ನು ಸನ್ಮಾನಿಸಲಾಗುವುದು. ಇದೇ ವೇಳೆ ನೂತನ ಕಾರ್ಯಕಾರಿ ಸಮಿತಿ ಸದಸ್ಯರು ಅಧಿಕಾರ ಸ್ವೀಕಾರ ಮಾಡಲಿದ್ದಾರೆ ಎಂದರು.
ನಿರ್ಗಮಿತ ಅಧ್ಯಕ್ಷ ಕೆ.ವಿ.ಶಿವಕುಮಾರ್, ನಿರ್ಗಮಿತ ಪ್ರಧಾನ ಕಾರ್ಯದರ್ಶಿ ವಿ.ಟಿ.ಅರುಣ್, ನಿಯೋಜಿತ ಪ್ರಧಾನ ಕಾರ್ಯದರ್ಶಿ ಆರ್.ಎಸ್.ಹಾಲಸ್ವಾಮಿ, ನಿಯೋಜಿತ ಉಪಾಧ್ಯಕ್ಷ ಕೆ.ಎಸ್.ಹುಚ್ರಾಯಪ್ಪ ಸುದ್ದಿಗೋಷ್ಠಿಯಲ್ಲಿದ್ದರು.