ಶಿವಮೊಗ್ಗದಲ್ಲಿ ಇಂದಿರಾ ಕ್ಯಾಂಟೀನ್ ಉದ್ಘಾಟಿಸಿದ ಬಳಿಕ ಮಧು ಬಂಗಾರಪ್ಪ ಉಪಹಾರ ಸೇವಿಸಿದರು. ಬಲ್ಕಿಶ್ ಬಾನು, ಆರ್.ಪ್ರಸನ್ನಕುಮಾರ್, ಪ್ರಭುಲಿಂಗ ಕವಳಿಕಟ್ಟಿ, ಕೆ.ಮಾಯಣ್ಣ ಗೌಡ, ಚೇತನ್ ಇತರರಿದ್ದರು.
ಶಿವಮೊಗ್ಗ: ಜಿಲ್ಲೆಯಲ್ಲಿ ಪ್ರಸ್ತುತ 12 ಇಂದಿರಾ (indira) ಕ್ಯಾಂಟೀನ್ (canten) ಸಾರ್ವಜನಿಕ ಸೇವೆಗೆ ಲಭ್ಯವಿದ್ದು ಹೊಳೆಹೊನ್ನೂರು, ಶಿಕಾರಿಪುರ ಮತ್ತು ಆನವಟ್ಟಿಯಲ್ಲೂ ಶೀಘ್ರ ಕ್ಯಾಂಟೀನ್ ಆರಂಭಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ (minister) ಮಧು ಬಂಗಾರಪ್ಪ ಹೇಳಿದರು.
ವಿದ್ಯಾನಗರ ಹಾಗೂ ಗುತ್ಯಪ್ಪ ಕಾಲನಿಯಲ್ಲಿ ನೂತನ ಇಂದಿರಾ ಕ್ಯಾಂಟೀನ್‌ಗಳನ್ನು ಶನಿವಾರ ಉದ್ಘಾಟಿಸಿದ ಬಳಿಕ ಕಾರ್ಯಕ್ರಮದಲ್ಲಿ ಮಾತನಾಡಿ, ಶಿವಮೊಗ್ಗದ ಜನನಿಬಿಡ ಸ್ಥಳಗಳಲ್ಲಿ ಇಂದಿರಾ ಕ್ಯಾಂಟೀನ್ ಅವಶ್ಯವಿದ್ದರೆ ಕೂಡಲೇ ಸ್ಥಳೀಯ ಆಡಳಿತದಿಂದ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದರೆ ಮತ್ತಷ್ಟು ಇಂದಿರಾ ಕ್ಯಾಂಟೀನ್ ಆರಂಭಿಸಲಾಗುವುದು ಎಂದು ತಿಳಿಸಿದರು.
ಹಸಿವುಮುಕ್ತ ಕರ್ನಾಟಕ ನಿರ್ಮಾಣ, ಬಡವರು ಮತ್ತು ಮಧ್ಯಮ ವರ್ಗದವರಿಗೆ ಕೈಗೆಟುಕುವ ದರದಲ್ಲಿ ಆಹಾರ ನೀಡುವುದು.ನಗರ ಪ್ರದೇಶದ ಬಡವರಿಗೆ ಆಹಾರ ಒದಗಿಸುವ ಸದುದ್ದೇಶದಿಂದ ಕಾಂಗ್ರೆಸ್ ಸರ್ಕಾರ ಇಂದಿರಾ ಕ್ಯಾಂಟೀನ್ ಅನುಷ್ಠಾನಗೊಳಿಸಿದೆ. ಇತ್ತೀಚೆಗೆ ಮತ್ತಷ್ಟು ಹೊಸ ಇಂದಿರಾ ಕ್ಯಾಂಟೀನ್‌ಗಳ ಆರಂಭಕ್ಕೆ ರಾಜ್ಯ ಸರ್ಕಾರ ಅನುಮೋದನೆ ನೀಡಿದೆ ಎಂದರು.
ಇಂದಿರಾ ಕ್ಯಾಂಟೀನ್‌ನಲ್ಲಿ ಸಾರ್ವಜನಿಕರಿಗೆ ವಿತರಿಸುವ ಆಹಾರ ಗುಣಮಟ್ಟ ಇರಬೇಕು. ಮೆಗ್ಗಾನ್ ಆಸ್ಪತ್ರೆಗೆ ಪ್ರತಿದಿನ ಸಹಸ್ರಾರು ಜನರು ಆಗಮಿಸುತ್ತಿದ್ದು, ಅವರಿಗೆ ಕಡಿಮೆ ವೆಚ್ಚದಲ್ಲಿ ಗುಣಮಟ್ಟದ ಆಹಾರ ದೊರೆತಲ್ಲಿ ಅನುಕೂಲವಾಗಲಿದೆ ಎಂದು ಹೇಳಿದರು.
ವಿಧಾನ ಪರಿಷತ್ ಸದಸ್ಯೆ ಬಲ್ಕಿಶ್ ಬಾನು, ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ, ಜಿಪಂ ಸಿಇಒ ಎನ್.ಹೇಮಂತ್, ಎಸ್ಪಿ ಬಿ.ನಿಖಿಲ್, ಅಪರ ಜಿಲ್ಲಾಧಿಕಾರಿ ವಿ.ಅಭಿಷೇಕ್, ನಗರಪಾಲಿಕೆ ಆಯುಕ್ತ ಕೆ.ಮಾಯಣ್ಣಗೌಡ, ವಿಧಾನ ಪರಿಷತ್ ಮಾಜಿ ಸದಸ್ಯ ಆರ್.ಪ್ರಸನ್ನಕುಮಾರ್, ಜಿಪಂ ಮಾಜಿ ಅಧ್ಯಕ್ಷ ಕಲಗೋಡು ರತ್ನಾಕರ ಇತರರಿದ್ದರು.
ಶಿವಮೊಗ್ಗ ನಗರ ಸೇರಿ ಜಿಲ್ಲೆಯ ವಿವಿಧ ಕೊಳಚೆ ಪ್ರದೇಶಗಳಲ್ಲಿನ ಅರ್ಹ ಬಡವರಿಗೆ ಹಕ್ಕುಪತ್ರ ವಿತರಿಸಲು ಅಗತ್ಯ ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ. ನಗರದ 2,000 ಜನರಿಗೆ ಹಕ್ಕುಪತ್ರ ವಿತರಿಸಲು ಕಾರ್ಯಕ್ರಮ ರೂಪಿಸಲಾಗುವುದು.