ತುಂಗಾ ಏತ ನೀರಾವರಿ ಯೋಜನೆಗೆ ಸಂಬಂಧಿಸಿ ಸರ್ಕಾರ ವಿದ್ಯುತ್ ಬಿಲ್ ಪಾವತಿಸುವಂತೆ ಒತ್ತಾಯಿಸಿ ಎಚ್.ಆರ್.ಬಸವರಾಜಪ್ಪ, ಶಾರದಾ ಪೂರ‌್ಯಾನಾಯ್ಕಾ, ಭಾಗ್ಯಾ, ಪಿ.ಡಿ.ಮಂಜಪ್ಪ. ಎ.ಡಿ.ನಾಗರಾಜಪ್ಪ, ಜಿ.ಎನ್.ಪಂಚಾಕ್ಷರಿ ಮತ್ತಿತರರು ಡಿಸಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು. 
ಶಿವಮೊಗ್ಗ

ಸರ್ಕಾರ ರೈತಪರ ನಿಲುವು ಪ್ರದರ್ಶಿಸಲಿ I pro farmar goverment

ಪ್ರಮುಖ ಮುಖ್ಯಾಂಶಗಳು

  • ಡಿಸಿ ಕಚೇರಿ ಎದುರು ರೈತಸಂಘದಿಂದ ಪ್ರತಿಭಟನೆ
  • ವಿದ್ಯುತ್ ಬಿಲ್ ಬಾಕಿ ಪಾವತಿಸುವಂತೆ ಆಗ್ರಹ
  • ನೀರಾವರಿ ಯೋಜನೆಗಳಿಗೆ ವಿದ್ಯುತ್ ಸಂಪರ್ಕ ಕಡಿತ
ಶಿವಮೊಗ್ಗ: ಮೆಸ್ಕಾಂ(mescom) ಗೆ ಸರ್ಕಾರದಿಂದ ವಿದ್ಯುತ್ ಬಿಲ್ ಬಾಕಿ ಉಳಿಸಿಕೊಂಡಿರುವ ಕಾರಣ ತುಂಗಾ ಏತ ನೀರಾವರಿ ಯೋಜನೆಗಳಿಗೆ ವಿದ್ಯುತ್ ಸಂಪರ್ಕ ಕಡಿತಗೊಳಿಸಲಾಗಿದೆ. ಸರ್ಕಾರ (goverment) ಕೂಡಲೇ ಬಿಲ್ ಪಾವತಿಸಿ ರೈತಪರ (pro farmars) ನಿಲುವು ಪ್ರದರ್ಶಿಸಬೇಕು ಎಂದು ಆಗ್ರಹಿಸಿ ರೈತ ಸಂಘದಿಂದ ಸೋಮವಾರ ಡಿಸಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು.
ಶಿವಮೊಗ್ಗ ತಾಲೂಕಿನ ಹಾಯ್‌ಹೊಳೆ, ಬಾರೆಹಳ್ಳ, ಗೌಡನಕೆರೆ ಮೂಲಕ 7.5 ಸಾವಿರ ಎಕರೆಗೆ ನೀರು ಹರಿಸುತ್ತಿದ್ದು, 28ಕ್ಕೂ ಹೆಚ್ಚು ಹಳ್ಳಿಗಳು ಪ್ರಯೋಜನ ಪಡೆಯುತ್ತವೆ. 8 ವರ್ಷದಿಂದ ಯೋಜನೆ ಚಾಲನೆಯಲ್ಲಿದೆ. ಆದರೆ ರಾಜ್ಯ ಸರ್ಕಾರ ಮೆಸ್ಕಾಂ ಇಲಾಖೆಗೆ 25.22 ಕೋಟಿ ರೂ. ವಿದ್ಯುತ್ ಬಿಲ್ ಬಾಕಿ ಉಳಿಸಿಕೊಂಡಿರುವುದರಿಂದ ರೈತರು ಸಮಸ್ಯೆ ಎದುರಿಸುವಂತಾಗಿದೆ ಎಂದು ಪ್ರತಿಭಟನಾಕಾರರು ಆಕ್ಷೇಪ ವ್ಯಕ್ತಪಡಿಸಿದರು.
ಈಗ ತುಂಗಾ ನದಿಯಲ್ಲಿ ಅಪಾರ ಪ್ರಮಾಣದ ನೀರು ಹರಿಯುತ್ತಿದೆ ಕೂಡ. ಆದರೆ ವಿದ್ಯುತ್ ಸಂಪರ್ಕವಿಲ್ಲದೆ ನೀರನ್ನೆತ್ತಲು ಸಾಧ್ಯ ಆಗುತ್ತಿಲ್ಲ. ರಾಜ್ಯ ಸರ್ಕಾರ ಕೂಡಲೇ ಬಾಕಿ ಬಿಲ್ ಪಾವತಿಸಿ ನೀರು ತುಂಬಲು ಅವಕಾಶ ಕಲ್ಪಿಸಬೇಕು ಎಂದು ಆಗ್ರಹಿಸಿದರು.
ರೈತ ಸಂಘದ ರಾಜ್ಯಾಧ್ಯಕ್ಷ ಎಚ್.ಆರ್.ಬಸವರಾಜಪ್ಪ, ಗ್ರಾಮಾಂತರ ಶಾಸಕಿ ಶಾರದಾ ಪೂರ‌್ಯಾನಾಯ್ಕ, ಪ್ರಮುಖರಾದ ಕೆ.ರಾಘವೇಂದ್ರ, ಭಾಗ್ಯಾ, ಎಂ.ಡಿ.ನಾಗರಾಜ್, ಹಿಟ್ಟೂರು ರಾಜು, ಪಿ.ಡಿ.ಮಂಜಪ್ಪ, ಸಿ.ಬಿ.ಹನುಮಂತಪ್ಪ, ಜಿ.ಎನ್.ಪಂಚಾಕ್ಷರಿ ಇತರರಿದ್ದರು.