ಶಿವಮೊಗ್ಗ ಜಿಪಂ ಸಭಾಂಗಣದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ.ಖಾದರ್ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆಸಿದರು. ಆರಗ ಜ್ಞಾನೇಂದ್ರ, ಎಸ್.ಚನ್ನಬಸಪ್ಪ, ಡಿ.ಎಸ್.ಅರುಣ್, ಪ್ರಭುಲಿಂಗ ಕವಳಿಕಟ್ಟಿ ಇದ್ದರು.  
ಶಿವಮೊಗ್ಗ

ಕೆಎಫ್‌ಡಿ ಕುರಿತು ಬೆಂಗಳೂರಲ್ಲಿ ಶೀಘ್ರ ಸಭೆ | KFD

ಪ್ರಮುಖ ಮುಖ್ಯಾಂಶಗಳು

  • ಮಲೆನಾಡು ಭಾಗದ ಜನರಿಗೆ ಕಂಟಕಪ್ರಾಯವಾಗಿರುವ ಮಂಗನಕಾಯಿಲೆ
  • 130 ಪ್ರಕರಣಗಳಲ್ಲಿ ಐವರು ಮೃತರಾಗಿರುವುದು ನೋವಿನ ಸಂಗತಿ
  • ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ.ಖಾದರ್ ಹೇಳಿಕೆ
ಶಿವಮೊಗ್ಗ: ಹಲವು ದಶಕಗಳಿಂದ ಮಲೆನಾಡು ಭಾಗ(Malnad Division)ದ ಜನರಿಗೆ ಕಂಟಕಪ್ರಾಯವಾಗಿರುವ ಮಂಗನಕಾಯಿಲೆ (ಕೆಎಫ್‌ಡಿ) ನಿಯಂತ್ರಣದ ಕುರಿತು ಶೀಘ್ರದಲ್ಲೇ ಬೆಂಗಳೂರಿನಲ್ಲಿ ತಜ್ಞರು ಹಾಗೂ ಉನ್ನತ ಮಟ್ಟದ ಅಧಿಕಾರಿಗಳ ಸಭೆ ಕರೆದು ಚರ್ಚಿಸಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ.ಖಾದರ್(Health and Family Welfare Minister U.T.Khader) ಹೇಳಿದರು.
ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಶನಿವಾರ ಆರೋಗ್ಯ ಇಲಾಖೆಯ ವೈದ್ಯಾಧಿಕಾರಿಗಳು ಹಾಗೂ ತಂತ್ರಜ್ಞರೊಂದಿಗೆ ಸಭೆ ನಡೆಸಿದ ಅವರು, ಪ್ರಸಕ್ತ ಸಾಲಿನಲ್ಲಿ ಈವರೆಗೆ ಗುರುತಿಸಿರುವ 130 ಪ್ರಕರಣಗಳಲ್ಲಿ ಐವರು ಮೃತರಾಗಿರುವುದು ನೋವಿನ ಸಂಗತಿ. ಆದಾಗ್ಯೂ ಸಕಾಲದಲ್ಲಿ ಕಾಯಿಲೆಗೆ ಚಿಕಿತ್ಸೆ(Treatment for the disease) ದೊರೆಯುವಂತೆ ವೈದ್ಯಾಧಿಕಾರಿಗಳು ವಿಶೇಷ ಗಮನಹರಿಸಬೇಕು ಎಂದರು. 
ಮಂಗನ ಕಾಯಿಲೆ ನಿಯಂತ್ರಣಕ್ಕೆ ಈ ಹಿಂದೆ ಬಳಸುತ್ತಿದ್ದ ತೈಲವನ್ನು ಹಲವು ಕಾರಣಗಳಿಂದ ಹಿಂಪಡೆಯಲಾಗಿದೆ. ಅಲ್ಲದೆ ಕಾಯಿಲೆಯ ನಿಯಂತ್ರಣಕ್ಕೆ ಔಷಧ ಸಂಶೋಧಿಸಲು ಐದು ವರ್ಷಗಳ ಹಿಂದೆ ಕೇಂದ್ರ ಆರೋಗ್ಯ ಸಚಿವಾಲಯ(Union Health Ministry)ಕ್ಕೆ ಮನವಿ ಸಲ್ಲಿಸಲಾಗಿತ್ತು. ಅಲ್ಲದೇ ಇತ್ತೀಚೆಗೆ ಕೇಂದ್ರ ವೈದ್ಯಕೀಯ ಸಚಿವರೊಂದಿಗೆ ಈ ಕುರಿತು ಚರ್ಚೆ ನಡೆಸಲಾಗಿದೆ. ಜಿಲ್ಲಾಸ್ಪತ್ರೆಗಳಲ್ಲಿ ಮಾತ್ರೆಗಳ ಕೊರತೆ ಇದ್ದ ಬಗ್ಗೆ ಅಧೀಕೃತವಾಗಿ ಮಾಹಿತಿ ನೀಡಿದಲ್ಲಿ ಪರಿಶೀಲಿಸಿ ಕ್ರಮ ವಹಿಸಲಾಗುವುದು ಎಂದರು.