ಮೋದಿ ಪ್ರಧಾನಿಯಾಗಿ 12 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಸಂಸದ ಬಿ.ವೈ.ರಾಘವೇಂದ್ರ ನೇತೃತ್ವದಲ್ಲಿ ಕಾರ್ಯಕರ್ತರು ಕಾನೂನು ಬಸವೇಶ್ವರ ಸ್ವಾಮಿಗೆ ಪೂಜೆ ಸಲ್ಲಿಸಿದರು. ಕೆ.ಎಸ್.ಗುರುಮೂರ್ತಿ, ವಸಂತ ಗೌಡ, ಶಿವನ ಗೌಡ ಇತರರಿದ್ದರು. 
ಶಿವಮೊಗ್ಗ

ಮೋದಿ ಆಡಳಿತ ಯುವಜನತೆಗೆ ಮಾದರಿ | narendra modi

ಶಿವಕುಮಾರ ಎಸ್.ಪಿ.
ಶಿಕಾರಿಪುರ: ಕೇವಲ ಭಾರತವಷ್ಟೇ ಅಲ್ಲ, ಇಡೀ ವಿಶ್ವವೇ ಮೆಚ್ಚಿದ ಧೀಮಂತ ನಾಯಕ ನರೇಂದ್ರ ಮೋದಿ. ಪ್ರಧಾನಿಯಾಗಿ ದೇಶವನ್ನು ಮುನ್ನಡೆಸುತ್ತಿರುವ ಅವರ ಆಡಳಿತ ಯುವಜನರಿಗೆ ಮಾದರಿ ಎಂದು ಸಂಸದ ಬಿ.ವೈ. ರಾಘವೇಂದ್ರ ಹೇಳಿದರು.
ಶ್ರೀ ಬಸವೇಶ್ವರ ಸ್ವಾಮಿ ಸನ್ನಿಧಿಯಲ್ಲಿ ಪೂಜೆ ಸಲ್ಲಿಸಿದ ನಂತರ ಮಾತನಾಡಿದ ಅವರು, ಮೋದಿ ಅವರು ಅವರು ದೀರ್ಘಾವಧಿ ಪ್ರಧಾನಿಯಾಗಿ ಸೇವೆ ಸಲ್ಲಿಸುತ್ತಿರುವುದು ಪ್ರತಿಯೊಬ್ಬ ಭಾರತೀಯನಿಗೂ ಹೆಮ್ಮೆಯ ಸಂಗತಿ. ಒಂದು ದಶಕಕ್ಕೂ ಹೆಚ್ಚು ಅವಧಿಯಿಂದ ದೇಶದಲ್ಲಿ ಭ್ರಷ್ಟಾಚಾರ ರಹಿತ, ಪಾರದರ್ಶಕ ಆಡಳಿತ ನೀಡಿದ ಕೀರ್ತಿ ಮೋದಿ ಅವರಿಗೆ ಸಲ್ಲುತ್ತದೆ ಎಂದರು.
ಕಟ್ಟಕಡೆಯ ವ್ಯಕ್ತಿಗೂ ಸರ್ಕಾರದ ಸೌಲಭ್ಯ ತಲುಪುವಂತೆ ಮಾಡಿದ್ದಾರೆ. ಇಂತಹ ನಾಯಕನಿಗೆ ನಮ್ಮ ಶಿಕಾರಿಪುರದ ಆರಾಧ್ಯ ದೈವ ಬಸವೇಶ್ವರ ಸ್ವಾಮಿಯು ಮತ್ತಷ್ಟು ಆಯುಷ್ಯ, ಆರೋಗ್ಯ ಕರುಣಿಸಲಿ ಎಂದು ನಾವೆಲ್ಲರೂ ಭಕ್ತಿಯಿಂದ ಪ್ರಾರ್ಥಿಸಿದ್ದೇವೆ. ಅವರ ಮಾರ್ಗದರ್ಶನದಲ್ಲಿ ಶಿವಮೊಗ್ಗ ಲೋಕಸಭಾ ಕ್ಷೇತ್ರ ಸೇರಿದಂತೆ ಇಡೀ ರಾಜ್ಯ ಪ್ರಗತಿಯ ಪಥದಲ್ಲಿ ಸಾಗಲಿದೆ ಎಂದು ಹೇಳಿದರು.
ನರೇಂದ್ರ ಮೋದಿ ಅವರು ದೇಶದ ಪ್ರಧಾನಿಯಾಗಿ ಸುದೀರ್ಘ ಅವಧಿಗೆ ಸೇವೆ ಸಲ್ಲಿಸುತ್ತಿರುವ ಹಿನ್ನೆಲೆಯಲ್ಲಿ ಕಾನೂರು ಶ್ರೀ ಬಸವೇಶ್ವರ ಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪೂಜೆ ನೆರವೇರಿಸಲಾಯಿತು. ವಿಶೇಷ ರುದ್ರಾಭಿಷೇಕ, ಬಿಲ್ವಾರ್ಚನೆ ಹಾಗೂ ಮಹಾಮಂಗಳಾರತಿ ಸೇರಿ ವಿವಿಧ ಧಾರ್ಮಿಕ ವಿಧಿವಿಧಾನಗಳು  ನೆರವೇರಿದವು. ಬಿ.ವೈ.ರಾಘವೇಂದ್ರ ಅವರ ನೇತೃತ್ವದಲ್ಲಿ ನೂರಾರು ಮುಖಂಡರು ಪಾಲ್ಗೊಂಡಿದ್ದರು.
ಎಂಎಡಿಬಿ ಮಾಜಿ ಅಧ್ಯಕ್ಷ ಕೆ.ಎಸ್.ಗುರುಮೂರ್ತಿ, ವಸಂತ ಗೌಡ, ಶಿವನ ಗೌಡ, ಸುರೇಶ್, ತಾಲೂಕು ಯುವ ಮೋರ್ಚಾ ಅಧ್ಯಕ್ಷ ವೀರನಗೌಡ, ಹೂವಿನಮಂಡಿ ಸುರೇಶ್, ಕುಮಾರ, ಸುರೇಶ್ ಗೌಡ ಇತರರಿದ್ದರು.