ಸಾಗರ ತಾಲೂಕಿನ ಕೋಳೂರು ಗ್ರಾಪಂ ಆವರಣದಲ್ಲಿ ಬೇಸೂರು ಅಣು ವಿದ್ಯುತ್ ಸ್ಥಾವರ ವಿರೋಧಿಸಿ ಗ್ರಾಮಸ್ಥರು ಶಾಸಕ ಗೋಪಾಲಕೃಷ್ಣ ಬೇಳೂರು ಅವರಿಗೆ ಮನವಿ ಸಲ್ಲಿಸಿದರು. ಪ್ರದಿಪ್, ಶಿವಪ್ರಕಾಶ್, ವೀರೇಶ್ಕುಮಾರ್, ಇಂದೂಧರ ಇತರರಿದ್ದರು.
- ಯೋಜನೆ ಸ್ಥಗಿತಗೊಳಿಸದಿದ್ದರೆ ಹೋರಾಟ ಅನಿವಾರ್ಯ
- ಕೋಳೂರು ಗ್ರಾಮ ಪಂಚಾಯಿತಿ ಆವರಣದಲ್ಲಿ ಗ್ರಾಮಸಭೆ
- ಶಾಸಕ ಗೋಪಾಲಕೃಷ್ಣ ಬೇಳೂರು ಹೇಳಿಕೆ
ಸಾಗರ: ತಾಲೂಕಿನ ಬೇಸೂರಿನಲ್ಲಿ ಪ್ರಸ್ತಾವಿತ ಅಣು ವಿದ್ಯುತ್ ಸ್ಥಾವರ ಯೋಜನೆಯನ್ನು ಕೇಂದ್ರ ಮತ್ತು ರಾಜ್ಯ ಸರ್ಕಾರ ತಣ ಕೈಬಿಡಬೇಕು. ಸ್ಥಳಿಯರ ಹಿತರಣೆಗಾಗಿ ನಾನು ಎಂಥದ್ದೇ ಹೋರಾಟಕ್ಕೂ ಸಿದ್ಧನಿದ್ದೇನೆ. ಒಂದೊಮ್ಮೆ ಯೋಜನೆ ಅನುಷ್ಠಾನಕ್ಕೆ ಮುಂದಾದರೆ ನಾನು ಸರ್ಕಾರದ ವಿರುದ್ಧವೇ ನಿಲ್ಲಲು ಸಿದ್ಧ ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ನಿಲುವು ವ್ಯಕ್ತಪಡಿಸಿದರು.
ಸಾಗರ ತಾಲೂಕಿನ ಕೋಳೂರು ಗ್ರಾಮ ಪಂಚಾಯಿತಿ ಆವರಣದಲ್ಲಿ ಸೋಮವಾರ ಬೇಸೂರು ಅಣು ವಿದ್ಯುತ್ ಸ್ಥಾವರ ವಿರೋಧಿಸಿ ಆಯೋಜಿಸಿದ್ದ ಗ್ರಾಮ ಸಭೆಯಲ್ಲಿ ಗ್ರಾಮಸ್ಥರು ನೀಡಿದ ಮನವಿ ಸ್ವೀಕರಿಸಿ ಮಾತನಾಡಿದರು.
ಮಲೆನಾಡಿನ ಸಂಪತ್ತು ನಾಶ ಮಾಡಿ ಪ್ರಕೃತಿ ವಿನಾಶದ ಯೋಜನೆಯನ್ನು ಯಾವ ಕಾರಣಕ್ಕೂ ಜಾರಿಗೊಳಿಸಲು ಬಿಡುವುದಿಲ್ಲ. ಈ ಭಾಗದ ಜನರು ನಾಡಿಗೆ ವಿದ್ಯುತ್ ನೀಡಲು ಎರಡು ಬಾರಿ ಸರ್ವಸ್ವವನ್ನೂ ಕಳೆದುಕೊಂಡು ಈಗ ಹೊಸ ಬದುಕು ಕಟ್ಟಿಕೊಳ್ಳುತ್ತಿದ್ದಾರೆ. ಇಂತಹ ಹೊತ್ತಿನಲ್ಲಿ ಅವರ ಮೇಲೆ ಮತ್ತೊಂದು ಮಾರಕ ಯೋಜನೆಯ ಹೊರೆ ಹಾಕುವುದನ್ನು ಸಹಿಸುವುದಿಲ್ಲ ಎಂದರು.
