ರಸ್ತೆ ಅಪಘಾತದಲ್ಲಿ ಮೃತಪಟ್ಟ ಕಿರಣ್-ಸೌಮ್ಯ ದಂಪತಿ. 
ಶಿವಮೊಗ್ಗ

ಭೀಕರ ರಸ್ತೆ ಅಪಘಾತದಲ್ಲಿ ನವದಂಪತಿ ಸಾವು Road accident

ಶಿವಮೊಗ್ಗ: ನಗರದ ಹೊರವಲಯದ ರಿಂಗ್ ರಸ್ತೆಯಲ್ಲಿ ಶನಿವಾರ ತಡರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ನವದಂಪತಿ ಸ್ಥಳದಲ್ಲೇ ಮೃತಪಟಿದ್ದಾರೆ.

ಶಿವಮೊಗ್ಗ: ನಗರದ ಹೊರವಲಯದ ರಿಂಗ್ ರಸ್ತೆಯಲ್ಲಿ ಶನಿವಾರ ತಡರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ನವದಂಪತಿ ಸ್ಥಳದಲ್ಲೇ ಮೃತಪಟಿದ್ದಾರೆ.

ಶರಾವತಿ ನಗರದ ಜಿ.ಕಿರಣ್ (28) ಹಾಗೂ ಸೌಮ್ಯ (22) ಮೃತ ದಂಪತಿ. ಕಿರಣ್ ಶಿವಮೊಗ್ಗ ಮಹಾನಗರ ಪಾಲಿಕೆಯಲ್ಲಿ ಹೊರಗುತ್ತಿಗೆ ಕಾರ್ಮಿಕನಾಗಿದ್ದು, ಕಿರಣ್ ಮತ್ತು ಸೌಮ್ಯ ಮದುವೆಯಾಗಿ ಕೇವಲ ಒಂದೂವರೆ ತಿಂಗಳು ಕಳೆದಿತ್ತು.

ಶರಾವತಿನಗರದ ಮನೆಯಿಂದ ಪತ್ನಿ ಸೌಮ್ಯ ಅವರ ತವರು ಮನೆಯಾದ ಗೋವಿಂದಪುರಕ್ಕೆ ಸ್ಕೂಟಿಯಲ್ಲಿ ತೆರಳುತ್ತಿದ್ದರು. ಈ ವೇಳೆ ಸಾಗರ ರಸ್ತೆ ಬಳಿಯ ರಿಂಗ್ ರಸ್ತೆಯಲ್ಲಿ ಕಾರು ಮತ್ತು ಸ್ಕೂಟಿ ನಡುವೆ ಅಪಘಾತವಾಗಿದೆ. ಅಪಘಾತದ ರಭಸಕ್ಕೆ ಸ್ಕೂಟಿಯಲ್ಲಿದ್ದ ನವದಂಪತಿ ಗಂಭೀರವಾಗಿ ಗಾಯಗೊಂಡು ದುರ್ಮರಣಕ್ಕೀಡಾಗಿದ್ದಾರೆ.

ಮದುವೆಯ ಸಂಭ್ರಮದಲ್ಲಿದ್ದ ಎರಡೂ ಕುಟುಂಬಗಳಲ್ಲಿ ಈ ದುರ್ಘಟನೆಯಿಂದ ಸೂತಕದ ಛಾಯೆ ಆವರಿಸಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ತುಂಗಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.