ಮೆಗ್ಗಾನ್ ಆಸ್ಪತ್ರೆಯಲ್ಲಿ ಸಂಸದ ಬಿ.ವೈ.ರಾಘವೇಂದ್ರ ಅವರು ಗಾಯಾಳು ಮಹಿಳೆಯ ಆರೋಗ್ಯ ವಿಚಾರಿಸಿದರು.
ಶಿವಮೊಗ್ಗ: ಶಿಕಾರಿಪುರ(Shikaripura)ದಲ್ಲಿ ಖಾಸಗಿ ಬಸ್ ಪಲ್ಟಿಯಾಗಿ ಗಂಭೀರವಾಗಿ ಗಾಯಗೊಂಡು ಮೆಗ್ಗಾನ್ ಆಸ್ಪತ್ರೆಯಲ್ಲಿ ದಾಖಲಾಗಿರುವ ಪ್ರಯಾಣಿಕರ ಆರೋಗ್ಯವನ್ನು ಸಂಸದ ಬಿ.ವೈ.ರಾಘವೇಂದ್ರ ವಿಚಾರಿಸಿದರು.
ಖಾಸಗಿ ಬಸ್(Private bus) ಅಪಘಾತದ ಸುದ್ದಿ ತಿಳಿದು ಆಘಾತವಾಯಿತು. ಗಾಯಾಳುಗಳಿಗೆ ಅತ್ಯುತ್ತಮ ವೈದ್ಯಕೀಯ ಸೇವೆ ಒದಗಿಸುವಂತೆ ಮೆಗ್ಗಾನ್ ಆಸ್ಪತ್ರೆಯ ವೈದ್ಯರಿಗೆ ಸೂಚಿಸಲಾಗಿದೆ ಎಂದು ಸುದ್ದಿಗಾರರಿಗೆ ತಿಳಿಸಿದರು.
ಶಿವಮೊಗ್ಗದಿಂದ ಶಿಕಾರಿಪುರಕ್ಕೆ ಹೋಗುವಾಗ ಬೈಕ್(Baik)ಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಬಸ್ ಪಲ್ಟಿಯಾಗಿದೆ. 25ರಿಂದ 30 ಪ್ರಯಾಣಿಕರಿದ್ದರು ಎನ್ನಲಾಗಿದ್ದು, ಗರ್ಭಿಣಿ ಸೇರಿ ಮೂವರು ಸರ್ಜಿ ಆಸ್ಪತ್ರೆ ಮತ್ತು 9 ಪ್ರಯಾಣಿಕರು ಮೆಗ್ಗಾನ್ ಆಸ್ಪತ್ರೆ(Meggan Hospital)ಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅದೃಷ್ಟವಶಾತ್ ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ವೈಯಕ್ತಿಕವಾಗಿ ಮತ್ತು ಬಸ್ ಸಂಸ್ಥೆಯೊಂದಿಗೆ ಚರ್ಚಿಸಿ ಗಾಯಾಳುಗಳಿಗೆ ಪರಿಹಾರ ನೀಡುವ ಬಗ್ಗೆ ಚರ್ಚಿಸಲಾಗುವುದು ಎಂದು ಹೇಳಿದರು.