ಕುವೆಂಪು ವಿವಿಯಲ್ಲಿ ಆರನೇ ರ‌್ಯಾಂಕ್ ಪಡೆದ ಬಿಕಾಂ ವಿದ್ಯಾರ್ಥಿನಿ ಮೇಘನಾ ಅವರನ್ನು ಸನ್ಮಾನಿಸಲಾಯಿತು. ಡಾ. ಧನಂಜಯ ಸರ್ಜಿ, ನಟರಾಜ್ ಭಾಗವತ್, ನಾಗರಾಜ್ ಸಭಾಹಿತ್ ಇತರರಿದ್ದರು. 
ಶಿವಮೊಗ್ಗ

ಉದ್ಯೋಗ ಪಡೆಯಲು ಕೌಶಲ ಕಲಿಕೆ ಅವಶ್ಯ

ಪ್ರಮುಖ ಮುಖ್ಯಾಂಶಗಳು

  • ವಿಧಾನ ಪರಿಷತ್ ಸದಸ್ಯ ಡಾ. ಧನಂಜಯ ಸರ್ಜಿ ಅಭಿಮತ
ತ್ಯಾಗರ್ತಿ: ಯುವಜನರಿಗೆ ಉದ್ಯೋಗ ಪಡೆಯಲು ಅವಶ್ಯವಿರುವ ಕೌಶಲ ಕಲಿಕೆಗೆ ಪೂರಕ ವಾತಾವರಣ ನಿರ್ಮಿಸಿರುವುದು ಶ್ಲಾಘನೀಯ ಎಂದು ವಿಧಾನ ಪರಿಷತ್ ಸದಸ್ಯ ಡಾ. ಧನಂಜಯ ಸರ್ಜಿ ಹೇಳಿದರು.
ಸಾಗರ ತಾಲೂಕಿನ ಹೆಗ್ಗೋಡು ವಿದ್ಯಾಭಿವೃದ್ಧಿ ಸಂಘದ ಶಿಕ್ಷಣ ಸಂಸ್ಥೆಯಿಂದ ಎಸ್‌ಎಸ್‌ಎಲ್‌ಸಿ, ಪಿಯು ಮತ್ತು ಪದವಿ ವಿಭಾಗದಲ್ಲಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಏರ್ಪಡಿಸಿದ್ದ ಪ್ರತಿಭಾ ಪುರಸ್ಕಾರ ಸಮಾರಂಭ ಉದ್ಘಾಟಿಸಿ ಮಾತನಾಡಿದರು.
ಶಿಕ್ಷಣದಲ್ಲಿ ಸಾಕಷ್ಟು ಬದಲಾವಣೆ ಆಗುತ್ತಿದ್ದು ಉದ್ಯೋಗ ಪಡೆಯಲು ಆಧುನಿಕ ಶಿಕ್ಷಣ ಅವಶ್ಯ. ಪ್ರತಿಯೊಬ್ಬ ವಿದ್ಯಾರ್ಥಿಯೂ ಜೀವನದಲ್ಲಿ ಗುರಿ ಇಟ್ಟುಕೊಂಡು ಸಾಧನೆ ಮಾಡಬೇಕು. ಓದಿನ ಜತೆ ಪಠ್ಯೇತರ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಬೇಕು. ಹೊಸ ಆಲೋಚನೆಗಳು ಸದಾ ಇರಬೇಕು ಎಂದು ತಿಳಿಸಿದರು.
ಜಿಲ್ಲಾ ಬ್ರಾಹ್ಮಣ ಮಹಾಸಭಾ ಅಧ್ಯಕ್ಷ ನಟರಾಜ್ ಭಾಗವತ್ ಮಾತನಾಡಿ, ಪಾಲಕರು ಮಕ್ಕಳಿಗಾಗಿ ಕಷ್ಟಪಟ್ಟು ಶಿಕ್ಷಣ ಕೊಡಿಸುತ್ತಾರೆ. ಶಿಕ್ಷಣದೊಂದಿಗೆ ಉತ್ತಮ ಸಂಸ್ಕಾರ ಇದ್ದಲ್ಲಿ ಒಳ್ಳೆಯ ಬದುಕು ಕಟ್ಟಿಕೊಳ್ಳಲು ಸಾಧ್ಯ ಎಂದರು.
ನಿವೃತ್ತ ಉಪನ್ಯಾಸಕ ಎ.ಎಸ್.ಗಣಪತಿ, ರಾಜಪ್ಪ ಮತ್ತು ಧರ್ಮಪ್ಪ ಅವರನ್ನು ಸನ್ಮಾನಿಸಲಾಯಿತು. ಕುವೆಂಪು ವಿವಿಯ ಬಿಕಾಂ ವಿಭಾಗದಲ್ಲಿ ಆರನೇ ರ‌್ಯಾಂಕ್ ಪಡೆದ ವಿದ್ಯಾರ್ಥಿನಿ ಮೇಘನಾ ಅವರನ್ನು ಸನ್ಮಾನಿಸಲಾಯಿತು.
ಎಸ್‌ಎಸ್‌ಎಲ್‌ಸಿ, ಪಿಯು, ಪದವಿ ವಿಭಾಗದಲ್ಲಿ ಹೆಚ್ಚು ಅಂಕ ಪಡೆದ ಹಾಗೂ ಸಿಎ ಪರೀಕ್ಷೆಯಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು. ಶಿಕ್ಷಣ ಸಂಸ್ಥೆ ಅಧ್ಯಕ್ಷ ನಾಗರಾಜ್ ಸಭಾಹಿತ್, ಕಾರ್ಯದರ್ಶಿ ಎಂ.ಎಸ್.ನಾಗರಾಜ್, ಸತ್ಯನಾರಾಯಣ ಬಾಗಿ, ಎಂ.ಎಂ.ತಿಮ್ಮಪ್ಪ, ವಸುಂಧರಾ, ನಾಗೇಂದ್ರ ಎಸ್.ಗುಮ್ಮಾನಿ, ವಿಠಲ ಪೈ, ಮಂಗಳಾ, ರಾಜೇಶ್ ಮಾವಿನಸರ ಇತರರಿದ್ದರು.