ಶಿವಮೊಗ್ಗದ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ
ಶಿವಮೊಗ್ಗ: ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ(Sexual assault)ವೆಸಗಿದ್ದ 30 ವರ್ಷದ ವ್ಯಕ್ತಿಗೆ ಶಿವಮೊಗ್ಗ(shivamogga)ದ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ಎಫ್‌ಟಿಎಸ್‌ಸಿ(ತ್ವರಿತ ವಿಶೇಷ ನ್ಯಾಯಾಲಯ)-1ರ ನ್ಯಾಯಾಧೀಶರು 20 ವರ್ಷ ಕಠಿಣ ಕಾರಾಗೃಹ ಶಿಕ್ಷೆ ಹಾಗೂ 65 ಸಾವಿರ ರೂ. ದಂಡ ವಿಧಿಸಿದ್ದಾರೆ.
2022ನೇ ಸಾಲಿನಲ್ಲಿ 16 ವರ್ಷದ ಅಪ್ರಾಪ್ತೆ ಮೇಲೆ 30 ವರ್ಷದ ವ್ಯಕ್ತಿ ಲೈಂಗಿಕ ದೌರ್ಜನ್ಯವೆಸಗಿದ್ದ. ಈ ಬಗ್ಗೆ ಭದ್ರಾವತಿ ಹಳೇ ಪೊಲೀಸ್ ಠಾಣೆಯಲ್ಲಿ ಪೋಕ್ಸೋ(pocso) ಅಡಿ ಪ್ರಕರಣ ದಾಖಲಾಗಿತ್ತು. ತನಿಖಾಧಿಕಾರಿಯಾಗಿದ್ದ ಅಂದಿನ ಭದ್ರಾವತಿ ನಗರ ಸಿಪಿಐ ರಾಘವೇಂದ್ರ ಕಂಡಿಕೆ ಅವರು ಪ್ರಕರಣದ ದೋಷಾರೋಪಣ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದರು.
ಪ್ರಕರಣದ ಕುರಿತು ವಿಚಾರಣೆ ನಡೆಸಿದ್ದ ನ್ಯಾಯಾಧೀಶ ನಿಂಗನಗೌಡ ಪಾಟೀಲ್, ಆರೋಪ ಧೃಡಪಟ್ಟ ಹಿನ್ನೆಲೆಯಲ್ಲಿ ಕಠಿಣ ಕಾರಾಗೃಹ ಶಿಕ್ಷೆ ಹಾಗೂ ದಂಡ ವಿಧಿಸಿದ್ದಾರೆ. ನೊಂದ ಬಾಲಕಿಗೆ ಸರ್ಕಾರದ ಪರವಾಗಿ 4.50 ಲಕ್ಷ ರೂ. ಪರಿಹಾರ ನೀಡಬೇಕೆಂದು ಆದೇಶಿಸಿದ್ದಾರೆ. ಸರ್ಕಾರಿ ಅಭಿಯೋಜಕ ಶ್ರೀಧರ್ ಸರ್ಕಾರದ ಪರವಾಗಿ ವಾದ ಮಂಡಿಸಿದ್ದರು.