ಬೇಸೂರಿನಲ್ಲಿ ಅಣು ವಿದ್ಯುತ್ ಸ್ಥಾವರ ಬೇಡ ಎಂದು ಮುಖ್ಯಮಂತ್ರಿಗಳು, ಕಂದಾಯ ಸಚಿವರು, ಪ್ರಧಾನ ಕಾರ್ಯದರ್ಶಿ ಅವರಿಗೆ ಮನವಿ ಸಲ್ಲಿಸಿದ್ದೇನೆ. ಇದಕ್ಕೆ ಎಲ್ಲರೂ ಪೂರಕವಾಗಿ ಸ್ಪಂದಿಸಿದ್ದಾರೆ. ಯೋಜನೆ ಕೈಬಿಡುವಂತೆ ಸಂಸದ ಬಿ.ವೈ.ರಾವೇಂದ್ರ ಸಹ ಕೇಂದ್ರದ ಮೇಲೆ ಒತ್ತಡ ತರಬೇಕು ಎಂದು ಆಗ್ರಹಿಸಿದರು.
ಮಲೆನಾಡು ಭಾಗದ ಮೇಲೆ ಇಂತಹ ಯೋಜನೆಯಿಂದ ಆಗುವ ದುಷ್ಪರಿಣಾಮ ಕುರಿತು ಸಂಸದರು ಸಂಬಂಧಿಸಿದ ಸಚಿವರಿಗೆ ಮನವರಿಕೆ ಮಾಡಿಕೊಡುವ ಜತೆಗೆ ಮುಳುಗಡೆ ಸಂತ್ರಸ್ತರ ಬವಣೆಯನ್ನು ಕೇಂದ್ರಕ್ಕೆ ತಿಳಿಸಬೇಕು. ಅಣು ಸ್ಥಾವರ ಮಾಡದಂತೆ ಈ ಭಾಗದ 9 ಗ್ರಾಮ ಪಂಚಾಯಿತಿಗಳಲ್ಲಿ ರ್ನಿಣಯ ಕೈಗೊಳ್ಳಲಾಗುತ್ತಿದೆ. ಮಂಗಳವಾರ ಖುದ್ದಾಗಿ ಮುಖ್ಯಮಂತ್ರಿಗಳನ್ನು, ರಾಜ್ಯದ ಪ್ರಧಾನ ಕಾರ್ಯದರ್ಶಿಯನ್ನು ಭೇಟಿಯಾಗಿ ಮನವಿ ಸಲ್ಲಿಸುತ್ತೇನೆ ಎಂದರು.
ಸಾಗರ ತಹಸೀಲ್ದಾರ್ ಪ್ರದಿಪ್, ತಾಪಂ ಇಒ ಶಿವಪ್ರಕಾಶ್ ಇತರರಿದ್ದರು.
ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ. ಜನಸಾಮಾನ್ಯರಿಗೆ ಮಾರಕವಾಗುವ ಯೋಜನೆಯನ್ನು ಯಾವುದೇ ಕಾರಣಕ್ಕೂ ಅನುಷ್ಠಾನಗೊಳಿಸಲು ಬಿಡುವುದಿಲ್ಲ. ಯೋಜನೆಯಿಂದ ನಷ್ಟವೇ ಹೆಚ್ಚಿದ್ದು, ಈ ಬಗ್ಗೆ ಜಿಲ್ಲಾಧಿಕಾರಿಗೆ ನೈಜ ವರದಿ ನೀಡಲಾಗುತ್ತದೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಹೋರಾಟ ನಿಮ್ಮ ಹಕ್ಕು. ಆದರೆ ಕಾನೂನಿನ ಚೌಕಟ್ಟಿನೊಳಗೆ ಶಾಂತಿಯುತ ಹೋರಾಟ ನಡೆಸಿ.
> ವೀರೇಶ್ಕುಮಾರ್, ಸಾಗರ ಉಪವಿಭಾಗಾಧಿಕಾರಿ
ಮೇ 7ರಂದು ಆಯೋಜಿಸಿರುವ ಪ್ರತಿಭಟನೆಗೆ ಎಲ್ಲರೂ ಪಾಲ್ಗೊಳ್ಳಬೇಕು. ಅಂದು ಬೆಳಗ್ಗೆ 10 ಗಂಟೆಗೆ ಶಿವಪ್ಪ ನಾಯಕ ವೃತ್ತದಿಂದ ಮೆರವಣಿಗೆ ಆರಂಭವಾಗಿ ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ನಗರಸಭೆ ರಂಗಮಂದಿರದಲ್ಲಿ ಪ್ರತಿಭಟನಾ ಸಭೆ ನಡೆಸಲಾಗುವುದು.
> ಬಿ.ಎ.ಇಂದೂಧರ, ಹೋರಾಟ ಸಮಿತಿ ಅಧ್ಯ