ಭದ್ರಾವತಿ ಬಿಳಿಕಿ ಹಿರೇಮಠದ ಆವರಣದಲ್ಲಿ ಆಯೋಜಿಸಿದ್ದ ಮಾಜಿ ಯೋಧರಿಗೆ ಗೌರವಾರ್ಪಣೆ ಸಮಾರಂಭವನ್ನು ನಗರಸಭೆ ಅಧ್ಯಕ್ಷೆ ಗೀತಾ ರಾಜ್‌ಕುಮಾರ್ ಉದ್ಘಾಟಿಸಿದರು. ಶ್ರೀ ರಾಚೋಟೇಶ್ವರ ಶಿವಾಚಾರ್ಯ ಸ್ವಾಮೀಜಿ, ಶ್ರೀ ಶಿವಲಿಂಗ ಶಿವಾಚಾರ್ಯ ಸ್ವಾಮೀಜಿ, ಟಿ.ವಿ.ಈಶ್ವರಯ್ಯ ಇತರರಿದ್ದರು.
- ಶ್ರೀ ಶಿವಲಿಂಗ ಶಿವಾಚಾರ್ಯ ಸಲಹೆ
- ಬಿಳಿಕಿ ಮಠದಲ್ಲಿ ಮಾಜಿ ಯೋಧರಿಗೆ ಸನ್ಮಾನ
ಭದ್ರಾವತಿ: ದೇಶದ ಜನರು ನೆಮ್ಮದಿಯಿಂದ ಜೀವನ ನಡೆಸಲು ದೇಶ ಕಾಯುವ ಯೋಧರು ಪ್ರಮುಖ ಕಾರಣ ಎಂದು ರಟ್ಟಿಹಳ್ಳಿ ಕಬ್ಬಿಣಕಂತಿ ಮಠದ ಶ್ರೀ ಶಿವಲಿಂಗ ಶಿವಾಚಾರ್ಯ ಸ್ವಾಮೀಜಿ ಹೇಳಿದರು.
ತಾಲೂಕಿನ ಬಿಳಿಕಿ ಹಿರೇಮಠದಲ್ಲಿ ನವಿಲೆ ಬಸವೇಶ್ವರ ಸ್ವಾಮಿ ಮಹಾರಥೋತ್ಸವ ಅಂಗವಾಗಿ ಆಯೋಜಿಸಿದ್ದ ದೇವತಾ ಕಾರ್ಯ, ವೀರಯೋಧರಿಗೆ ಸನ್ಮಾನ ಸಮಾರಂಭ ಕಾರ್ಯಕ್ರಮದಲ್ಲಿ ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡಿದರು.
ಪಾಕಿಸ್ತಾನ, ಶ್ರೀಲಂಕಾ ಸೇರಿ ಹಲವು ದೇಶಗಳಲ್ಲಿ ಅರಾಜಕತೆ ತಾಂಡವವಾಡುತ್ತಿದೆ. ಆದರೆ ಪ್ರಧಾನಿ ನರೇಂದ್ರ ಮೋದಿ ಅವರ ಆಡಳಿತ ದಕ್ಷತೆ ಹಾಗೂ ಭಾರತೀಯ ಸೈನ್ಯದ ಶಿಸ್ತು ಅಂತಹ ಪರಿಸ್ಥಿತಿ ದೂರವಾಗಿಸಿವೆ. ಮಕ್ಕಳನ್ನು ಸೇನೆಗೆ ಸೇರಿಸಬೇಕೆಂಬ ಭಾವನೆಯನ್ನು ಪಾಲಕರು ಬೆಳೆಸಿಕೊಳ್ಳಬೇಕು ಎಂದು ತಿಳಿಸಿದರು.
ಬಿಳಿಕಿ ಹಿರೇಮಠದ ಶ್ರೀ ರಾಚೋಟೇಶ್ವರ ಶಿವಾಚಾರ್ಯ ಸ್ವಾಮೀಜಿ ಮಾತನಾಡಿ, ರಥೋತ್ಸವದ ಹಿನ್ನೆಲೆಯಲ್ಲಿ ಮಠವು ಸಾಧಕ ಗಣ್ಯ ವ್ಯಕ್ತಿಗಳನ್ನು ಗೌರವಿಸಿ ಪ್ರೋತ್ಸಾಹಿಸುವ ಕೆಲಸ ಮಾಡುತ್ತಿದೆ. ಈ ಬಾರಿ ದೇಶ ಕಾಯುವ ಸೈನಿಕರನ್ನು ಗೌರವಿಸಲಾಗುತ್ತಿದೆ ಎಂದರು.
ಮಠ ಅಭಿವೃದ್ಧಿ ಹೊಂದಲು ಮಠದ ಗೌರವಾಧ್ಯಕ್ಷ ಟಿ.ವಿ.ಈಶ್ವರಯ್ಯ ಅವರ ಕೊಡುಗೆ ಅಪಾರ. ಅವರಿಗೆ ಗುರುಸಿದ್ಧ ಶ್ರೀ ಸೇವಾ ಸಂಜೀವಿಸಿ ಪ್ರಶಸ್ತಿ ನೀಡಿ ಗೌರವಿಸಲಾಗುತ್ತಿದೆ ಎಂದು ತಿಳಿಸಿದರು.
10 ಮಾಜಿ ಸೈನಿಕರನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮಕ್ಕೂ ಮುನ್ನ ಶ್ರೀ ಬಸವೇಶ್ವರ ಸ್ವಾಮಿ ರಾಜಬೀದಿ ಉತ್ಸವ ನಡೆಯಿತು. ತಾವರೆಕೆರೆ ಶಿಲಾಮಠದ ಶ್ರೀ ಅಭಿನವ ಸಿದ್ದಲಿಂಗ ಶಿವಾಚಾರ್ಯ ಸ್ವಾಮೀಜಿ, ತಿಪ್ಪಾಯಿಕೊಪ್ಪದ ಶ್ರೀ ಮಹಾಂತ ಸ್ವಾಮೀಜಿ, ಕುರುವತ್ತಿ ಶ್ರೀ ಸಿದ್ದನಂದೀಶ್ವರ ಶಿವಾಚಾರ್ಯ ಸ್ವಾಮೀಜಿ, ಶ್ರೀ ರೇವಣಸಿದ್ದೇಶ್ವರ ಸ್ವಾಮೀಜಿ ಸೇರಿ ಕಲಬುರಗಿ, ಯಾದಗಿರಿ, ಬೆಳಗಾವಿ ಜಿಲ್ಲೆಯ ಮಠಾಧೀಶರು ಉಪಸ್ಥಿತರಿದ್ದರು.
ನಗರಸಭೆ ಅಧ್ಯಕ್ಷೆ ಗೀತಾ ರಾಜ್‌ಕುಮಾರ್ ಕಾರ್ಯಕ್ರಮ ಉದ್ಘಾಟಿಸಿದರು. ಪಂಚ ಗ್ಯಾರಂಟಿ ಸಮಿತಿ ತಾಲೂಕು ಅಧ್ಯಕ್ಷ ಬಿ.ಎಸ್.ಗಣೇಶ್, ವಿಜಯಕುಮಾರ್, ಸಿದ್ದಲಿಂಗಯ್ಯ, ವಾಗೀಶ್, ಮಹೇಶ್ವರಯ್ಯ ಇತರರಿದ್ದರು.