ಶಿಕಾರಿಪುರದ ಕುಮದ್ವತಿ ವಾಣಿಜ್ಯ ಮತ್ತು ವಿಜ್ಞಾನ ಪದವಿಪೂರ್ವ ಕಾಲೇಜಿನಲ್ಲಿ ಏರ್ಪಡಿಸಿದ್ದ ರಸಪ್ರಶ್ನೆ ಕಾರ್ಯಕ್ರಮದಲ್ಲಿ ಡಾ. ಎಂ.ವೀರೇಂದ್ರ, ಎಚ್.ಡಿ.ಪ್ರಶಾಂತ್, ಚಂದ್ರಶೇಖರ್, ಶಿವರಾಜ್ ಇತರರಿದ್ದರು. 
ಶಿವಮೊಗ್ಗ

ಸ್ಪಷ್ಟ ಗುರಿಯೊಂದಿಗೆ ಮುನ್ನಡೆಯಿರಿ

ಸೋಮಶೇಖರ ಎನ್
ಶಿಕಾರಿಪುರ: ಪರಿಶ್ರಮ ಹಾಗೂ ಸ್ಪಷ್ಟ ಗುರಿಯೊಂದಿಗೆ ಮುನ್ನಡೆದಾಗ ಯಶಸ್ಸು ಲಭಿಸುತ್ತದೆ ಎಂದು ಕುಮದ್ವತಿ ವಿಜ್ಞಾನ ಮತ್ತು ವಾಣಿಜ್ಯ ಪದವಿಪೂರ್ವ ಕಾಲೇಜಿನ ಪ್ರಾಚಾರ್ಯ ಡಾ. ವೀರೇಂದ್ರ ಹೇಳಿದರು.
ಪಟ್ಟಣದ ಕುಮದ್ವತಿ ವಿಜ್ಞಾನ ಮತ್ತು ವಾಣಿಜ್ಯ ಪದವಿಪೂರ್ವ ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗೆ   ಆಯೋಜಿಸಿದ್ದ ರಸಪ್ರಶ್ನೆ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿ, ಶಿಕ್ಷಣ ಪಡೆಯುವುದರಿಂದ ಉತ್ತಮ ಬದುಕು ರೂಪಿಸಿಕೊಳ್ಳಬಹುದು. ಸಾಮಾಜಿಕ ಕಳಕಳಿ ಹೆಚ್ಚಾಗುತ್ತದೆ ಎಂದು ತಿಳಿಸಿದರು.
ಶಿಕ್ಷಣದಲ್ಲಿ ಹೊಸ ಆವಿಷ್ಕಾರ ಆಗುತ್ತಿದ್ದು, ಅಧ್ಯಯನದ ಜತೆ ಸ್ಪರ್ಧಾತ್ಮಕ ಜಗತ್ತಿನಲ್ಲಿ ಸ್ಪರ್ಧಿಸಲು ಪೂರಕ ಸಿದ್ಧತೆ ನಡೆಸಬೇಕು. ರಸಪ್ರಶ್ನೆ ಕಾರ್ಯಕ್ರಮಗಳಲ್ಲಿ ಭಾಗವಹಿಸುವುದರಿಂದ ಕಲಿಕಾ ಕೌಶಲ ವೃದ್ಧಿಸುತ್ತದೆ. ಗುರುವಿನ ಮಾರ್ಗದರ್ಶನದಿಂದ ಯಶಸ್ಸಿನ ಹಾದಿಯಲ್ಲಿ ಸಾಗಬೇಕು ಎಂದರು.
ಕುಮದ್ವತಿ ಕೇಂದ್ರೀಯ ವಸತಿ ಶಾಲೆ ಪ್ರಾಚಾರ್ಯ ಎಚ್.ಡಿ.ಪ್ರಶಾಂತ್ ತೀರ್ಪುಗಾರರಾಗಿ ಕಾರ್ಯನಿರ್ವಹಿಸಿದರು. ಚಂದ್ರಶೇಖರ್, ಶಿವರಾಜ್, ಯೋಗರಾಜ್, ದೇವರಾಜ್, ನಳಿನಾ ಪಾಟೀಲ್, ಪ್ರೇಮಾ, ಸುಪ್ರಿಯಾ ಮತ್ತು ಪೂಜಾ ಇತರರಿದ್ದರು.