ಕೆಲಸಕ್ಕೆ ಸರಿಯಾದ ವೇತನ ನೀಡುವಂತೆ ಆಗ್ರಹಿಸಿ ಅಂಗನವಾಡಿ ಕಾರ್ಯಕರ್ತೆಯರು ಶಿಕಾರಿಪುರ ತಾಪಂ ಕಚೇರಿ ಎದುರು ಪ್ರತಿಭಟನೆ ನಡೆಸಿದರು. ಶೈಲಜಾ, ದೀಪಾ, ಅನಿತಾ, ಸುಮಿತ್ರಾ, ನೇತ್ರಾ, ನೀಲಮ್ಮ ಇತರರಿದ್ದರು.
ಶಿಕಾರಿಪುರ: ಆಳುವ ಸರ್ಕಾರಗಳು ಅಂಗನವಾಡಿ ಕಾರ್ಯಕರ್ತೆಯರ ಸೇವೆಯನ್ನು ಪರಿಗಣಿಸುತ್ತಿಲ್ಲ. ಅವರ ಕೆಲಸಕ್ಕೆ ಸರಿಯಾದ ವೇತನ ನೀಡಬೇಕೆಂದು ಆಗ್ರಹಿಸಿ ಅಂಗನವಾಡಿ ಸಿಬ್ಬಂದಿ ತಾಲೂಕು ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ಅಂಗನವಾಡಿ ಕಾರ್ಯಕರ್ತರು ತಮ್ಮ ಕೆಲಸವನ್ನು ಸಮರ್ಥವಾಗಿ ನಿರ್ವಹಿಸುತ್ತಿದ್ದಾರೆ. ಕೇಂದ್ರ ಸರ್ಕಾರ ಕಳೆದ ಹತ್ತು ವರ್ಷಗಳಿಂದ ಇದುವರೆಗೂ ನೌಕರರಿಗೆ ವೇತನ ಹೆಚ್ಚಿಸದೆ ಅಲ್ಪ ಪ್ರಮಾಣದ ವೇತನದಲ್ಲಿಯೇ ನಮ್ಮನ್ನು ಹೆಚ್ಚಿನ ಪ್ರಮಾಣದಲ್ಲಿ ದುಡಿಸಿಕೊಳ್ಳುತ್ತಿದ್ದಾರೆ ಎಂದು ಅಂಗನವಾಡಿ ನೌಕರರ ಸಂದ ಜಿಲ್ಲಾ ಟಕದ ಅಧ್ಯೆ ಜಿ.ಶೈಲಜಾ ದೂರಿದರು.
ಶಿಣ ಇಲಾಖೆಯಿಂದ ಪ್ರಾಥಮಿಕ ಶಾಲೆಗಳಲ್ಲಿ ನಡೆಸುತ್ತಿರುವ ಎಲ್ಕೆಜಿ, ಯುಕೆಜಿ ಸ್ಥಗಿತಗೊಳಿಸಿ ಅಂಗನವಾಡಿ ಕೇಂದ್ರಗಳಲ್ಲಿಯೇ ನಡೆಸಬೇಕು. ಅದಕ್ಕೆ ಅಗತ್ಯವಿರುವ ಬಜೆಟ್ ಕೊಡಬೇಕು. ಐಸಿಡಿಎಸ್ ಯೋಜನೆಯನ್ನು ಕಾಯಂ ಮಾಡಬೇಕು. ಕಾಯಂ ಮಾಡುವವರೆಗೆ ಪ್ರತ್ಯೇಕ ನಿರ್ದೇಶನಾಲಯ ರಚಿಸಬೇಕು. ಎ್ಆರ್ಎಸ್ ರದ್ದು ಮಾಡಬೇಕು. ಎಲ್ಲ ಅಂಗನವಾಡಿ ಕೇಂದ್ರಗಳಲ್ಲಿ ವೈಫೈ ವ್ಯವಸ್ಥೆ ನೀಡಬೇಕಲ್ಲದೆ, ಅಂಗನವಾಡಿ ಕಾರ್ಯಕರ್ತರು ಮತ್ತು ಸಹಾಯಕರನ್ನು ಚುನಾವಣಾ ಸಂದರ್ಭ ಬಿಎಲ್ಒಗಳನ್ನಾಗಿ ಮಾಡಬಾರದು ಎಂದು ಆಗ್ರಹಿಸಿದರು.