ಶಿವಮೊಗ್ಗದ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ
ಶಿವಮೊಗ್ಗ: ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ(Sexual assault) ನಡೆಸಿದ್ದ ಯುವಕನಿಗೆ ಶಿವಮೊಗ್ಗದ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ(court)ದ ಎಫ್‌ಟಿಎಸ್‌ಸಿ(ತ್ವರಿತ ವಿಶೇಷ ನ್ಯಾಯಾಲಯ)-1ರ ನ್ಯಾಯಾಧೀಶರು 20 ವರ್ಷ ಕಠಿಣ ಕಾರಾಗೃಹ ಶಿಕ್ಷೆ ಹಾಗೂ 1 ಲಕ್ಷ ರೂ ದಂಡ ವಿಧಿಸಿದ್ದಾರೆ.
ಶಿವಮೊಗ್ಗ ತುಂಗಾನಗರ ಠಾಣಾ ವ್ಯಾಪ್ತಿಯ 26 ವರ್ಷದ ಯುವಕ ಶಿಕ್ಷೆಗೆ ಒಳಗಾದವ. 2023ನೇ ಸಾಲಿನಲ್ಲಿ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದ. ಈ ಬಗ್ಗೆ ಸಂತ್ರಸ್ತೆ ನೀಡಿದ ದೂರಿನ ಮೇರೆಗೆ ತುಂಗಾನಗರ ಠಾಣೆಯಲ್ಲಿ ಪೋಕ್ಸೊ(pocso) ಪ್ರಕರಣ ದಾಖಲಾಗಿತ್ತು.
ಅಂದಿನ ತನಿಖಾಧಿಕಾರಿಯಾಗಿದ್ದ ಇನ್‌ಸ್ಪೆಕ್ಟರ್ ಬಿ.ಮಂಜುನಾಥ ಅವರು ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು. ಈ ಬಗ್ಗೆ ವಿಚಾರಣೆ ನಡೆಸಿದ್ದ ನ್ಯಾಯಾಧೀಶ(Judge) ನಿಂಗನಗೌಡ ಪಾಟೀಲ್, ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಯುವಕನಿಗೆ ಕಠಿಣ ಜೈಲು ಶಿಕ್ಷೆ ಮತ್ತು ದಂಡ ವಿಧಿಸಿದ್ದಾರೆ. ದಂಡ(Fine) ಪಾವತಿಸಲು ವಿಫಲನಾದಲ್ಲಿ 2 ವರ್ಷ ಸಾದಾ ಕಾರಾಗೃಹ ಶಿಕ್ಷೆ ವಿಧಿಸಿದ್ದಾರೆ. ದಂಡದ ಮೊತ್ತದಲ್ಲಿ ಸಂತ್ರಸ್ತೆಗೆ 75 ಸಾವಿರ ರೂ. ಹಾಗೂ ಸರ್ಕಾರದಿಂದ 4 ಲಕ್ಷ ರೂ. ಪರಿಹಾರ ನೀಡುವಂತೆ ಆದೇಶಿಸಿದ್ದಾರೆ.