ಸಾಗರದ ಜೋಗ ರಸ್ತೆಯ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ದೇವರಾಜ ಅರಸು ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿನಿಲಯಕ್ಕೆ ಶಾಸಕ ಗೋಪಾಲಕೃಷ್ಣ ಬೇಳೂರು ಭೇಟಿ ನೀಡಿ ಪರಿಶೀಲಿಸಿದರು. ಮಧುಮಾಲತಿ, ಟಿ.ಪಿ.ರಮೇಶ್ ಇತರರಿದ್ದರು. 
ಶಿವಮೊಗ್ಗ

ಸರ್ಕಾರಿ ಹಾಸ್ಟೆಲ್‌ಗೆ ಶಾಸಕರ ದಿಢೀರ್ ಭೇಟಿ

 ಸಾಗರ:  ಮಕ್ಕಳಿಗೆ ಯಾವುದೇ ಸಮಸ್ಯೆ ಆಗದಂತೆ ನೋಡಿಕೊಳ್ಳಬೇಕು. ಶುಚಿರುಚಿಯಾದ ಆಹಾರ ನೀಡಬೇಕು. ಹಾಸ್ಟೆಲ್ ಆವರಣ ಶುದ್ಧವಾಗಿರಿಸಿಕೊಳ್ಳುವ ಜತೆಗೆ ಶುಚಿತ್ವ ಕಾಪಾಡಲು ಮಕ್ಕಳಿಗೆ ಮಾರ್ಗದರ್ಶನ ನೀಡಿ ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ಹೇಳಿದರು.
ಜೋಗ ರಸ್ತೆಯ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ದೇವರಾಜ ಅರಸು ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿನಿಲಯಕ್ಕೆ ದಿಢೀರ್ ಭೇಟಿ ನೀಡಿ ಅವರು ಮಾತನಾಡಿದರು.
ರಾಜ್ಯ ಸರ್ಕಾರ ಶಿಕ್ಷಣಕ್ಕೆ ಒತ್ತು ನೀಡುತ್ತಿದ್ದು ವಿದ್ಯಾರ್ಥಿನಿಲಯಗಳ ಮೂಲಕ ಮಕ್ಕಳಿಗೆ ವಸತಿ ಜತೆಗೆ ಶಿಕ್ಷಣ ಸೌಲಭ್ಯ ಕಲ್ಪಿಸುತ್ತಿದ್ದು ಅದು ಸದ್ಭಳಕೆಯಾಗಬೇಕು. ಅನೇಕ ವಿದ್ಯಾರ್ಥಿನಿಲಯಗಳಲ್ಲಿ ವ್ಯವಸ್ಥೆ ಸರಿಯಿಲ್ಲ ಎನ್ನುವ ದೂರುಗಳಿದ್ದು ಹಂತಹಂತವಾಗಿ ಅದನ್ನು ಪರಿಶೀಲನೆ ಮಾಡಲಾಗುತ್ತದೆ. ಸರ್ಕಾರ ಅನುದಾನ ಕೊಡುತ್ತಿದ್ದು ಉತ್ತಮವಾದ ಊಟ ತಿಂಡಿ ಕೊಡಿ, ಮಕ್ಕಳ ಆಹಾರದಲ್ಲಿ ಮೋಸ ಮಾಡಬೇಡಿ ಎಂದು ಸಲಹೆ ನೀಡಿದರು.
 ಮಕ್ಕಳಿಗೆ ಹೊಟ್ಟೆ ತುಂಬ ಊಟ ಕೊಡುತ್ತಿಲ್ಲ ಎನ್ನುವ ದೂರುಗಳಿವೆ. ಇದನ್ನು ಸಹಿಸಿಕೊಳ್ಳುವುದಿಲ್ಲ. ಸರ್ಕಾರ ಆರೋಗ್ಯ ಮತ್ತು ಶಿಕ್ಷಣಕ್ಕೆ ಹೆಚ್ಚಿನ ಅನುದಾನ ನೀಡಿ ಸಹಕರಿಸುತ್ತಿದೆ. ಸದ್ಯದಲ್ಲಿಯೆ ಶಾಲೆಗಳು ಪ್ರಾರಂಭಗೊಳ್ಳಲಿದ್ದು ಹಾಸ್ಟೆಲ್ ಪ್ರವೇಶಾತಿ ಆರಂಭವಾಗುತ್ತದೆ. ಹೆಚ್ಚಿನ ವಿದ್ಯಾರ್ಥಿನಿಲಯಗಳನ್ನು ನಿರ್ಮಿಸಲು ಚಿಂತನೆ ನಡೆದಿದೆ ಎಂದರು
ನಗರಸಭೆ ಮಾಜಿ ಸದಸ್ಯೆ ಮಧುಮಾಲತಿ, ಅರಣ್ಯ ಕೈಗಾರಿಕಾ ಅಭಿವೃದ್ಧಿ ನಿಗಮದ ವಿಶೇಷ ಕರ್ತವ್ಯಾಧಿಕಾರಿ ಟಿ.ಪಿ.ರಮೇಶ್ ಇತರರಿದ್ದರು.