ವಡ್ಡಿನಕೊಪ್ಪದ ಜೇನುಕುಮಾರ್ 
ಶಿವಮೊಗ್ಗ

ಅಡಿಕೆ ಬೇಯಿಸುವ ವೇಳೆ ಹಂಡೆಗೆ ಬಿದ್ದು ಗಾಯಗೊಂಡಿದ್ದ ವ್ಯಕ್ತಿ ಸಾವು | Arrecanut

ನವೀನ ಬಿ.ಎಂ

ಪ್ರಮುಖ ಮುಖ್ಯಾಂಶಗಳು

  • ಅಡಿಕೆ ಬೇಯಿಸುವ ವೇಳೆ ಹಂಡೆಗೆ ಬಿದ್ದು ಗಾಯ
  • ವಡ್ಡಿನಕೊಪ್ಪದ ಜೇನು ಕುಮಾರ್ ಮೃತರು
  • ತುಂಗಾನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ
ಶಿವಮೊಗ್ಗ: ನಗರದ ಹೊರವಲಯದ ವಡ್ಡಿನಕೊಪ್ಪದಲ್ಲಿ ಅಡಿಕೆ(Arrecanut) ಬೇಯಿಸುವ ವೇಳೆ ಹಂಡೆಗೆ ಬಿದ್ದು ಗಂಭೀರ ಗಾಯಗೊಂಡಿದ್ದ ವ್ಯಕ್ತಿ ಚಿಕಿತ್ಸೆಗೆ ಸ್ಪಂದಿಸದೇ ಮೃತಪಟ್ಟಿದ್ದಾರೆ. ವಡ್ಡಿನಕೊಪ್ಪದ ಜೇನುಕುಮಾರ್ ಮೃತರು. 
ಸೆ.8ರಂದು ತಮ್ಮ ಮನೆ ಬಳಿ ಶೆಡ್‌ನಲ್ಲಿ ಅಡಿಕೆ ಬೇಯಿಸುತ್ತಿದ್ದರು. ಅಡಿಕೆ ಹೊರತೆಗೆದ ಬಳಿಕ ಹಂಡೆಯಲ್ಲಿದ್ದ ಅಡಿಕೆ ಚೊಗರು ತೆಗೆಯುತ್ತಿದ್ದ ವೇಳೆ ಕಾಲು ಜಾರಿ ಹಂಡೆಯೊಳಗೆ ಬಿದ್ದಿದ್ದರು. ಪಕ್ಕದಲ್ಲಿಯೇ ಇದ್ದ ಇತರೆ ಮೂವರು ಕೂಡಲೆ ಅವರನ್ನು ಮೇಲಕ್ಕೆತ್ತಿದ್ದಾರೆ. ಬಳಿಕ ಜೇನುಕುಮಾರ್(Jeenukumar) ಶೆಡ್‌ನಿಂದ ಹೊರಗೆ ಓಡಿದ್ದರು. ಶರ್ಟ್ ತೆಗೆದು ಪುನಃ ಶೆಡ್ ಒಳಗೆ ಬಂದಿದ್ದಾರೆ. ಅಷ್ಟು ಹೊತ್ತಿಗೆ ಅವರ ದೇಹದ ಬಹುತೇಕ ಭಾಗ ಸುಟ್ಟು ಹೋಗಿದ್ದು, ಆ ದೃಶ್ಯಗಳು ಶೆಡ್‌ನಲ್ಲಿದ್ದ ಸಿಸಿಟಿವಿಯಲ್ಲಿ ಸೆರೆಯಾಗಿವೆ.
ತಕ್ಷಣ ಅವರನ್ನು ನಗರದ ಖಾಸಗಿ ಆಸ್ಪತ್ರೆ(Private hospital)ಗೆ ದಾಖಲಿಸಲಾಗಿತ್ತು. ಹೆಚ್ಚಿನ ಚಿಕಿತ್ಸೆ ಅಗತ್ಯವಿದ್ದ ಹಿನ್ನೆಲೆ ವೈದ್ಯರ ಸಲಹೆಯಂತೆ ಮಣಿಪಾಲ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ. ತುಂಗಾನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.