ಶಿಕಾರಿಪುರದ ಶ್ರೀ ಗಿಡ್ಡೇಶ್ವರ ದೇವಾಲಯ ಮಹಾದ್ವಾರ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಶಾಸಕ ಬಿ.ವೈ.ವಿಜಯೇಂದ್ರ ಮಾತನಾಡಿದರು. ಬಿ.ವೈ.ರಾಘವೇಂದ್ರ, ನಗರದ ಮಹದೇವಪ್ಪ ಇತರರಿದ್ದರು. 
ಶಿವಮೊಗ್ಗ

ಮಕ್ಕಳಿಗೆ ಸಂಸ್ಕೃತಿ, ಪರಂಪರೆಯ ಅರಿವು ಮೂಡಿಸಿ

ಶಿಕಾರಿಪುರ: ಸಾತ್ವಿಕತೆ, ಸಹೃದಯ ಮತ್ತು ಸಾಮಾಜಿಕ ಕಳಕಳಿ ಇದ್ದಲ್ಲಿ ದೈವತ್ವ ತಾನಾಗಿ ಬರುತ್ತದೆ. ಧರ್ಮದ ರಕ್ಷಣೆ ನಾವು ಮಾಡಿದರೆ ಧರ್ಮ ನಮ್ಮನ್ನು ರಕ್ಷಿಸುತ್ತದೆ ಎಂದು ಶಾಸಕ ಬಿ.ವೈ.ವಿಜಯೇಂದ್ರ ಹೇಳಿದರು.
ದೊಡ್ಡಕೇರಿ ಶ್ರೀ ಗಿಡ್ಡೇಶ್ವರ ದೇವಸ್ಥಾನದ ಪೂರ್ವ ಮಹಾದ್ವಾರ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಮಾತನಾಡಿ, ಮಕ್ಕಳಿಗೆ ಬಾಲ್ಯದಿಂದ ಧಾರ್ಮಿಕ ಚಿಂತನೆಗಳ ಜತೆ ಸಂಸ್ಕಾರ ಕಲಿಸಬೇಕು. ಮಣ್ಣಿನ ಸಂಸ್ಕೃತಿ ಪರಂಪರೆ ಪರಿಚಯಿಸಬೇಕು ಎಂದು ತಿಳಿಸಿದರು.
ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ ಮಾತನಾಡಿ, ದೇವಸ್ಥಾನಗಳಿಂದ ನಿರಂತರ ಧರ್ಮೋತ್ಥಾನ ಕಾರ್ಯ ನಡೆಯುತ್ತದೆ. ಗಿಡ್ಡೇಶ್ವರ ದೇವಸ್ಥಾನದ ಸಮುದಾಯ ಭವನ ನಿರ್ಮಾಣ ಕಾಮಗಾರಿಗೆ ಪಕ್ಷಭೇದ ಮರೆತು ಕಾಂಗ್ರೆಸ್ ಮುಖಂಡರ ಜತೆಗೆ ಸಿಎಂ ಭೇಟಿ ಮಾಡಿ ಅನುದಾನ ತರಲು ಪ್ರಾಮಾಣಿಕವಾಗಿ ಪ್ರಯತ್ನ ಮಾಡೋಣ ಎಂದರು.
ರಾಜ್ಯ ಕೃಷಿಕ ಸಮಾಜದ ಅಧ್ಯಕ್ಷ ನಗರದ ಮಹದೇವಪ್ಪ ಮಾತನಾಡಿ, ಶೋಷಿತ ಸಮುದಾಯಗಳು ಮಕ್ಕಳಿಗೆ ಶಿಕ್ಷಣ ನೀಡಬೇಕು. ಇದರಿಂದ ಸಾಮಾಜಿಕವಾಗಿ, ಆರ್ಥಿಕವಾಗಿ ಪ್ರಗತಿ ಹೊಂದಲು ಸಾಧ್ಯವಾಗುತ್ತದೆ ಎಂದು ತಿಳಿಸಿದರು.
ಎಂಎಡಿಬಿ ಮಾಜಿ ಅಧ್ಯಕ್ಷ ಕೆ.ಎಸ್.ಗುರುಮೂರ್ತಿ, ಕೆಪಿಸಿಸಿ ಸದಸ್ಯ ಗೋಣಿ ಮಾಲತೇಶ್, ದೇವಸ್ಥಾನ ಸಮಿತಿ ಅಧ್ಯಕ್ಷ ನಗರದ ಅಶೋಕಪ್ಪ, ತಾಲೂಕು ಕೃಷಿಕ ಸಮಾಜದ ಅಧ್ಯಕ್ಷ ಮಹೇಶ್ ಹುಲ್ಮಾರ್, ಪುರಸಭೆ ಮಾಜಿ ಅಧ್ಯಕ್ಷೆ ಸುನಂದಾ ಮಂಜುನಾಥ್, ಕಮಲಮ್ಮ ಹುಲ್ಮಾರ್, ಲಕ್ಷ್ಮೀ, ರಮೇಶ್, ಪಾಲಾಕ್ಷಪ್ಪ, ರೇಣುಕಸ್ವಾಮಿ, ರಾಘವೇಂದ್ರ, ಪಾಲಾಕ್ಷಪ್ಪ, ಭರತ್ ಇತರರಿದ್ದರು.