ಶಿವಮೊಗ್ಗದ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ.
- ಜಾತಿ ನಿಂದನೆ ಮಾಡಿ, ಕೊಲೆ ಬೆದರಿಕೆ ಹಾಕಿ ಕರ್ತವ್ಯ ನಿರ್ವಹಿಸಲು ಅಡ್ಡಿಪಡಿಸಿದ್ದ ವ್ಯಕ್ತಿ
- 4 ವರ್ಷ ಕಠಿಣ ಕಾರಾವಾಸ ಮತ್ತು 15 ಸಾವಿರ ರೂ. ದಂಡ ವಿಧಿಸಿದ ನ್ಯಾಯಾಲಯ
- ಪ್ರಕರಣದ ತನಿಖೆ ಪೂರೈಸಿ ದೋಷಾರೋಪಣ ಪಟ್ಟಿ ಸಲ್ಲಿಸಿದ್ದ ಡಿವೈಎಸ್‌ಪಿ ಈ.ಶಾಂತವೀರ
ಶಿವಮೊಗ್ಗ: ಪೊಲೀಸ್ ಸಬ್ ಇನ್‌ಸ್ಪೆಕ್ಟರ್ ಮತ್ತು ಪೇದೆ ಮೇಲೆ ಹಲ್ಲೆ ನಡೆಸಿದ್ದಲ್ಲದೆ, ಜಾತಿ ನಿಂದನೆ(Caste abuse) ಮಾಡಿ ಕೊಲೆ ಬೆದರಿಕೆ ಹಾಕಿ ಕರ್ತವ್ಯ ನಿರ್ವಹಿಸಲು ಅಡ್ಡಿಪಡಿಸಿದ ವ್ಯಕ್ತಿಗೆ 4 ವರ್ಷ ಕಠಿಣ ಕಾರಾವಾಸ ಮತ್ತು 15 ಸಾವಿರ ರೂ. ದಂಡವನ್ನು ಶಿವಮೊಗ್ಗದ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ವಿಧಿಸಿದೆ.
ಹೊಸನಗರ ತಾಲೂಕಿನ ಮಾವಿನಹೊಳೆ ಗ್ರಾಮದ ಜಟ್ಟಪ್ಪ (58) ಶಿಕ್ಷೆಗೆ ಒಳಗಾದವ. ಈತ 2022ರಲ್ಲಿ ಹೊಸನಗರ ಠಾಣೆ ಪಿಎಸ್‌ಐ(PSI) ಎಂ.ಎನ್.ರಾಜೇಂದ್ರ ನಾಯ್ಕ ಮತ್ತು ಪೇದೆ ಅವಿನಾಶ್ ಮೇಲೆ ಹಲ್ಲೆ ಮಾಡಿದ್ದ. ಜಾತಿ ನಿಂದನೆ ಮಾಡಿ ಕೊಲೆ ಬೆದರಿಕೆ(Death threat)ಹಾಕಿದ್ದ ಬಗ್ಗೆ ಹೊಸನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಆಗಿನ ತನಿಖಾಧಿಕಾರಿಯಾಗಿದ್ದ ಡಿವೈಎಸ್‌ಪಿ(DYSP) ಈ.ಶಾಂತವೀರ ಅವರು ಪ್ರಕರಣದ ತನಿಖೆ ಪೂರೈಸಿ ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು. ಈ ಬಗ್ಗೆ ವಿಚಾರಣೆ ನಡೆಸಿದ ನ್ಯಾಯಾಧೀಶೆ(Judge) ಕೆ.ಪಿ.ಪ್ರೀತಿ ಅವರು ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಜಟ್ಟಪ್ಪನಿಗೆ ಜೈಲು ಶಿಕ್ಷೆ ಮತ್ತು ದಂಡ ವಿಧಿಸಿದ್ದಾರೆ. ಸರ್ಕಾರಿ ಅಭಿಯೋಜಕಿ ಪಿ.ಓ.ಪುಷ್ಪಾ ಅವರು ಸರ್ಕಾರದ ಪರವಾಗಿ ವಾದ ಮಂಡಿಸಿದ್ದರು.