ಶಾಸಕ ಎಸ್.ಎನ್.ಚನ್ನಬಸಪ್ಪ  
ಶಿವಮೊಗ್ಗ

ಐಪಿಎಲ್ ಟಿಕೆಟ್ ನಿರಾಕರಿಸಿ ಶಾಸಕ ಚನ್ನಬಸಪ್ಪ ಸಭಾಧ್ಯಕ್ಷರಿಗೆ ಪತ್ರ | IPL tickets

ಪ್ರಮುಖ ಮುಖ್ಯಾಂಶಗಳು

  • ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುವ ಪಂದ್ಯಗಳ ಟಿಕೆಟ್ ನಿರಾಕರಣೆ
  • ವಿಧಾನಸಭೆ ಸಭಾಧ್ಯಕ್ಷರಿಗೆ ಪತ್ರ ಬರೆದ ಶಾಸಕ ಎಸ್.ಎನ್.ಚನ್ನಬಸಪ್ಪ
  • ಕೆಎಸ್‌ಸಿಎಯಿಂದ ನೀಡುವ ಉಚಿತ ಪಾಸ್ ಅಥವಾ ಟಿಕೆಟ್‌ ಬೇಡ
ಶಿವಮೊಗ್ಗ: ಐಪಿಎಲ್(ಇಂಡಿಯನ್ ಪ್ರೀಮಿಯರ್ ಲೀಗ್)ನ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುವ ಪಂದ್ಯಗಳ ಟಿಕೆಟ್(tickets) ನಿರಾಕರಿಸಿ ಶಾಸಕ ಎಸ್.ಎನ್.ಚನ್ನಬಸಪ್ಪ ಅವರು ವಿಧಾನಸಭೆ ಸಭಾಧ್ಯಕ್ಷರಿಗೆ ಪತ್ರ ಬರೆದಿದ್ದಾರೆ.
ಕಳೆದ ವರ್ಷ ಆರ್‌ಸಿಬಿ ವಿಜಯೋತ್ಸವ(RCB Celebration)ದ ವೇಳೆ ನಡೆದ ದುರಂತದಲ್ಲಿ 11 ಮಂದಿ ಮೃತಪಟ್ಟ ಘಟನೆಯ ಆಕ್ರಂದನ ಇಂದಿಗೂ ನನ್ನ ಕಿವಿಯಲ್ಲಿ ಮಾರ್ದನಿಸುತ್ತಿದೆ. ಆ ನೋವಿನ ನಡುವೆ ನಾವು ಐಪಿಎಲ್ ಟಿಕೆಟ್‌ಗಾಗಿ ಸದನದಲ್ಲಿ ಪಟ್ಟು ಹಿಡಿಯುವುದು ಜನರ ದೃಷ್ಟಿಯಲ್ಲಿ ನಮ್ಮನ್ನು ಮತ್ತಷ್ಟು ಕನಿಷ್ಠರನ್ನಾಗಿಸುತ್ತದೆ ಎಂದು ಉಲ್ಲೇಖಿಸಿದ್ದಾರೆ.
ನನ್ನ ಆತ್ಮಸಾಕ್ಷಿಗೆ ಅನುಗುಣವಾಗಿ ಸರ್ಕಾರ ಅಥವಾ ಕೆಎಸ್‌ಸಿಎ(KSCA)ಯಿಂದ ಉಚಿತವಾಗಿ ನೀಡುವ ಐಪಿಎಲ್ ಪಂದ್ಯಗಳ ಯಾವುದೇ ಪಾಸ್(Pass) ಅಥವಾ ಟಿಕೆಟ್‌ಗಳನ್ನು ನಾನು ನಿರಾಕರಿಸುತ್ತೇನೆ. ಮುಂಬರುವ ಪಂದ್ಯಗಳಿಗೆ ಸಂಬಂಧಿಸಿದಂತೆ ನನ್ನ ಹೆಸರಿನಲ್ಲಿ ಯಾವುದೇ ಟಿಕೆಟ್‌ಗಳನ್ನು ವಿತರಿಸಬಾರದು ಎಂದು ಸಭಾಧ್ಯಕ್ಷರಲ್ಲಿ ಮನವಿ ಮಾಡಿದ್ದಾರೆ.