ಡಿಸಿ ಕಚೇರಿಯಲ್ಲಿ ಭಾರತ್ ಜೋಡೋ ಯುವ ಸಂಘ ಸ್ಥಾಪನೆ ಕುರಿತು ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಪೂರ್ವಭಾವಿ ಸಭೆ ನಡೆಸಿದರು. ಎನ್.ಹೇಮಂತ್, ವಿ.ಅಭಿಷೇಕ್, ರೇಖ್ಯಾನಾಯ್ಕ್ ಇದ್ದರು. 
ಶಿವಮೊಗ್ಗ

‘ಭಾರತ್ ಜೋಡೋ ಯುವ ಸಂಘ’ಗಳ ನೋಂದಣಿಗೆ ಸೂಚನೆ | Bharat Jodo

ಪ್ರಮುಖ ಮುಖ್ಯಾಂಶಗಳು

  • ಯುವ ಸಂಘ ಸ್ಥಾಪನೆ ಕುರಿತು ಡಿಸಿ ಕಚೇರಿಯಲ್ಲಿ ಪೂರ್ವಭಾವಿ ಸಭೆ
  • 6ರಂದು ಅಧಿಕೃತವಾಗಿ ನೋಂದಣಿ ಆ್ಯಪ್ ಬಿಡುಗಡೆ ಮಾಡಲು ನಿರ್ಧಾರ
  • ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಸೂಚನೆ
ಶಿವಮೊಗ್ಗ: ಯುವಜನರಲ್ಲಿ ಕ್ರೀಡೆ, ಸಂಸ್ಕೃತಿ, ವೈಜ್ಞಾನಿಕ ಮನೋಭಾವ ಹಾಗೂ ಸಾಮುದಾಯಿಕ-ಸಾಮಾಜಿಕ ಸಾಮರಸ್ಯವನ್ನು ಉತ್ತೇಜಿಸುವ ಉದ್ದೇಶದಿಂದ ರಾಜ್ಯಾದ್ಯಂತ ಹಮ್ಮಿಕೊಳ್ಳಲಾಗಿರುವ ಭಾರತ್ ಜೋಡೋ ಯುವ ಸಂಘ(Bharat Jodo Youth Association)ಗಳ ಸ್ಥಾಪನೆ ಯೋಜನೆಗೆ ಜಿಲ್ಲೆಯಲ್ಲಿ ಚಾಲನೆ ನೀಡಲಾಗಿದ್ದು ಅ.15ರೊಳಗೆ ಸಂಘಗಳ ನೋಂದಣಿ ಮಾಡಿಸುವಂತೆ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಡಿಸಿ ಕಚೇರಿಯಲ್ಲಿ ಸೋಮವಾರ ಭಾರತ್ ಜೋಡೋ ಯುವ ಸಂಘ ಸ್ಥಾಪನೆ ಕುರಿತು ಪೂರ್ವಭಾವಿ ಸಭೆ(Preparatory Meeting) ನಡೆಸಿದ ಅವರು, ಆಯಾ ಸ್ಥಳೀಯ ಸಂಸ್ಥೆಗಳು ಹಾಗೂ ನಗರ ಸಂಸ್ಥೆಗಳ ವ್ಯಾಪ್ತಿಯಲ್ಲಿ ಯುವ ಸಂಘಗಳ ಸ್ಥಾಪನೆ ಕುರಿತು ತಕ್ಷಣದಿಂದಲೇ ಪ್ರಚಾರ ಕೈಗೊಳ್ಳಲು ಹಾಗೂ ಪ್ರಥಮ ಹಂತವಾಗಿ ಆ.6ರಂದು ಅಧಿಕೃತವಾಗಿ ನೋಂದಣಿ ಆ್ಯಪ್(Registration app) ಬಿಡುಗಡೆ ಮಾಡಲು ನಿರ್ಧರಿಸಲಾಗಿದೆ ಎಂದರು.
ಆ.15ರೊಳಗೆ ಎಲ್ಲ ಗ್ರಾಪಂ, ಪಟ್ಟಣ ಪಂಚಾಯತ್, ಪುರಸಭೆ, ನಗರಸಭೆ ಹಾಗೂ ಮಹಾನಗರ ಪಾಲಿಕೆಗಳ ವ್ಯಾಪ್ತಿಯಲ್ಲಿ ಕನಿಷ್ಠ 100 ಸದಸ್ಯರನ್ನೊಳಗೊಂಡ ಯುವ ಸಂಘಗಳನ್ನು ರಚನೆ ಮಾಡಲು ಸೂಚಿಸಿದರು. ಈ ಯೋಜನೆಯನ್ನು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ(Youth Empowerment and Sports Department) ಮೂಲಕ ಅನುಷ್ಠಾನಗೊಳಿಸಲಾಗುತ್ತಿದ್ದು, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ಇಲಾಖೆ, ನಗರಾಭಿವೃದ್ಧಿ ಇಲಾಖೆ, ಕಂದಾಯ ಇಲಾಖೆ ಹಾಗೂ ಶಿಕ್ಷಣ ಇಲಾಖೆಗಳು ಪೂರ್ಣ ಸಹಕಾರ ನೀಡಲಿವೆ ಎಂದರು.
ಜಿಪಂ ಸಿಇಒ ಎನ್.ಹೇಮಂತ್, ಎಡಿಸಿ ವಿ.ಅಭಿಷೇಕ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ರೇಖ್ಯಾನಾಯ್ಕ್ ಹಾಗೂ ಸಂಬಂಧಿಸಿದ ಇಲಾಖಾ ಅಧಿಕಾರಿಗಳು ಉಪಸ್ಥಿತರಿದ್ದರು.