ಬಂಧಿತ ಆರೋಪಿ ಹೊಸನಗರ ತಾಲೂಕಿನ ಅಡುಗೋಡಿ ನಿವಾಸಿ ವೆಂಕಟೇಶ್.
- ಹೊಸನಗರ ತಾಲೂಕಿನ ಅಡುಗೋಡಿ ನಿವಾಸಿ ವೆಂಕಟೇಶ್ ಬಂಧಿತ ಆರೋಪಿ
- ಬಟ್ಟೆಮಲ್ಲಪ್ಪ ಗ್ರಾಮದ ಹೋಟೆಲ್ ಬಳಿ ಆಹಾರ ತರಲು ಅಧಿಕಾರಿಗಳು ತೆರಳಿದ್ದಾಗ ಪರಾರಿ
- ಬಂಧಿಸಿ ಮತ್ತೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ ಅರಣ್ಯ ಇಲಾಖೆ ಸಿಬ್ಬಂದಿ
ಶಿವಮೊಗ್ಗ: ಅರಣ್ಯ ಇಲಾಖೆ(Forest Department
) ಸಿಬ್ಬಂದಿ ಮೇಲೆ ದಾಳಿ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ಪೊಲೀಸರು ಭಾನುವಾರ ಬೆಳಗ್ಗೆ ಬಂಧಿಸಿ ಮತ್ತೆ ನ್ಯಾಯಾಂಗ ಬಂಧನ(Judicial Remand
ಹೊಸನಗರ ತಾಲೂಕಿನ ಅಡುಗೋಡಿ ನಿವಾಸಿ ವೆಂಕಟೇಶ್ (36) ಬಂಧಿತ ಆರೋಪಿ. ಅರಣ್ಯ ಸಿಬ್ಬಂದಿ ಕರ್ತವ್ಯಕ್ಕೆ ಅಡ್ಡಿ(Obstruction of duty)ಪಡಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಜು.15ರಂದು ಜೆಎಂಎಫ್‌ಸಿ ನ್ಯಾಯಾಲಯ(JMFC Court) ಈತನಿಗೆ ಶಿವಮೊಗ್ಗ ಜಿಲ್ಲಾ ಕಾರಾಗೃಹಕ್ಕೆ ನ್ಯಾಯಾಂಗ ಬಂಧನ ವಿಧಿಸಿತ್ತು. ಜೀಪಿನಲ್ಲಿ ಕರೆದೊಯ್ಯುವಾಗ ಬಟ್ಟೆಮಲ್ಲಪ್ಪ ಗ್ರಾಮದ ಹೋಟೆಲ್ ಬಳಿ ಆಹಾರ ತರಲು ಅಧಿಕಾರಿಗಳು ತೆರಳಿದ್ದರು. ಈ ವೇಳೆ ಜೀಪಿನಲ್ಲಿದ್ದ ಸಿಬ್ಬಂದಿ ಚಕ್ರಪಾಣಿ ಮತ್ತು ಚಾಲಕ ನಾಗೇಂದ್ರ ಮೇಲೆ ದಾಳಿ ನಡೆಸಿ ಆರೋಪಿ ಪರಾರಿಯಾಗಿದ್ದ.
ಈ ಕುರಿತು ಕೊಲ್ಲೂರು ವನ್ಯಜೀವಿ ವಲಯದ ಉಪವಲಯ ಅರಣ್ಯಾಧಿಕಾರಿ ಸುನೀಲ್ ಡಿ. ಕುಂಬಾರ್ ನೀಡಿದ ದೂರಿನನ್ವಯ ರಿಪ್ಪನ್‌ಪೇಟೆ ಪೊಲೀಸ್ ಠಾಣೆ(Ripponpet Police Station)ಯಲ್ಲಿ ದೂರು ದಾಖಲಾಗಿತ್ತು. ಸಿಪಿಐ ಗೌಡಪ್ಪಗೌಡ ಮಾರ್ಗದರ್ಶನದಲ್ಲಿ ಪಿಎಸ್‌ಐ ಶಂಕರಗೌಡ ಪಾಟೀಲ್ ಹಾಗೂ ಸಿಬ್ಬಂದಿಗಳ ತಂಡ ಆರೋಪಿಯ ಮನೆಯ ಸಮೀಪವೇ ಆತನನ್ನು ಬಂಧಿಸಿದ್ದಾರೆ.