ಶಿವಮೊಗ್ಗ ವಿನೋಬನಗರ ಶುಭ ಮಂಗಳ ಕಲ್ಯಾಣ ಮಂಟಪದಲ್ಲಿ ಒಕ್ಕೂಟಗಳ ಪದಗ್ರಹಣ ಹಾಗೂ ಲಕ್ಷ್ಮೀಪೂಜಾ ಕಾರ್ಯಕ್ರಮವನ್ನು ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ ಉದ್ಘಾಟಿಸಿದರು. ಬಿ.ಗೀತಾ, ದೂದ್ಯ ನಾಯಕ್, ಎಲ್.ಸ್ವಪ್ನಾ, ಉಲ್ಲಾಸ್ ಮೆಸ್ತ, ಮಮತಾ ಶಿವಣ್ಣ, ಪ್ರಶಾಂತ್ ಇದ್ದರು. 
ಶಿವಮೊಗ್ಗ

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಸ್ವಾವಲಂಬಿ ಬದುಕು । Dharmasthala Sanga

ಪ್ರಮುಖ ಮುಖ್ಯಾಂಶಗಳು

  • ಮಹಿಳೆಯರಿಗಾಗಿಯೇ ಅನೇಕ ಕಾರ್ಯಕ್ರಮ ನಡೆಸುತ್ತಿದೆ
  • ಪ್ರಗತಿಬಂಧು ಸ್ವಸಹಾಯ ಸಂಘಗಳ ಒಕ್ಕೂಟಗಳ ಪದಗ್ರಹಣ
  • ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಹೇಳಿಕೆ
ಶಿವಮೊಗ್ಗ: ಶ್ರೀ ಕ್ಷೇತ್ರ ಧರ್ಮಸ್ಥಳ(Dharmastala) ಗ್ರಾಮಾಭಿವೃದ್ಧಿ ಯೋಜನೆ ಅನೇಕ ಕಾರ್ಯಕ್ರಮಗಳನ್ನು ಮಹಿಳೆಯರಿಗಾಗಿಯೇ ನಡೆಸುತ್ತಿದೆ. ಇದರಿಂದ ಸಹಸ್ರಾರು ಮಹಿಳೆಯರು ಸ್ವಾವಲಂಬಿಯಾಗಿ ಬದುಕುವುದನ್ನು ಕಲಿತಿದ್ದಾರೆ ಎಂದು ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ(K.S.Eshwarappa) ಹೇಳಿದರು.
ವಿನೋಬನಗರದ ಶುಭಮಂಗಳ ಕಲ್ಯಾಣ ಮಂಟಪದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್(B.C.Trust) ಹಾಗೂ ಪ್ರಗತಿಬಂಧು ಸ್ವಸಹಾಯ ಸಂಘಗಳ ಒಕ್ಕೂಟ ಶಿವಮೊಗ್ಗ ‘ಬಿ’ವಲಯಯಿಂದ ಒಕ್ಕೂಟಗಳ ಪದಗ್ರಹಣ ಹಾಗೂ ಲಕ್ಷ್ಮೀಪೂಜಾ(Laxmipuje) ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಧರ್ಮಸ್ಥಳದ ಧರ್ಮದರ್ಶಿ ಡಾ. ವೀರೇಂದ್ರ ಹೆಗ್ಗಡೆ(Dr. Veerendra Heggade) ಅವರು ಸ್ವಉದ್ಯೋಗಕ್ಕೆ ಹೆಚ್ಚಿನ ಪ್ರೋತ್ಸಾಹ ನೀಡುತ್ತಿದ್ದಾರೆ. ಇದು ತುಂಬಾ ಸಂತೋಷಕರ ಸಂಗತಿ. ಪೂಜ್ಯರ ಜನಪರ ಕಾರ್ಯಗಳು ಕೇವಲ ಯಾವುದೋ ಒಂದು ಜಾತಿ, ಧರ್ಮಕ್ಕೆ ಸೀಮಿತವಾಗಿಲ್ಲ. ಎಲ್ಲರ ವರ್ಗಗಳಿಗೂ, ಅದರಲ್ಲೂ ಬಡವರು ಹೆಚ್ಚಾಗಿ ಪ್ರಯೋಜನ ಪಡೆದುಕೊಳ್ಳುತ್ತಿರುವುದು ವಿಶೇಷ ಎಂದರು.
ಈಗಿನ ಮಹಿಳೆಯರು ದೇವರ ಪೂಜೆ, ಭಜನೆ(Bhajane) ಇಂತಹ ಕಾರ್ಯಕ್ರಮಗಳಿಗೆ ಭಾಗವಹಿಸುವುದು ತುಂಬಾ ವಿರಳ. ಆದರೆ ಶ್ರೀ ಕ್ಷೇತ್ರ ಧರ್ಮಸ್ಥಳ ಸಂಘವು ಧರ್ಮಸ್ಥಳದಿಂದ ಭಜನಾ ಕಾರ್ಯಕ್ರಮ ಮಾಡುವುದರ ಮೂಲಕ ಮಹಿಳೆಯರಿಗೆ ಜಾನಪದ ಕಲೆ, ಸಂಗೀತದಲ್ಲಿ ಭಾಗವಹಿಸುವ ಬಗ್ಗೆ ಅರಿವು ಮೂಡಿಸುತ್ತಿದೆ ಎಂದು ಶ್ಲಾಘಿಸಿದರು. 
ಬಿಸಿ ಟ್ರಸ್ಟ್‌ನ ಚಿತ್ರದುರ್ಗದ ಪ್ರಾದೇಶಿಕ ನಿರ್ದೇಶಕಿ ಬಿ.ಗೀತಾ ಅವರು ನೂತನ ಒಕ್ಕೂಟಗಳ ಪದಾಧಿಕಾರಿಗಳಿಗೆ ಅಧಿಕಾರ ಹಸ್ತಾಂತರ ಮಾಡಿದರು. ಕೋಟೆಗಂಗೂರು ಗ್ರಾಮ ಪಂಚಾಯತ್ ಅಧ್ಯಕ್ಷ ದೂದ್ಯ ನಾಯಕ್ ಅಧ್ಯಕ್ಷತೆ ವಹಿಸಿದ್ದರು. ಪಶ್ಚಿಮ ಸಂಚಾರ ಪೊಲೀಸ್ ಠಾಣೆಯ ಪಿಎಸ್‌ಐ ಎಲ್.ಸ್ವಪ್ನಾ, ತಾಲೂಕು ಯೋಜನಾಧಿಕಾರಿ ಉಲ್ಲಾಸ್ ಮೆಸ್ತ, ಮಮತಾ ಶಿವಣ್ಣ, ಮೇಲ್ವಿಚಾರಕ ಪ್ರಶಾಂತ್ ಹಾಜರಿದ್ದರು.